ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣಾ (Sidlaghatta Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎನ್. ರವಿಕುಮಾರ್ ಗೆಲುವು ದಾಖಲಿಸಿದ್ದಾರೆ. ಇವರು 16772 ಮತಗಳ ಅಂತರದಿಂದ ಕಾಂಗ್ರೆಸ್ ಬಂಡಾಯ (ಪಕ್ಷೇತರ) ಅಭ್ಯರ್ಥಿ ಪುಟ್ಟು ಅಂಜಿನಪ್ಪ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎನ್.ರವಿಕುಮಾರ್ 68,932 ಮತಗಳು, ಪುಟ್ಟು ಅಂಜಿನಪ್ಪ ಕಾಂಗ್ರೆಸ್ ಬಂಡಾಯ (ಪಕ್ಷೇತರ) ಅಭ್ಯರ್ಥಿ 52160 ಮತ, ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ರಾಜೀವ್ ಗೌಡ 36,157 ಮತ, ಸೀಕಲ್ ರಾಮಚಂದ್ರಗೌಡ 15,446 ಮತಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ | Gauribidanur Election Results: ಗೌರಿಬಿದನೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್. ಪುಟ್ಟಸ್ವಾಮಿಗೌಡಗೆ ಭರ್ಜರಿ ಜಯ
2018ರ ಚುನಾವಣೆಯಲ್ಲಿ ಕಾಂಗ್ರೆಸ್ ಆಭ್ಯರ್ಥಿ ವಿ.ಮುನಿಯಪ್ಪ 76,240 ಮತಗಳನ್ನು ಪಡೆದು ಗೆದ್ದಿದ್ದರು. ಜೆಡಿಎಸ್ ಅಭ್ಯರ್ಥಿ ಬಿ.ಎನ್. ರವಿಕುಮಾರ್ 66,531 ಮತ, ಪಕ್ಷೇತರ ಅಭ್ಯರ್ಥಿ ಪುಟ್ಟು ಆಂಜಿನಪ್ಪ 10,596, ಪಕ್ಷೇತರ ಅಭ್ಯರ್ಥಿ ರಾಜಣ್ಣ 8,590 ಮತಗಳನ್ನು ಪಡೆದಿದ್ದರು.