ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜೆಇ ಮೆದುಳು ಜ್ವರದ ವ್ಯಾಕ್ಸಿನ್ (Japanese Encephalitis Vaccine) ಪಡೆದು 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿಪಟೂರು ತಾಲೂಕಿನ ಗುರುಗದಹಳ್ಳಿ ಸರ್ಕಾರಿ ಪ್ರೌಢಶಾಲೆಯ 8 ವಿದ್ಯಾರ್ಥಿಗಳು ಹಾಗೂ ತಿಪಟೂರು ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಗುರುವಾರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡೂ ಶಾಲೆಗಳ ವಿದ್ಯಾರ್ಥಿಗಳು ಜೆಇ ವ್ಯಾಕ್ಸಿನ್ ಪಡೆದಿದ್ದರು. ಬಳಿಕ ತಲೆ ಸುತ್ತು ಬಂದು ೧೦ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಕ್ಕಳ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ | MLA stopped | ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್‌ಗೆ ಗ್ರಾಮಸ್ಥರ ಮುತ್ತಿಗೆ, ಬೈಕ್ ಹತ್ತಿ ಕಾಲ್ಕಿತ್ತ ಎಂಎಲ್‌ಎ