jagadish shettar jagadish shettar resigns as MLAJagadish Shettar: 40 ವರ್ಷದ ಬಿಜೆಪಿ ಸಖ್ಯಕ್ಕೆ ಬ್ಯಾಡ್‌ಬೈ ಹೇಳಿದ ಜಗದೀಶ್‌ ಶೆಟ್ಟರ್‌: ಶಾಸಕ ಸ್ಥಾನದಿಂದ ನಿರ್ಗಮನ - Vistara News

ಉತ್ತರ ಕನ್ನಡ

Jagadish Shettar: 40 ವರ್ಷದ ಬಿಜೆಪಿ ಸಖ್ಯಕ್ಕೆ ಬ್ಯಾಡ್‌ಬೈ ಹೇಳಿದ ಜಗದೀಶ್‌ ಶೆಟ್ಟರ್‌: ಶಾಸಕ ಸ್ಥಾನದಿಂದ ನಿರ್ಗಮನ

ಬಿಜೆಪಿ ಟಿಕೆಟ್‌ ಘೋಷಣೆ ನಂತರ ಅನೇಕ ನಾಯಕರು ರಾಜೀನಾಮೆ ನೀಡುತ್ತಿದ್ದು, ಇದೀಗ ಶೆಟ್ಟರ್‌ ಸೇರ್ಪಡೆಯಾಗಿದ್ದಾರೆ.

VISTARANEWS.COM


on

Jagadish Shettar jagadish shettar jagadish shettar resigns as MLA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ಸುಮಾರು 40 ವರ್ಷದ ಬಿಜೆಪಿಯೊಂದಿಗಿನ ಸಖ್ಯಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಬೇಸರಿಂದ ಹೊರನಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆರು ಬಾರಿ ಶಾಸಕರಾಗಿ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿರುವ ಶೆಟ್ಟರ್‌ಗೆ ಟಿಕೆಟ್‌ ತಪ್ಪಿದ್ದು ಇದೀಗ ಪಕ್ಷ ಬಿಡಲು ಕಾರಣವಾಗಿದೆ. ಟಿಕೆಟ್‌ ಘೊಷಣೆಯಾದಾಗ ಮಾತನಾಡಿದ್ದ ಶೆಟ್ಟರ್‌, ಟಿಕೆಟ್‌ ತಪ್ಪಿದ್ದು ಬೇಸರವಲ್ಲ. ಈ ಬಗ್ಗೆ ಎರಡು ಮೂರು ತಿಂಗಳ ಹಿಂದೆಯೇ ತಿಳಿಸಿದ್ದರೆ ಮಾನಸಿಕವಾಗಿ ಸಿದ್ಧವಾಗುತ್ತಿದ್ದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜೀನಾಮೆ ನೀಡುವುದಕ್ಕೂ ಮೊದಲು ಮಾತನಾಡಿದ್ದ ಜಗದೀಶ್‌ ಶೆಟ್ಟರ್‌, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಂತರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಆನಂತರದಲ್ಲಿ ಆಯ್ಕೆಗಳನ್ನು ನೋಡುತ್ತೇನೆ. ಸ್ವತಂತ್ರವಾಗಿ ಸ್ಪರ್ಧಿಸಬೇಕೆ ಅಥವಾ ಪಕ್ಷದಿಂದ ಸ್ಪರ್ಧೆ ಮಾಡಬೇಕೆ ಎಂಬ ಕುರಿತು ಶಿರಸಿಯಿಂದ ವಾಪಸಾದ ನಂತರ ನಿರ್ಧಾರ ಮಾಡುತ್ತೇನೆ ಎಂದಿದ್ದರು.

ಶೆಟ್ಟರ್‌ ರಾಜೀನಾಮೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಎಲ್ಲ ಹಿರಿಯರೂ ಮಾತುಕತೆ ನಡೆಸಿದ್ದರು. ಎಲ್ಲ‌ ಹಂತದ ಮಾತುಕತೆಗಳನ್ನೂ ಶೆಟ್ಟರ್ ಜತೆ ನಡೆಸಿದ್ದರು. ಮಾತುಕತೆ ನಡೆಸಿದರೂ ಅವರು ಹೋಗ್ತಿದಾರೆ. ಅವರ ಮನವೊಲಿಸುವ ಕೆಲಸವನ್ನು ಎಲ್ಲ ಹಿರಿಯರೂ ಮಾಡಿದ್ದಾರೆ.

ಶೆಟ್ಟರ್‌ಗೆ ಎಲ್ಲ ಗೌರವ ಕೊಟ್ಟಿತ್ತು ಪಕ್ಷ. ಎಲ್ಲ ಜವಾಬ್ದಾರಿಗಳನ್ನು ಕೊಟ್ಟಿತ್ತು. ಅವರು ನಮ್ಮಲ್ಲೇ ಉಳ್ಕೋತಾರೆ ಅಂತ ವಿಶ್ವಾಸ ಇತ್ತು. ಶೆಟ್ಟರ್ ಪಕ್ಷ ಬಿಡ್ತಿರೋದರಿಂದ ಪಕ್ಷಕ್ಕೆ ಹಿನ್ನಡೆ ಆಗಿಲ್ಲ ಎಂದರು.

ಎಸ್‌. ಸುರೇಶ್‌ ಕುಮಾರ್‌ ಹಾಗೂ ಜಗದೀಶ್‌ ಶೆಟ್ಟರ್‌ ಒಂದೇ ವಯಸ್ಸಿನವರಾಗಿದ್ದರೂ ಒಬ್ಬರಿಗೆ ಟಿಕೆಟ್‌ ನೀಡಿ ಇನ್ನೊಬ್ಬರಿಗೆ ತಪ್ಪಲು ಕಾರಣ ಏನು ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮಲ್ಲಿ ಸಮುದಾಯದ ಪ್ರಶ್ನೆ ಬರಲ್ಲ. ಎಲ್ಲ ಸಮುದಾಯ ಗುರುತಿಸಿ ಟಿಕೆಟ್ ಕೊಡಲಾಗಿದೆ. ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯದಡಿ ಸ್ಥಾನಮಾನ ಕೊಡಲಾಗಿದೆ. ಲಿಂಗಾಯತರನ್ನು ಗುರುತಿಸಿ ಸಿಎಂ ಮಾಡಿದ್ದು ನಮ್ಮ ಪಕ್ಷ ಮಾತ್ರವೆ ಎಂದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್‌. ಅಶೋಕ್‌, ಪಕ್ಷದಲ್ಲಿರುವ ಎಲ್ಲ ಪೋಸ್ಟ್‌ಗಳನ್ನು ಶೆಟ್ಟರ್ ನೋಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದ್ದೆವು. ಬಿಜೆಪಿ ಅಧ್ಯಕ್ಷ, ಸಿಎಂ ಆಗಿಯೂ ಮಾಡಲಾಗಿತ್ತು. ಶೆಟ್ಟರ್‌ರವರು ತಾಳ್ಮೆಯಿಂದ ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಬೇಕಿತ್ತು.

ಶೆಟ್ಟರ್‌ ಅವರಿಗೆ ಎಲ್ಲಾ ಪೋಸ್ಡ್ ಮುಗಿದಿದೆ. ತಾಳ್ಮೆಯಿಂದ ಇದ್ದಿದ್ರೆ ಇನ್ನೂ ಒಳ್ಳೆಯ ಅವಕಾಶ ಸಿಗುತ್ತಿತ್ತು. ಇನ್ನೂ ಕಾಲ ಮಿಂಚಿಲ್ಲ. ತಾಳ್ಮೆ ಪ್ರದರ್ಶನ ಮಾಡಿ ರಾಷ್ಟ್ರೀಯ ನಾಯಕರ ಜೊತೆ ಮಾತನಾಡಿ ಮುಂದೆ ಬರುವ ಅವಕಾಶಕ್ಕೆ ಕಾಯಬೇಕು ಅನ್ನೋದು ನನ್ನ ಅಭಿಪ್ರಾಯ ಎಂದಿದ್ದಾರೆ.

