Site icon Vistara News

Kidwai Hospital: ಔಷಧ ಖರೀದಿಯಲ್ಲಿ ಅಕ್ರಮ; ಕಿದ್ವಾಯಿ ಆಸ್ಪತ್ರೆ ವಿರುದ್ಧ ತನಿಖೆಗೆ ಸಿಎಂ ಆದೇಶ

Kidwai Hospital bangalore

ಬೆಂಗಳೂರು: ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ (Kidwai Hospital) ಔಷಧ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತಂಡ ರಚಿಸಿ ಎರಡು ವಾರದೊಳಗೆ ವರದಿ ಸಲ್ಲಿಸಲು ಸಿಎಂ ಸೂಚಿಸಿದ್ದಾರೆ.

ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಟೆಂಡರ್ ಮತ್ತು ಔಷಧ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ಸಲ್ಲಿಕೆಯಾಗಿತ್ತು. ಹೀಗಾಗಿ ಸಹಕಾರ ಇಲಾಖೆಯ ಅಧಿಕಾರಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ 2 ವಾರದೊಳಗೆ ಪಾರದರ್ಶಕ ವರದಿ ಸಲ್ಲಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Drought in Karnataka: ಬರ ಘೋಷಣೆ ಮಾನದಂಡಗಳ ಪರಿಷ್ಕರಣೆ ಅಗತ್ಯ: ಸಿಎಂ ಸಿದ್ದರಾಮಯ್ಯ

ವರ್ಗಾವಣೆಗೆ ವಿಶೇಷ ಸಮಿತಿ ರಚನೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷಕರು, ಎಫ್‌ಡಿಎ, ಎಸ್‌ಡಿಎ, ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆ, ನಿಯೋಜನೆ, ಅನ್ಯ ಕಕರ್ತವ್ಯದ ಮೇಲೆ ನೇಮಿಸುವ ಪ್ರಸ್ತಾವನೆ, ಇತರ ಸುಧಾರಣೆಗಳಿಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ಸಲಹಾ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ದಕ್ಷತೆ ಕಾಪಾಡಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಇದರಲ್ಲಿ ಮೈಸೂರು, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕಲ್ಬುರ್ಗಿ, ರಾಯಚೂರು, ಬೆಂಗಳೂರಿನ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಸದಸ್ಯರಾಗಿದ್ದಾರೆ.

ಅಧಿಕಾರಿಗಳ ವರ್ಗಾವಣೆ, ನಿಯೋಜನೆ, ಆಡಳಿತ ಸುಧಾರಣೆಗಾಗಿ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ನೀಡುವ ಶಿಫಾರಸುಗಳ ಆಧಾರದ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಯಾಗಲಿದೆ.

Exit mobile version