Site icon Vistara News

BY Vijayendra: ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ಬಿ.ವೈ. ವಿಜಯೇಂದ್ರ

BY Vijayendra

ರಾಯಚೂರು: ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ. ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದರು.

ನಗರದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮೂವರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಅಂತ ಅವರ ಪಕ್ಷದ ನಾಯಕರೇ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಈ ಸರ್ಕಾರ ಬಂದಮೇಲೆ ಒಂದು ಅಭಿವೃದ್ಧಿ ಕೆಲಸವೂ ಆಗಿಲ್ಲ ಎಂದು ಜನರು ಶಾಪ ಹಾಕುತ್ತಿದ್ದಾರೆ. ಆದರೆ, ಬರಗಾಲದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದಲ್ಲಿ ತ್ರಿಪೇಸ್ ವಿದ್ಯುತ್ ಕೊಡಲು ಸರ್ಕಾರಕ್ಕೆ ಆಗಿಲ್ಲ. ಇದು ಜನ ವಿರೋಧಿ, ಬಡವರ ವಿರೋಧಿ, ರೈತ ವಿರೋಧಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ | BJP Karnataka: ಮಂಡ್ಯ ಟಿಕೆಟ್ ಬಗ್ಗೆ ಶೀಘ್ರ ತೀರ್ಮಾನ; ಸುಮಲತಾ ಜತೆ ಮಾತನಾಡುವೆನೆಂದ ವಿಜಯೇಂದ್ರ

ಅಲ್ಪಸಂಖ್ಯಾತರು ಬೇಸರ ಆಗುತ್ತಾರೆ ಎಂಬ ಭಯ ಅವರಿಗಿದೆ. ಮುಖ್ಯಮಂತ್ರಿ ನಡೆ ನೋಡಿದರೆ ಅಲ್ಪಸಂಖ್ಯಾತರ ಮತವನ್ನಷ್ಟೆ ಪಡೆದು ಅಧಿಕಾರಕ್ಕೆ ಬಂದಿದ್ದಾರಾ ಅಂತ ಜನರು ಪ್ರಶ್ನೆ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಬೇಕು ಎನ್ನುತ್ತಾರೆ. ಮತ್ತೊಂದೆಡೆ ಆಮಂತ್ರಣ ಪತ್ರಿಕೆ ಬಂದಿಲ್ಲ ಎನ್ನುತ್ತಾರೆ. ಯಾರಿಗೆ ಆಹ್ವಾನ ಬಂದಿದೆ, ಅವರು ನಾನು ಹೋಗುವುದಿಲ್ಲ ಎಂದು ತೀರ್ಮಾನ ಮಾಡುತ್ತಾರೆ. ಈ ರೀತಿಯಾಗಿ ದೆಹಲಿಯಿಂದ ಬೆಂಗಳೂರುವರೆಗೆ ಕಾಂಗ್ರೆಸ್ ಸಂಪೂರ್ಣವಾಗಿ ಗೊಂದಲಮಯವಾಗಿದೆ ಎಂದು ಹೇಳಿದರು.

ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಬರುವುದು ಖಾತ್ರಿಯಾಗಿದೆ‌. ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನ ಮಂತ್ರಿ ಆಗದಂತೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಡಾ.ಶಂಭುಲಿಂಗ ಸ್ವಾಮಿ ಡೋಣಗಾಂವ್‌ಗೆ ಟಿಕೆಟ್ ನೀಡುವಂತೆ ಆಗ್ರಹ

ಬೀದರ್ ಲೋಕಸಭಾ ಚುನಾವಣೆಯಲ್ಲಿ ಡಾ.ಶಂಭುಲಿಂಗ ಸ್ವಾಮಿ ಡೋಣಗಾಂವ್ ಶ್ರೀಗಳಿಗೆ ಬಿಜೆಪಿ ಟಿಕೆಟ್ ನೀಡುವಂತೆ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾ. ತಿಂಥಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಜಿಲ್ಲೆಯ ಮಠಾಧೀಶರ ಒಕ್ಕೂಟದಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ | Lok Sabha Election 2024: ಮೈಸೂರಿನಲ್ಲಿ ಮತ್ತೆ ಸ್ಪರ್ಧಿಸಲು ಕುಮಾರಸ್ವಾಮಿ ಬೆಂಬಲ ಕೋರಿದ ಸಂಸದ ಪ್ರತಾಪ್‌ ಸಿಂಹ

ಸಂಸದ ಭಗವಂತ ಖೂಬಾ ಬದಲಿಗೆ ಈ ಬಾರಿ ಖಾವಿಧಾರಿಗಳಿಗೆ ಟಿಕೆಟ್ ನೀಡುವಂತೆ‌ ಒಕ್ಕೂಡ ಒತ್ತಾಯಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಮಠಾಧೀಶರಿಗೆ ಟಿಕೆಟ್ ನೀಡಿದ್ದು, ಅಲ್ಲಿ ಅವರೆಲ್ಲ ಆಯ್ಕೆಯಾಗಿದ್ದಾರೆ. ಅದೇ ರೀತಿ ಬೀದರ್ ಜಿಲ್ಲೆಯಲ್ಲಿ ಈ ಬಾರಿ ನಮಗೆ ಟಿಕೆಟ್ ನೀಡಬೇಕು ಎಂದು ಡೋಣಗಾಂವ್ ಶ್ರೀ ಒತ್ತಾಯಿಸಿದ್ದಾರೆ.

Exit mobile version