Site icon Vistara News

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ISIS Terrorists

ISIS Module In Bellary: Terrorists Plan To Extend Terror Plot Across India, Says NIA Chargesheet

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

Exit mobile version