Site icon Vistara News

Reservation : ಮೀಸಲಾತಿ ಪರಿಷ್ಕರಣೆ ಮೂಲಕ ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ಬಿಜೆಪಿ ಯತ್ನ ಎಂದ ಜೆಡಿಎಸ್‌

Devegowda Kumaraswamy

#image_title

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿದ ಪರಿಷ್ಕೃತ ಮೀಸಲಾತಿ ನೀತಿಯನ್ನು ಜೆಡಿಎಸ್‌ ತೀವ್ರವಾಗಿ ಆಕ್ಷೇಪಿಸಿದೆ. ಇದು ಧರ್ಮದ ಹೆಸರಿನಲ್ಲಿ ರಾಜ್ಯ ವಿಭಜನೆಗೆ ನಡೆಸಿದ ಯತ್ನ ಮತ್ತು ಜಾತಿ ಜಗಳ ಸೃಷ್ಟಿಸುವ ಸಂಚು ಎಂದು ಅದು ಹೇಳಿದೆ. ಜೆಡಿಎಸ್‌ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿ ಹತ್ತು ಅಂಶಗಳನ್ನು ಹಂಚಿಕೊಂಡಿದೆ.

ಎಲ್ಲಕ್ಕಿಂತ ಮುಖ್ಯವಾಗಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ ಎಂದು ಹೇಳಿದೆ.

ಜೆಡಿಎಸ್‌ನ ಆಕ್ರೋಶದ ಮಾತುಗಳು ಇಲ್ಲಿವೆ.

ಇದನ್ನೂ ಓದಿ : Panchamasali Reservation : 2ಡಿ ಮೀಸಲಾತಿಗೆ ಪಂಚಮಸಾಲಿ ಒಪ್ಪಿಗೆ, ಎರಡು ವರ್ಷಗಳ ಹೋರಾಟಕ್ಕೆ ತೆರೆ

Exit mobile version