ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ (Kamarimatha Fair) ನಡೆದ ರಥೋತ್ಸವ (Jatra Rathotsava) ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.
ಭಾನುವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.
Sahil Khan: ಬೆಟ್ಟಿಂಗ್ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್
ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ, ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್ ಎಂದು ಹೇಳಿಕೊಂಡು ಬಂದಿದ್ದರು. ಆದರೆ, ಸಾಹಿಲ್ ಆ್ಯಪ್‌ನ ಸಹ ಮಾಲೀಕ ಎಂಬುದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಸಾಹಿಲ್ ಈ ಬೆಟ್ಟಿಂಗ್ ಆ್ಯಪ್ ಸಂಬಂಧಿಸಿದ ಪ್ರಚಾರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ 24 ತಿಂಗಳುಗಳ ಕಾಲ ಈ ಆ್ಯಪ್ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿತ್ತು.
ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.
ಇದನ್ನೂ ಓದಿ: The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?
2023ರಲ್ಲಿ, ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್ ವಿಭಾಗವು ಡಿಸೆಂಬರ್ 15ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏನಿದು ಮಹದೇವ್ ಬೆಟ್ಟಿಂಗ್ ಪ್ರಕರಣ?
ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ (Chhattisgarh Polls) ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್‌ಗಳಿಂದ (Mahadev Betting App Promoters) ಇದುವರೆಗೆ ಭೂಪೇಶ್ ಬಘೇಲ್ (Bhupel Bhaghel) ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವು ಚರ್ಚೆಗೆ ಗ್ರಾಸವಾಗಿತ್ತು.
ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು.