JDS ಪಕ್ಷದ ಕೆಲಸವನ್ನು ನಿರ್ಲಕ್ಷ್ಯ ಮಾಡುವ ಪದಾಧಿಕಾರಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ - Vistara News

ಕರ್ನಾಟಕ

JDS ಪಕ್ಷದ ಕೆಲಸವನ್ನು ನಿರ್ಲಕ್ಷ್ಯ ಮಾಡುವ ಪದಾಧಿಕಾರಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ

ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

VISTARANEWS.COM


on

HD Kumaraswamy JDS Executive
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಕ್ಷ ಸಂಘಟನೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಕುಮಾರಸ್ವಾಮಿ ಮಾತನಾಡಿದರು.

ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದರು.

ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಪದಾಧಿಕಾರಿಗಳು ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ಆದರೆ, ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಅವರು ಹೇಳಿದರು.

ಹುದ್ದೆಯಿಂದ ಕಿತ್ತು ಹಾಕುತ್ತೇನೆ: ಸಿಎಂ ಇಬ್ರಾಹಿಂ

ಕುಮಾರಸ್ವಾಮಿ ಮಾತಿಗೆ ದನಿಗೂಡಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುವುದು. ಪಕ್ಷದ ಕೆಲಸ ಮಾಡಿ, ಇಲ್ಲವಾದರೆ ಕೆಲಸ ಮಾಡುವವರಿಗೆ ಜಾಗ ಬಿಡಿ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದರು.

ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಯುವ ಜನತಾ ದಳ ಘಟಕವನ್ನು ಬಲಪಡಿಸುವುದು ಹಾಗೂ ರಾಜ್ಯದ ಉದ್ದಗಲಕ್ಕೂ ಯುವ ಕಾರ್ಯಕರ್ತರನ್ನು ಸಜ್ಜು ಮಾಡಲು ತಕ್ಷಣವೇ ಕ್ರಮ ವಹಿಸಲಾಗುವುದು. ಈಗಾಗಲೇ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಯುವ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಜನತಾ ಜಲಧಾರೆ ಸಮಾವೇಶದಲ್ಲಿ ಯುವ ಪಡೆ ಅದ್ಬುತವಾಗಿ ಕೆಲಸ ಮಾಡಿದ್ದರು. ಮುಂದಿನ ದಿನಗಳಲ್ಲಿಯೂ ನಮ್ಮ ತಂಡ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿದೆ ಎಂದು ನಿಖಿಲ್ ಅವರು ಹೇಳಿದರು.

ಶಾಸಕರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ಕೆ.ಎಂ.ಕೃಷ್ಣಾರೆಡ್ಡಿ, ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ಎನ್.ಎಂ.ನಬಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್ ಮುಂತಾದವರು ಹಾಗೂ ಕಾರ್ಯಕಾರಿಣಿಯ ಎಲ್ಲ ಸದಸ್ಯರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ | Photo | ʼಏನ್‌ ಸರ್‌, ಹೇಗಿದ್ದೀರಿ?ʼ: ವಿಧಾನಸೌಧದಲ್ಲಿ BSY-HDK, BSY-ಸಿದ್ದು ಮುಖಾಮುಖಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Heart Attack: ಕೋಲಾರ ಕುರುಬರ ಸಂಘದ ವತಿಯಿಂದ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಮುಖಂಡರಾದ ರವೀಂದ್ರ ಎಂಬ ವ್ಯಕ್ತಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ಕ್ಷಣದಲ್ಲಿ ಹೃದಯಾಘಾತ ಸಂಭವಿಸಿದೆ.

VISTARANEWS.COM


on

heart attack in press meet
Koo

ಬೆಂಗಳೂರು: ರಾಜಧಾನಿಯ ಪ್ರೆಸ್‌ ಕ್ಲಬ್‌ನಲ್ಲಿ (Press Club) ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ (Press meet), ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಕುಸಿದು ಬಿದ್ದರು.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿದ ರಾಜ್ಯಪಾಲರ (Governor Thawar chand gehlot) ನಡೆಯನ್ನು ವಿರೋಧಿಸಿ ಪತ್ರಿಕಾಗೋಷ್ಠಿ ನಡೆದಿತ್ತು. ಕೋಲಾರ ಕುರುಬರ ಸಂಘದ ವತಿಯಿಂದ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಮುಖಂಡರಾದ ರವೀಂದ್ರ ಎಂಬ ವ್ಯಕ್ತಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ಕ್ಷಣದಲ್ಲಿ ಹೃದಯಾಘಾತ ಸಂಭವಿಸಿದೆ. ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದ ರವೀಂದ್ರ ಅವರನ್ನು ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ನನ್ನ ಹೋರಾಟದ ಜೋಶ್‌ ಜಾಸ್ತಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿಜೆಪಿ- ಜೆಡಿಎಸ್‌ ಸುಳ್ಳು ದೂರುಗಳ ಮೂಲಕ ನನ್ನನ್ನು ಹಣಿಯುವುದಕ್ಕೆ ಮುಂದಾಗಿವೆ. ನಾನು ರಾಜಕೀಯ ಜೀವನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಮುಂದೆಯೂ ಮಾಡುತ್ತೇನೆ. ಇಂಥ ಹೋರಾಟದ ಸಂದರ್ಭದಲ್ಲಿ ನನ್ನ ಜೋಶ್‌ ಜಾಸ್ತಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನಾನು, ನನ್ನ‌ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.

ಸುಳ್ಳು ಆಪಾದನೆ, ಕೇಸ್‌ ಇತ್ಯಾದಿಗಳ ಬಗ್ಗೆ ರಾಜಕೀಯವಾಗಿಯೂ ಹೋರಾಡುತ್ತೇನೆ; ಕಾನೂನಾತ್ಮಕವಾಗಿಯೂ ಹೋರಾಡುತ್ತೇನೆ. ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ತಡೆಯಾಜ್ಞೆ ಕೊಡಿ ಅಂತ ಕೇಳಿದ್ದೇವೆ. ನನ್ನ ಪರವಾಗಿ ವಾದಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರ್ತಾ ಇದ್ದಾರೆ. ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಪ್ರಸ್ತುತ ರಾಜ್ಯಪಾಲರ ಅನುಮತಿ ರದ್ದುಗೊಳಿಸಲು ಕೋರಿ ಸಿಎಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ: MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Continue Reading

ರಾಜಕೀಯ

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

CLP Meeting: ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

VISTARANEWS.COM


on

CLP Meeting
Koo

ಬೆಂಗಳೂರು: ರಾಜ್ಯಪಾರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ (CLP Meeting)ಯನ್ನು ಕರೆದಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿಜೆಪಿ- ಜೆಡಿಎಸ್‌ ಸುಳ್ಳು ದೂರುಗಳ ಮೂಲಕ ನನ್ನನ್ನು ಹಣಿಯುವುದಕ್ಕೆ ಮುಂದಾಗಿವೆ. ನಾನು ರಾಜಕೀಯ ಜೀವನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಮುಂದೆಯೂ ಮಾಡುತ್ತೇನೆ. ಇಂಥ ಹೋರಾಟದ ಸಂದರ್ಭದಲ್ಲಿ ನನ್ನ ಜೋಶ್‌ ಜಾಸ್ತಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮುಡಾ ಪ್ರಕರಣದಲ್ಲಿ (MUDA case, MUDA scam) ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನಾನು, ನನ್ನ‌ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.

ಸುಳ್ಳು ಆಪಾದನೆ, ಕೇಸ್‌ ಇತ್ಯಾದಿಗಳ ಬಗ್ಗೆ ರಾಜಕೀಯವಾಗಿಯೂ ಹೋರಾಡುತ್ತೇನೆ; ಕಾನೂನಾತ್ಮಕವಾಗಿಯೂ ಹೋರಾಡುತ್ತೇನೆ. ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ತಡೆಯಾಜ್ಞೆ ಕೊಡಿ ಅಂತ ಕೇಳಿದ್ದೇವೆ. ನನ್ನ ಪರವಾಗಿ ವಾದಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರ್ತಾ ಇದ್ದಾರೆ. ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

