ಬೆಂಗಳೂರು: ಹೊಸ ಪ್ರಾದೇಶಿಕ ಪಕ್ಷ (ಕೆಆರ್‌ಪಿ ಪಕ್ಷ) ಸ್ಥಾಪಿಸಿದ ಬೆನ್ನಲ್ಲೇ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ (Janardhan Reddy) ಆಸ್ತಿ ಜಪ್ತಿಗೆ ಅನುಮತಿ ನೀಡದ ಕಾರಣ ಕರ್ನಾಟಕ ಸರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನು ಪತ್ತೆ ಹಚ್ಚಿದ್ದೇವೆ. ಇವು ಅಕ್ರಮ ಹಣದಿಂದ ಖರೀದಿಸಿದ ಆಸ್ತಿಗಳಾಗಿವೆ. ಹೀಗಾಗಿ ಆಸ್ತಿ ಜಪ್ತಿಗೆ ಅನುಮತಿ ನೀಡಬೇಕು ಎಂದು 2022ರ ಆ.30ರಂದು ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು. ಆದರೆ, ಸರ್ಕಾರದಿಂದ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸಿಬಿಐ, ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.
ಸಿಬಿಐ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ವಿಷಯ ತಿಳಿದು, ಆಂಧ್ರದ ಕರ್ನೂಲ್, ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಗಳಲ್ಲಿನ ಆಸ್ತಿಗಳ ಮಾರಾಟಕ್ಕೆ ಜನಾರ್ದನ ರೆಡ್ಡಿ ಆಸ್ತಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಅವರ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರ್ಟ್‌ಗೆ ಸಿಬಿಐ ಮನವಿ ಮಾಡಿದೆ.
ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಕಂಪನಿಯಿಂದ ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ 2013ರಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿ, ಸರ್ಕಾರದ ಬೊಕ್ಕಸಕ್ಕೆ 198 ಕೋಟಿ ರೂಪಾಯಿ ಉಂಟು ಮಾಡಿರುವುದಾಗಿ ಆರೋಪಿಸಿತ್ತು. ಈ ಸಂಬಂಧ 2015ರಲ್ಲೇ 65 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡುವಂತೆ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ | RTPS in Raichur | ಆರ್‌ಟಿಪಿಎಸ್‌ನಲ್ಲಿ 50 ಮೀಟರ್ ಎತ್ತರದಿಂದ ಆಯತಪ್ಪಿ ಬಿದ್ದು ಮೂವರು ಕಾರ್ಮಿಕರಿಗೆ ಗಂಭೀರ ಗಾಯ