Site icon Vistara News

JDS Pancharatna Yatre | ಇಂದಿನಿಂದ ಮಾಗಡಿಯಿಂದ ಎಚ್‌ಡಿಕೆ ಯಾತ್ರೆ ಪುನರಾರಂಭ

jds-panchrathna-rathyathre

ಮಾಗಡಿ: ಮಳೆಯಿಂದ ಸ್ಥಗತವಾಗಿದ್ದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಇಂದಿನಿಂದ ಮಾಗಡಿ ವಿಧಾನಸಭೆ ಕ್ಷೇತ್ರದಿಂದ ಮತ್ತೆ ಆರಂಭವಾಗಲಿದೆ.

ಮಳೆಯಿಂದ ಸ್ಥಗಿತವಾಗಿದ್ದ ಯಾತ್ರೆ, ಇಂದು ಮರು ಆರಂಭಗೊಂಡು ರಾಮನಗರ ಜಿಲ್ಲೆಯಲ್ಲಿ 4 ದಿನ ನಡೆಯಲಿದೆ. ಇಂದು ಸಂಜೆ 5 ಗಂಟೆಗೆ ಮಾಗಡಿ ಶ್ರೀ ರಂಗನಾಥ ಸ್ವಾಮಿ ದೇಗುಲದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿಯ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿ ಜೆಡಿಎಸ್ ಭವನದಲ್ಲಿ ಪಂಚರತ್ನ ಕಾರ್ಯಕ್ರಮ, ಮಾಗಡಿಯ ಕೋಟೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿವೆ.

ಇದನ್ನೂ ಓದಿ | JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ಮರು ಆರಂಭವಾಗಲಿದ್ದು, ಡಿ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಪಂಚರತ್ನ ಕಾರ್ಯಕ್ರಮಕ್ಕೂ ಮುನ್ನ ಎಚ್‌ಡಿಕೆ ಅವರು ಬೆಂಗಳೂರಿನ ಜೆಪಿ ಭವನದಲ್ಲಿ ಸಭೆ ಕರೆದಿದ್ದು, ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ಹಾಗೂ ಮುಂದಿನ ಸಂಭವನೀಯ ಅಭ್ಯರ್ಥಿಗಳ ಜೊತೆ ಚರ್ಚಿಸಲಿದ್ದಾರೆ. ಪಂಚರತ್ನ ಯಾತ್ರೆಗೆ ಆಯಾ ಶಾಸಕರ ಕ್ಷೇತ್ರಗಳಲ್ಲಿ ಆಗಿರುವ ಸಿದ್ಧತೆ, ಮುಂದಿನ ಚುನಾವಣಾ ಸಿದ್ಧತೆ, ಸಂಭವನೀಯ ಅಭ್ಯರ್ಥಿಗಳ ಕಾರ್ಯವೈಖರಿ, ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ | JDS Pancharatna Yatre | ಪಂಚರತ್ನ ರಥಯಾತ್ರೆಯಲ್ಲಿ ಮಗುವಿಗೆ ನಾಮಕರಣ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

Exit mobile version