ಬೆಂಗಳೂರು: ನಗರದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಾ.ಸಿ.ಎನ್.ಮಂಜುನಾಥ್ ಅವರ ಸೇವಾವಧಿ ಜುಲೈ 19ಕ್ಕೆ ಮುಗಿಯಬೇಕಾಗಿತ್ತು. ಹೀಗಾಗಿ ಆಸ್ಪತ್ರೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಅವರನ್ನು ಮುಂದುವರಿಸುವಂತೆ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಜುನಾಥ್ ಅವರ ಸೇವಾವಧಿಯನ್ನು ವಿಸ್ತರಿಸಿ ಆದೇಶಿಸಿದೆ. ತಮ್ಮ ಸೇವಾ ಅವಧಿಯನ್ನು ವಿಸ್ತರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಡಾ.ಸಿ.ಎನ್.ಮಂಜುನಾಥ್ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ | ನಡುರಾತ್ರಿ ಏನಾಗುತ್ತೆ ಹೃದಯಕ್ಕೆ? ಜಯದೇವ ಆಸ್ಪತ್ರೆ ಹೊರಗೆಡಹಿದ ಸತ್ಯ