ಇದನ್ನೂ ಓದಿ: Karnataka Election 2023: ಜಗದೀಶ್‌ ಶೆಟ್ಟರ್‌ ಅಂತಹ ದೊಡ್ಡ ನಾಯಕರು ನಮ್ಮ ಪಕ್ಷಕ್ಕೆ ಬೇಡ: ಎಚ್.ಡಿ. ಕುಮಾರಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

Lok Sabha Election 2024: ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ತಮಗೆ ನಿಗದಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತಿ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

VISTARANEWS.COM


on

Uttara Kannada DC Gangubai Manakar spoke in Vote counting training program at Kumta
Koo

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಗೆ (Lok Sabha Election 2024) ಸಂಬಂಧಿಸಿದಂತೆ ಜೂ. 4ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಮತ ಎಣಿಕೆ ಸಂದರ್ಭದಲ್ಲಿ ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಕುಮಟಾದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಮಂಗಳವಾರ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಆಯೋಜಿಸಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದೆ, ಮತ ಎಣಿಕೆ ಸಿಬ್ಬಂದಿ ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ, ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಕೂಡಾ, ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಣಿಕೆಯ ಸಂದರ್ಭದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ, ಮತಗಳನ್ನು ಸ್ಪಷ್ಟವಾಗಿ ಕ್ರೋಡಿಕರಿಸಿ, ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ಹಾಗೂ ಯಾವುದೇ ರೀತಿಯ ಗೊಂದಲಗಳು ಕಂಡುಬಂದಲ್ಲಿ ತಕ್ಷಣ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಎಲ್ಲಾ ಸಿಬ್ಬಂದಿ ಚಾಚೂ ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು, ಇವಿಎಂಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು.

Continue Reading

ಮಳೆ

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Karnataka Weather: ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆ (Rain News) ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ (Karnataka Weather) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ರಾಜ್ಯದಾದ್ಯಂತ 2-3 ° C ರಷ್ಟು ಕ್ರಮೇಣ ಕುಸಿಯುತ್ತದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರವಾದ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೇಲೆ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 22 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 30ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲೆ ಮಾರುತಗಳು ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ (ಗಂಟೆಗೆ 40-50 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆ ಮತ್ತು ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ, ರಾಮನಗರದಲ್ಲಿ (30-40 ಕಿಮೀ) ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಗಳು. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 31ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ (ಗಂಟೆಗೆ 30-40 ಕಿ.ಮೀ) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

ಇದೇ ರೀತಿ ಜೂನ್‌ 5ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
ರಾಜ್ಯದ ಮಳೆ/ಗುಡುಗಿನ ಮುನ್ಸೂಚನೆ 0830 ಗಂಟೆಗಳ IST ವರೆಗೆ ಮಾನ್ಯವಾಗಿರುತ್ತದೆ.

Continue Reading

ಮಳೆ

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯೊಂದಿಗೆ (Rain News) ಗುಡುಗು, ಮಿಂಚು ಇರಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 29 ರಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಮಧ್ಯಮ ಮಳೆಯಾದರೆ, ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಕೆಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೋಲಾರ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣಹವೆ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

ಇನ್ನೇನೂ ಸಮ್ಮರ್‌ ಸೀಸನ್‌ (Summer dress fashion) ಮುಗಿಯುವ ಹಂತದಲ್ಲಿದೆ. ಆಗಲೇ ವೆವಿ ಡ್ರೆಸ್‌ಗಳು ಎಂಟ್ರಿ ನೀಡಿವೆ. ಹೌದು. ನೋಡಿದಾಕ್ಷಣ ಮನೋಲ್ಲಾಸ ತುಂಬುವಂತಹ ಉತ್ಸಾಹ ಮೂಡಿಸುವ ಡಿಫರೆಂಟ್‌ ಲುಕ್‌ ನೀಡುವ ನಾನಾ ಶೇಡ್‌ನ ವೆವಿ ಡ್ರೆಸ್‌ಗಳು ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ.

