Site icon Vistara News

J P Nadda: ಫೆ.20ರಂದು ಜೆ.ಪಿ.ನಡ್ಡಾ ಉಡುಪಿ, ಚಿಕ್ಕಮಗಳೂರು ಜಿಲ್ಲಾ ಪ್ರವಾಸ

J P Nadda to visit Udupi, Chikkamagaluru, Hassan districts from Feb 20

ಚಿಕ್ಕಮಗಳೂರು: ಫೆ.19ರಿಂದ 21ರವರೆಗೆ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J P Nadda) ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.

ಫೆ.19ರಂದು ಭಾನುವಾರ ರಾತ್ರಿ ಮಂಗಳೂರಿನಲ್ಲಿ ಬಂದು ವಾಸ್ತವ್ಯ ಹೂಡಿರುವ ನಡ್ಡಾ ಅವರು, ಫೆ.20ರಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ಆಗಮಿಸಲಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು 9:30ರ ಸುಮಾರಿಗೆ ಆದಿ ಉಡುಪಿ ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಬಳಿಕ 9.40 ಸುಮಾರಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಜೆ.ಪಿ.ನಡ್ಡಾ ಅವರು ಶ್ರೀಕೃಷ್ಣನ ದರ್ಶನ ಪಡೆದು, ಶ್ರೀಕೃಷ್ಣ ಮಠದಲ್ಲಿ ಸ್ಚಾಮೀಜಿಯವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ನಂತರ 11 ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲೆ ಬೂತ್ ಕಮಿಟಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ಜಿಲ್ಲೆಯ 1,111 ಬೂತ್‌ ಸಮಿತಿಗಳ ತಂಡದ 13,332 ಸದಸ್ಯರು ಪೂರ್ಣ ಪ್ರಮಾಣದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಫೆ.16ರಂದು ಕಾಪು, ಕಾರ್ಕಳ, ಫೆ.17ರಂದು ಬೈಂದೂರು, ಕುಂದಾಪುರ, ಉಡುಪಿ ನಗರ, ಉಡುಪಿ ಗ್ರಾಮಾಂತರ ಮಂಡಲಗಳ ಸಭೆ ನಡೆದಿದೆ.

ಸಮಾವೇಶದ ಬಳಿಕ ಮಧ್ಯಾಹ್ನ 1:35ಕ್ಕೆ ಆದಿ ಉಡುಪಿ ಹೆಲಿಫ್ಯಾಡ್ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರದ ಮುಳ್ಳಿಕಟ್ಟೆ ಮೈದಾನದಲ್ಲಿ ಆಯೋಜಿಸಲಾಗಿರುವ ವಿಜಯ ಸಂಕಲ್ಪ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶಕ್ಕೂ ಮೊದಲು ರೋಡ್ ಶೋ ನಡೆಯಲಿದೆ. ಕಾರ್ಯಕರ್ತರ ಹಾಗೂ ಸಾರ್ವಜನಿಕರ ಸಮಾವೇಶದಲ್ಲಿ ಸುಮಾರು 20,000 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಜೆ.ಪಿ.ನಡ್ಡಾ ಅವರು ಚುನಾವಣಾ ತಯಾರಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಸಮಾವೇಶದ ಬಳಿಕ ಸಂಜೆ 3.40 ಕ್ಕೆ ತ್ರಾಸಿ ಹೆಲಿಪ್ಯಾಡ್ ಮೂಲಕ ಚಿಕ್ಕಮಗಳೂರು ತಾಲೂಕು ಕೊಪ್ಪ ಪಟ್ಟಣಕ್ಕೆ ತೆರಳಲಿದ್ದಾರೆ.

ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಕೊಪ್ಪ ಪಟ್ಟಣದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸುಮಾರು 15 ಸಾವಿರಕ್ಕೂ ಅಡಿಕೆ ಬೆಳೆಗಾರರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದ ಬಳಿಕ ರಸ್ತೆಯ ಮೂಲಕ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ. ನಂತರ ಭಾರತಿ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಚನ ಪಡೆಯಲಿದ್ದಾರೆ.

ಇದನ್ನೂ ಓದಿ | Shivaji Jayanti: ಭಾರತ ಚರಿತ್ರೆ ಬದಲಿಸಿದ ಯುಗ ಪುರುಷನೇ ಶಿವಾಜಿ: ಸಿಎಂ ಬೊಮ್ಮಾಯಿ

ಬಳಿಕ ಮಂಗಳವಾರವೂ(ಫೆ.21) ಚಿಕ್ಕಮಗಳೂರಿನಲ್ಲಿ ತಂಗುವ ಜೆಪಿ ನಡ್ಡಾ ಶಾಸಕ ಸಿಟಿ ರವಿ ಮನೆಯಲ್ಲಿ ಉಪಾಹಾರ ಸೇವಿಸಿ ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಕಡೂರು ಹಾಗು ತರೀಕೆರೆ ವಿಧಾನಸಭಾ ಕ್ಷೇತ್ರಗಳ ಟಿಕೆಟ್ ವಿಚಾರವಾಗಿ ಸಮಾಲೋಚನೆ. ಹಾಗೂ ಹಾಸನ- ಚಿಕ್ಕಮಗಳೂರು ರಾಜಕೀಯ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ. ಟಿಕೆಟ್ ಹಂಚಿಕೆ ಗೊಂದಲ ಹಾಗೂ ಮುಂಬರುವ ಚುನಾವಣೆಗೆ ಕೈಗೊಳ್ಳಬಹುದಾದ ಕಾರ್ಯಸೂಚಿಗಳ ಕುರಿತು ಜೆಪಿ ನಡ್ಡಾ ಬಿಜೆಪಿ ಮೂಲಗಳಿಂದ ದೊರೆತಿದೆ.

ಬಳಿಕ ಹಾಸನ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹಾಸನದಲ್ಲಿ ನಡೆಯುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಜೆ.ಪಿ.ನಡ್ಡಾ ಅವರು ಭಾಗಿಯಾಗಲಿದ್ದಾರೆ.

Exit mobile version