ಹಾಸನ: ವಿಧಾನಸಭಾ ಚುನಾವಣೆ (Shravanabelagola Election Results) ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಜಿಲ್ಲೆಯ ಶ್ರವಣಬೆಳಗೊಳ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್. ಬಾಲಕೃಷ್ಣ ಜಯಭೇರಿ ಬಾರಿಸಿದ್ದಾರೆ. ಇವರು 6645 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿರುದ್ಧ ಗೆಲ್ಲುವ ಮೂಲಕ ಸತತ 3ನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ 85,668 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ 79,023 ಮತ ಹಾಗೂ ಬಿಜೆಪಿ ಅಭ್ಯರ್ಥಿ ಚಿದಾನಂದ್ 5648 ಮತ ಪಡೆದಿದ್ದಾರೆ.
2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ 1,05,516 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್. ಪುಟ್ಟೇಗೌಡ 52,504 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಶಿವನಂಜೇಗೌಡ 7,506 ಮತಗಳನ್ನು ಪಡೆದಿದ್ದರು.
ಇದನ್ನೂ ಓದಿ | Sakleshpur Election Results: ಸಕಲೇಶಪುರದಲ್ಲಿ ಗೆಲುವಿನ ನಗೆ ಬೀರಿದ ಸಿಮೆಂಟ್ ಮಂಜು
ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯೇ ಶ್ರವಣಬೆಳಗೊಳದಲ್ಲಿ ಗೆಲ್ಲುತ್ತಿದ್ದಾರೆ. ಸಿ.ಎಸ್.ಪುಟ್ಟೇಗೌಡರು ಜೆಡಿಎಸ್‌ನಿಂದ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ಇದಾದ ನಂತರದ ಎರಡು ಬಾರಿ ಗೆದ್ದಿದ್ದ ಸಿ.ಎನ್.ಬಾಲಕೃಷ್ಣ ಇವರು ಈ ಬಾರಿಯೂ ಗೆಲ್ಲುವುದರೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.