ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭಾಜನರಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆಯ್ಕೆ ಸಮಿತಿಯು ಈ ಇಬ್ಬರು ಗಣ್ಯರ ಹೆಸರನ್ನು ಗೌರವ ಡಾಕ್ಟರೇಟ್‌ಗೆ (Honorary Doctorate) ಶಿಫಾರಸು ಮಾಡಿತ್ತು. ಇದಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ. ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.
ಕರ್ನಾಟಕ ಬಂದ್‌ನಿಂದ ಘಟಿಕೋತ್ಸವ ಮುಂದೂಡಿಕೆ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29ಕ್ಕೆ ನಿಗದಿಯಾಗಿದ್ದ ಘಟಿಕೋತ್ಸವವನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಶೀಘ್ರದಲ್ಲಿಯೇ ಹೊಸ ದಿನಾಂಕ ನಿಗದಿ ಮಾಡಿ ಘಟಿಕೋತ್ಸವ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಇದನ್ನೂ ಓದಿ | NEP 2020: ಜೈನ್ ವಿವಿಯಲ್ಲಿ ಸೆ.28ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾಗೃತಿಗಾಗಿ ವಿಚಾರಗೋಷ್ಠಿ