ಶಿವಮೊಗ್ಗ/ ಚಿಕ್ಕಮಗಳೂರು: ಇಂದು ಕಾಫಿನಾಡು ಚಿಕ್ಕಮಗಳೂರು ಹಾಗೂ ಮಲೆನಾಡು ಶಿವಮೊಗ್ಗದ ಆನವಟ್ಟಿಗಳಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಕಡೂರಿಗೆ ಆಗಮಿಸುವ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೊದಲಿಗೆ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳಿಗೆ ಸರ್ಕಾರದಿಂದ ನೀಡಿರುವ ಹಣ ಬಿಡುಗಡೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಿಎಂ ಮಾತನಾಡಲಿದ್ದಾರೆ. ಹಾಗೂ ಖಾಸಗಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಳಿಕ ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ತೆರಳಲಿರುವ ಜನಸಂಕಲ್ಪ ಯಾತ್ರೆಯ ಮೂಲಕ ಪಟ್ಟಣದ ಎಪಿಎಂಸಿ ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಇದೇ ವೇಳೆ ತರೀಕೆರೆ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಕಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಹಾಗೂ ಸರ್ಕಾರ ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸುವ ಯೋಜನೆ ಹಾಕಿಕೊಂಡಿದ್ದಾರೆ. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಿರುವ ಕಡೂರು ಪೊಲೀಸರು ಭದ್ರತೆಗೆ ಧಕ್ಕೆ ಆಗದಂತೆ ಎಚ್ಚರ ವಹಿಸಿದ್ದಾರೆ.
ಶಿವಮೊಗ್ಗ: ಶಿವಮೊಗ್ಗದ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಕೂಡ ಇಂದು ಸಂಜೆ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಂಜೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಭೈರತಿ ಬಸವರಾಜ್ ಭಾಗಿಯಾಗಲಿದ್ದಾರೆ. ಸೊರಬ ಕ್ಷೇತ್ರದ ಸಾಧನಾ ಕೈಪಿಡಿ ಬಿಡುಗಡೆಯಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಫಲಾಹಾರದ ವ್ಯವಸ್ಥೆ ಹಾಗೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ | ಜನಸಂಕಲ್ಪ ಯಾತ್ರೆ | ಕಾಂಗ್ರೆಸ್‌ನದ್ದು 85% ಸರಕಾರ: ರಾಜೀವ್ ಗಾಂಧಿಯನ್ನು ಉದಾಹರಿಸಿದ ಬೊಮ್ಮಾಯಿ