ಹಾಸನ : ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಮ್ಮನಹಟ್ಟಿ ಗ್ರಾಮದಲ್ಲಿ ನಡೆದಿದೆ. ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಲ್ಲದೆ, ಕಲ್ಲು ತೂರಾಟವೂ ನಡೆದಿದೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಸಮ್ಮುಖದಲ್ಲಿಯೇ ಎರಡು ಗುಂಪುಗಳ ನಡುವೆ ಕಿತ್ತಾಟ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಎನ್.ಆರ್ ಸಂತೋಷ್ ಕೂಡಾ ಉದ್ರಿಕ್ತರನ್ನು ಸಮಾಧಾನ ಪಡಿಸಿದ್ದಾರೆ. ಬಳಿಕ ಗಲಾಟೆಗೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನು ಓದಿ| ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದದ ರಾಜಕಾರಣ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಬೆಂಬಲಿಗರು ಬಿಜೆಪಿ ಬೆಂಬಲಿತರ ಮನೆಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜಕೀಯ ವೈಷಮ್ಯದಿಂದಲೇ ಪರಸ್ಪರ ಕಲ್ಲು ತೂರಾಟ ಮಾಡಿಕೊಳ್ಳಲಾಗಿದೆ ಎಂದು ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.