Summer Dress Fashion

ಏನಿದು ವೆವಿ ಡ್ರೆಸ್‌?

ಅರರೆ, ಏನಿದು ವೆವಿ ಡ್ರೆಸ್‌ ಎಂದು ಯೋಚಿಸುತ್ತಿದ್ದೀರಾ! ಹೆಸರೇ ಹೇಳುವಂತೆ, ಇವು ಬೀಚ್‌ನಲ್ಲಿ ಸಮುದ್ರದ ಅಲೆಗಳನ್ನು ಬಿಂಬಿಸುವಂತಹ ಪ್ರಿಂಟ್ಸ್ ಇರುವಂತಹ ಸಮ್ಮರ್‌ ಡ್ರೆಸ್‌ಗಳಿವು. ನೋಡಲು ಬೀಚ್‌ ಲುಕ್‌ ಪ್ಲಸ್‌ ಹಾಲಿ ಡೇ ಪಾರ್ಟಿ ಲುಕ್‌ ನೀಡುವಂತಹ ಉಡುಗೆಗಳಿವು. ಅಷ್ಟೇಕೆ! ಲಂಚ್‌-ಬ್ರಂಚ್‌ ಪಾರ್ಟಿಗಳಲ್ಲೂ ಕಾಣಬಹುದಾದ ಹೈ ಫ್ಯಾಷನ್‌ ಉಡುಪುಗಳಿವು. ಇವುಗಳ ಪ್ರಿಂಟ್ಸ್ ಅಲೆಗಳಂತೆ ಇರುವುದರಿಂದ ಇವನ್ನು ವೆವಿ ಡ್ರೆಸ್‌ಗಳೆಂದು ಕರೆಯಲಾಗುತ್ತದೆ. ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳಲ್ಲಿ ಇವು ಬಿಡುಗಡೆಗೊಂಡಿವೆ. ಸೆಲೆಬ್ರೆಟಿಗಳು ಮಾತ್ರವಲ್ಲ, ಸ್ಟೈಲಿಶ್‌ ಹುಡುಗಿಯರನ್ನು ಸವಾರಿ ಮಾಡತೊಡಗಿವೆ ಎಂದು ವಿವರಿಸುತ್ತಾರೆ ಸ್ಟೈಲಿಸ್ಟ್‌ಗಳು.

Summer Dress Fashion

ಶಾರ್ವರಿ ವೆವಿ ಡ್ರೆಸ್‌

ಬಾಲಿವುಡ್‌ನಲ್ಲಿ ಇನ್ನೂ ಅತಿ ಹೆಚ್ಚಾಗಿ ಕಂಡು ಬರದ ಉಡುಪುಗಳಲ್ಲಿ ಈ ವೆವಿ ಡ್ರೆಸ್‌ ಕೂಡ ಸೇರಿದೆ. ಯಾಕೆಂದರೇ, ಈ ಉಡುಪು ಈ ಜನರೇಷನ್‌ ನಟಿಯರ ಲಿಸ್ಟ್ನಲ್ಲಿದೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಶಾರ್ವರಿ ಸಮುದ್ರದ ಅಲೆಗಳನ್ನು ನೆನಪಿಸುವ ಪಿಸ್ತಾ ಮಿಂಟ್‌ ಗ್ರೀನ್‌ ಶೇಡ್ ಮಿಕ್ಸ್ ಇರುವಂತಹ ವೆವಿ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಫ್ಯಾಷನ್‌ ಲೋಕದಲ್ಲಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಸದ್ಯ, ಇತರೇ ಯಾವುದೇ ನಟಿಯರು ಪ್ರಯೋಗಿಸದ ಡಿಸೈನರ್‌ವೇರ್‌ನಲ್ಲಿ ಕಾಣಿಸಿಕೊಂಡಿರುವ ಹೆಗ್ಗಳಿಕೆ ಇವರದು. ವೆವಿ ಡ್ರೆಸ್‌ನಂತಹ ಸಮ್ಮರ್‌ ಡ್ರೆಸ್‌ ಇದೆಯಾ! ಒಮ್ಮೆ ನಾವು ಕೂಡ ಧರಿಸೋಣಾ! ಎಂಬ ಟೀನೇಜ್‌ ಹುಡುಗಿಯರ ಫ್ಯಾಷನ್‌ ಚಾಯ್ಸ್‌ಗೆ ಹೊಸ ಶೇಡ್‌ಗಳು ಆಕರ್ಷಿಸುತ್ತಿವೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕಿ ಜಿಯಾ. ಅವರ ಪ್ರಕಾರ, ವೆವಿ ಡ್ರೆಸ್‌ಗಳು ಯಂಗ್‌ ಲುಕ್‌ ನೀಡುತ್ತವಂತೆ. ಹಾಗಾಗಿ ಆನ್‌ಲೈನ್‌ನಲ್ಲಿ ಇದೀಗ ಇವುಗಳ ಖರೀದಿ ಹೆಚ್ಚಾಗಿದೆ ಎನ್ನುತ್ತಾರೆ.

