ತುಮಕೂರು: ವಿಧಾನಸಭಾ ಚುನಾವಣೆಯ (Turuvekere Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ತುರುವೇಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಗೆಲುವು ಪಡೆದಿದ್ದಾರೆ. ಇವರು 9923 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ವಿರುದ್ಧ ಜಯಭೇರಿ ಮೊಳಗಿಸಿದ್ದಾರೆ.
ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ 68,163 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ 58,240 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು 30,536 ಮತಗಳನ್ನು ಪಡೆದಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ 60,710 ಮತಗಳನ್ನು ಪಡೆದು 2,049 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ (58,661) ಗೆದ್ದಿದ್ದರು.
ಇದನ್ನೂ ಓದಿ | Madhugiri Election Results: ಮಧುಗಿರಿಯಲ್ಲಿ ಗೆಲುವಿನ ನಗೆ ಬೀರಿದ ಕೆ.ಎನ್. ರಾಜಣ್ಣ
ಬಿಜೆಪಿ ಅಭ್ಯರ್ಥಿ ಮಸಾಲೆ ಜಯರಾಂ ಅವರು ತಾವು ಮಾಡಿರುವ ಅಭಿವೃದ್ಧಿ ಕೆಲಸ ಮತ್ತು ಸಜ್ಜನ ರಾಜಕಾರಣಿ ಎನ್ನುವ ಹಣೆಪಟ್ಟಿಯೊಂದಿಗೆ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಪ್ರಯೋಜನವಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ, ನೆಲಮಂಗಲ ಮೂಲದ ಬೆಮೆಲ್ ಕಾಂತರಾಜು ಸ್ಪರ್ಧಿಸಿದ್ದರು. ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಇದು ತಮ್ಮ ಕೊನೆಯ ಚುನಾವಣೆ ಎನ್ನುವ ಅನುಕಂಪದ ಅಸ್ತ್ರ ಪ್ರಯೋಗಿಸಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.