ಕೋಲಾರ: ಜಾತ್ಯತೀತ ಜನತಾ ದಳದ ಪಂಚರತ್ನ ಯಾತ್ರೆ ಇಂದು ಕೋಲಾರದಿಂದ ಆರಂಭವಾಗಲಿದೆ. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯೂ ಇಂದು ಬಿಡುಗಡೆಯಾಗುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಸಂಚರಿಸಲಿರುವ ಪಂಚರತ್ನ ಯಾತ್ರೆಗೆ ಮುನ್ನ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಪ್ರದಾನಿ ಹೆಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಹಾಗು ಬಹುತೇಕ ನಾಯಕರ ದಂಡು ಇಂದು ಮುಳಬಾಗಿಲಿಗೆ ಆಗಮಿಸಲಿದ್ದು, ಮುಳಬಾಗಿಲಿನ ಕುರುಡುಮಲೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಹಾಗೂ ನಂತರ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ ಮದ್ಯಾಹ್ನ ಎರಡು ಗಂಟೆಗೆ ರಾಷ್ಟೀಯ ಹೆದ್ದಾರಿ ಬೈಪಾಸ್‌ನಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಸಮಾವೇಶ ನಡೆಯುವ ಸ್ಥಳದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಮೂರು ಬಸ್‌ಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳೂ ಬಂದು ಬಹಿರಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಎರಡು ಲಕ್ಷ ಮಂದಿ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಇದನ್ನೂ ಓದಿ | ಪಂಚರತ್ನ ರಥಯಾತ್ರೆಗೆ ಜೆಡಿಎಸ್ ಸಜ್ಜು; ನ.1ರಂದು ಮುಳಬಾಗಿಲಿನಲ್ಲಿ ಚಾಲನೆ