ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (HD Devegowda) ಅವರು ಅನಾರೋಗ್ಯದ ಕಾರಣ ಸೋಮವಾರ ರಾಜ್ಯಸಭೆ (Rajya sabha) ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ನಿನ್ನೆ ರಾತ್ರಿ ತುರ್ತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅವರು ಈ ಮಾಹಿತಿ ನೀಡಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ ಆಯೋಜಿಸಲಾಗಿತ್ತು. ಸೊಂಟ ನೋವಿನಿಂದಾಗಿ ಆ ಸಭೆಯಲ್ಲೂ ಹೆಚ್ಚು ಹೊತ್ತು ಕುಳಿತುಕೊಳ್ಳಲಾಗಲಿಲ್ಲ. ಕೇವಲ ಹತ್ತು ನಿಮಿಷ ಮಾತ್ರ ಸಭೆಯಲ್ಲಿ ಪಾಲ್ಗೊಂಡು ನಂತರ ವೈದ್ಯರಿಂದ ಚಿಕಿತ್ಸೆ ಪಡೆದು ವಿಶ್ರಾಂತಿಗೆ ಮನೆಗೆ ಮರಳಿದ್ದೇನೆ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ.
ನೋವು ಕಡಿಮೆಯಾದರೆ ಬುಧವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ದೇವೇಗೌಡರು ಹೇಳಿದ್ದಾರೆ. ಇದೇ ವೇಳೆ ಅವರು ಟಿವಿಯಲ್ಲಿ ಲೈವ್ ಆಗಿರುವ ರಾಜ್ಯಸಭಾ ಕಲಾಪವನ್ನು ಮನೆಯಿಂದಲೇ ವೀಕ್ಷಿಸಿದರು. ಮಂಗಳವಾರ ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯಸಭೆಯಲ್ಲಿ ಕೂಡ ಈ ಕುರಿತ ಚರ್ಚೆ ಬಿರುಸಾಗುವ ನಿರೀಕ್ಷೆ ಇದೆ. ಇದೇ ವೇಳೆಗೆ, ಜೆಡಿಎಸ್‌ನ ಇನ್ನೊಬ್ಬ ಮುಖ್ಯಸ್ಥರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: Lok sabha Election 2024 : ಲೋಕಸಭೆಗೆ ನಮ್ಮದು ಸ್ವತಂತ್ರ ಸ್ಪರ್ಧೆ; ಆದರೆ… ಎಂದ ಎಚ್.ಡಿ. ದೇವೇಗೌಡ!