Site icon Vistara News

Arkalgud Election Results: ಅರಕಲಗೂಡಿನಲ್ಲಿ ಜೆಡಿಎಸ್‌ನ ಎ.ಮಂಜುಗೆ ವಿಜಯ ಮಾಲೆ

Arkalgud Election Results A Manju wins

Arkalgud Election Results A Manju wins

ಹಾಸನ: ವಿಧಾನಸಭಾ ಚುನಾವಣೆಯ (Arkalgud Election Results) ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಮಂಜು ಗೆಲುವು ಪಡೆದಿದ್ದಾರೆ. ಇವರು 19.611 ಮತಗಳ ಅಂತರದಿಂದ ಸಮೀಪದ ಸ್ಪರ್ಧಿ, ಪಕ್ಷೇತರ ಅಭ್ಯರ್ಥಿ ಎಂ.ಟಿ. ಕೃಷ್ಣೇಗೌಡ ವಿರುದ್ಧ ಗೆಲ್ಲುವ ಮೂಲಕ 4ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಈ ಬಾರಿ ಜೆಡಿಎಸ್ ಅಭ್ಯರ್ಥಿ ಎ.ಮಂಜು 74,643 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಧರ್ ಗೌಡ 35,947 ಮತ, ಬಿಜೆಪಿ ಅಭ್ಯರ್ಥಿ ಯೋಗಾರಮೇಶ್ 19,575 ಮತ, ಪಕ್ಷೇತರ ಅಭ್ಯರ್ಥಿ ಎಂ.ಟಿ. ಕೃಷ್ಣೇಗೌಡ 55,038 ಮತಗಳನ್ನು ಪಡೆದಿದ್ದಾರೆ.

ಕಳೆದ ಚುನಾವಣೆ ಫಲಿತಾಂಶ

2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ಅವರು 85,064 ಮತಗಳನ್ನು ಪಡೆದು ಜಯಗಳಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು 74,411 ಮತ ಹಾಗೂ ಬಿಜೆಪಿ ಅಭ್ಯರ್ಥಿ ಯೋಗಾ ರಮೇಶ್ 22,679 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ | Holenarasipur Election Results : ಹೊಳೆನರಸೀಪುರದಲ್ಲಿ ಗೆಲುವಿನ ನಗೆ ಬೀರಿದ ಎಚ್‌.ಡಿ. ರೇವಣ್ಣ

ಕಳೆದ 20 ವರ್ಷದಿಂದ ಅರಕಲಗೂಡು ಕ್ಷೇತ್ರದ ಅಧಿಕಾರದ ಎ‌.ಮಂಜು ಹಾಗೂ ಎ.ಟಿ.ರಾಮಸ್ವಾಮಿ ಅವರ ಕೈಯಲ್ಲಿದೆ. ಎ.ಟಿ.ರಾಮಸ್ವಾಮಿ ನಾಲ್ಕು ಬಾರಿ ಶಾಸಕರಾಗಿದ್ದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿದ್ದ ಎ.ಮಂಜು ಟಿಕೆಟ್ ಸಿಗದೆ ಅಂತಿಮ ಕ್ಷಣದಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದರು. ಈ ಬಾರಿ ಗೆಲುವು ಪಡೆದು ಅವರು ಕೂಡ 4ನೇ ಬಾರಿ ಶಾಸಕರಾಗಿದ್ದಾರೆ. ಯೋಗಾ ರಮೇಶ್‌ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಇತ್ತ ಕಾಂಗ್ರೆಸ್‌ನಿಂದ ಮಾಜಿ‌ ಪೊಲೀಸ್ ಅಧಿಕಾರಿ ಶ್ರೀಧರ್ ಗೌಡ ಟಿಕೆಟ್ ಗಿಟ್ಟಿಸಿಕೊಂಡಿದ್ದರು.

Exit mobile version