Summer Dress Fashion

ವೆವಿ ಡ್ರೆಸ್‌ಗಳ ಟ್ರೆಂಡ್‌

ಸಾಗರ ಹಾಗೂ ಸಮುದ್ರ ಅಲೆಗಳ ನ್ಯಾಚುರಲ್‌ ಶೇಡ್ಸ್, ಪೀಚ್‌ ಹಾಗೂ ಕೇಸರಿ ಶೇಡ್‌ಗಳ ನೈಜವೆನಿಸದ ಪ್ರಿಂಟ್ಸ್‌ನ ವೆವಿ ಡ್ರೆಸ್‌ಗಳು, ಅಸ್ಸೆಮ್ಮಿಟ್ರಿಕಲ್‌ ವೆವಿ ಡ್ರೆಸ್‌ಗಳು ಅದರಲ್ಲೂ, ವೈಟ್‌ & ಸೀ ಬ್ಲ್ಯೂ , ರಾಯಲ್‌ ಬ್ಲ್ಯೂ ವೆವಿ ಡ್ರೆಸ್‌ಗಳು ಅತಿ ಹೆಚ್ಚಾಗಿ ಬೇಡಿಕೆ ಪಡೆದುಕೊಂಡಿವೆ.

  • ಸಮ್ಮರ್‌ ಪಾರ್ಟಿಗೆ ಹಾಗೂ ಔಟಿಂಗ್‌ಗೆ ಮ್ಯಾಚ್‌ ಆಗುತ್ತವೆ.
  • ಹೆಚ್ಚು ಆಕ್ಸೆಸರೀಸ್‌ ಧರಿಸುವ ಅಗತ್ಯವಿಲ್ಲ.
  • ಮಿನಿಮಲ್‌ ಮೇಕಪ್‌ ಆಕರ್ಷಕವಾಗಿ ಕಾಣಿಸುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading
Advertisement
PM Kisan Samman
ಕೃಷಿ17 mins ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ23 mins ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ30 mins ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sudha Murty
ಕರ್ನಾಟಕ34 mins ago

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Headless Chicken
ವಿಜ್ಞಾನ46 mins ago

Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Monsoon 2024
ದೇಶ1 hour ago

Monsoon 2024: ಮುಂದಿನ 24 ಗಂಟೆಗಳಲ್ಲೇ ಮುಂಗಾರು ಪ್ರವೇಶ; ಕರ್ನಾಟಕ ಸೇರಿ ಎಲ್ಲೆಲ್ಲಿ ಮಳೆ?

Belagavi Tour
ಪ್ರವಾಸ2 hours ago

Belagavi Tour: ಬೆಳಗಾವಿಗೆ ಭೇಟಿ ನೀಡಿದಾಗ ಈ ಸ್ಥಳಗಳನ್ನು ನೋಡಲು ಮರೆಯಬೇಡಿ

AUS vs NAM
ಕ್ರೀಡೆ2 hours ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ2 hours ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ2 hours ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