Continue Reading

ಪ್ರಮುಖ ಸುದ್ದಿ

CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

CM Siddaramaiah: ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

VISTARANEWS.COM


on

cm siddaramaiah 12
Koo

ಬೆಂಗಳೂರು: ನಿಜೆಪಿ- ಜೆಡಿಎಸ್‌ ಸುಳ್ಳು ದೂರುಗಳ ಮೂಲಕ ನನ್ನನ್ನು ಹಣಿಯುವುದಕ್ಕೆ ಮುಂದಾಗಿವೆ. ನಾನು ರಾಜಕೀಯ ಜೀವನದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದು, ಮುಂದೆಯೂ ಮಾಡುತ್ತೇನೆ. ಇಂಥ ಹೋರಾಟದ ಸಂದರ್ಭದಲ್ಲಿ ನನ್ನ ಜೋಶ್‌ ಜಾಸ್ತಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಮುಡಾ ಪ್ರಕರಣದಲ್ಲಿ (MUDA case, MUDA scam) ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಹಾಗೂ ರಾಜೀನಾಮೆಗೆ ಬಿಜೆಪಿ ಆಗ್ರಹದ ಕುರಿತು ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ನಾನು ಡಲ್ ಆಗಿಲ್ಲ. ಬಹಳ‌ ಆಕ್ಟೀವ್ ಆಗಿಯೇ ಇದ್ದೇನೆ. ನಾನು ಬಡವರ ಪರ ಇದ್ದೇನೆ, ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇನೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನಾನು, ನನ್ನ‌ ರಾಜಕೀಯ ಜೀವನ ತೆರೆದ ಪುಸ್ತಕ. ನಿನ್ನೆಗೆ ನಾನು ಮಂತ್ರಿಯಾಗಿಯೇ ನಲುವತ್ತು ವರ್ಷಗಳಾದವು. ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ನನ್ನಲ್ಲಿ ಒಂದು ಕಪ್ಪು ಚುಕ್ಕಿಯೂ ಇಲ್ಲ. ನನ್ನ ಜೀವನದಲ್ಲಿ ಮಸಿ ಬಳಿಯಬೇಕು ಅಂತ ಇದನ್ನೆಲ್ಲ ಮಾಡುತ್ತಿದ್ದಾರೆ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದೆ ಎಂದು ಅವರು ಆಪಾದಿಸಿದರು.

ಸುಳ್ಳು ಆಪಾದನೆ, ಕೇಸ್‌ ಇತ್ಯಾದಿಗಳ ಬಗ್ಗೆ ರಾಜಕೀಯವಾಗಿಯೂ ಹೋರಾಡುತ್ತೇನೆ; ಕಾನೂನಾತ್ಮಕವಾಗಿಯೂ ಹೋರಾಡುತ್ತೇನೆ. ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ತಡೆಯಾಜ್ಞೆ ಕೊಡಿ ಅಂತ ಕೇಳಿದ್ದೇವೆ. ನನ್ನ ಪರವಾಗಿ ವಾದಿಸಲು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರ್ತಾ ಇದ್ದಾರೆ. ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿದ ಸಿಎಂ, ಇಂದು ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ ಆರಂಭಿಸಲು ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಸಿಕ್ಯೂಶನ್‌ಗೆ ಅವರು ತಡೆಯಾಜ್ಞೆ ಕೋರಿದ್ದು, ಅರ್ಜಿಯ ವಿಚಾರಣೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು.

ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು. ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು.

ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

Continue Reading

ಚಿಕ್ಕಬಳ್ಳಾಪುರ

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Murder Case : ಆಸ್ತಿಗಾಗಿ ಶುರುವಾದ ಗಲಾಟೆಯು ಎರಡು ಕುಟುಂಬಗಳು ಕಲ್ಲು-ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
heart attack in press meet
ಬೆಂಗಳೂರು8 mins ago

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Sonal shared an emotional post remembering Darshan on the day of Raksha Bandhan
ಸ್ಯಾಂಡಲ್ ವುಡ್20 mins ago

Sonal Monteiro: ರಕ್ಷಾ ಬಂಧನದ ದಿನ ದರ್ಶನ್ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಸೋನಲ್‌!

Kolkata Doctor Murder case
ದೇಶ51 mins ago

Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್‌- ವಿದ್ಯಾರ್ಥಿನಿ ಅರೆಸ್ಟ್‌

CLP Meeting
ರಾಜಕೀಯ1 hour ago

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Sexual Abuse
Latest1 hour ago

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

cm siddaramaiah 12
ಪ್ರಮುಖ ಸುದ್ದಿ1 hour ago

CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Viral Video
Latest2 hours ago

Viral Video: ವೈದ್ಯರ ಎದುರೇ ಹೃದಯಾಘಾತದಿಂದ ಸಾವು; ಆಘಾತಕಾರಿ ವಿಡಿಯೊ

Lohegaon airport
ದೇಶ2 hours ago

Lohegaon airport: ಏರ್‌ಪೋರ್ಟ್‌ನಲ್ಲಿ ಮಹಿಳೆಯ ರಂಪಾಟ- CISF ಕಾನ್‌ಸ್ಟೆಬಲ್‌ ಕೈಗೆ ಕಚ್ಚಿ ಕಪಾಳಮೋಕ್ಷ, ಪ್ರಯಾಣಿಕರ ಮೇಲೂ ಹಲ್ಲೆ

murder case
ಚಿಕ್ಕಬಳ್ಳಾಪುರ2 hours ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ2 hours ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