ವಿಜಯಪುರ: ಭಕ್ತರ ಪಾಲಿಗೆ ನಡೆದಾಡುವ ದೇವರು, ನಡೆದಾಡುವ ವಿಶ್ವಕೋಶ, ಜ್ಞಾನದ ನಿಧಿ, ಎರಡನೇ ವಿವೇಕಾನಂದ ಆಗಿದ್ದ ಪ್ರಖ್ಯಾತ ವಾಗ್ಮಿ, ಧಾರ್ಮಿಕ ಚಿಂತಕ, ಲೇಖಕ, ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರ ಅಂತಿಮ ವಿಧಿವಿಧಾನ ಪ್ರಕ್ರಿಯೆಗಳು ಆರಂಭವಾಗಿವೆ. ಇದಕ್ಕೂ ಮೊದಲು ವಿಜಯಪುರದ ಸೈನಿಕ ಶಾಲೆಯಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಸಕಲ ಗೌರವಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.
ಸೀದಾಸಾದಾ, ಸರಳ, ಸುಂದರ ಅಧ್ಯಾತ್ಮಿಕ ಜೀವನದ ಮೂಲಕ ಜನಮನದ ಮೇಲೆ ಗಾಢ ಪ್ರಭಾವ ಬೀರಿದ ಅವರು ಉಪನ್ಯಾಸ, ಅಂಕಣ ಮತ್ತು ಕೃತಿಗಳ ಮೂಲಕ ಅಸಂಖ್ಯಾತ ಜನರ ಮನಸ್ಸಿಗೆ ಸಾಂತ್ವನ ನೀಡಿದ ಮಹಾ ಗುರು. ಗದುಗಿನ ಶಿವಾನಂದ ಶ್ರೀಗಳ ಪರಂಪರೆಗೆ ಸೇರಿದ ವಿಜಯಪುರದ ಜ್ಞಾನಯೋಗಾಶ್ರಮ ಅಧ್ಯಕ್ಷರಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾವಿರಾರು ಹಳ್ಳಿಗಳಲ್ಲಿ ಸಂಚರಿಸಿ ಜ್ಞಾನದಾಸೋಹ ನೀಡಿದವರು. ಶ್ರೀಗಳ ದೇಹಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ ಎಂದು ರಾಜ್ಯದ ಜನರಿಗೆ ವಿನಂತಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಧಾರವಾಡದಲ್ಲಿ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಕಲಾವಿದನಿಂದ ವಿಶೇಷ ಗೌರವ, ಶ್ರದ್ಧಾಂಜಲಿ ಸಲ್ಲಿಕೆ. ಧಾರವಾಡದ ಚಿತ್ರಕಲಾವಿದ ಮಂಜುನಾಥ ಹಿರೇಮಠ ಎಂಬುವವರಿಂದ ಅರಳಿದ ಸಿದ್ದೇಶ್ವರ ಶ್ರೀಗಳ ಮೂರ್ತಿ.
ಸಿದ್ದೇಶ್ವರ ಸ್ವಾಮೀಜಿಗಳ ದೇಹಾಂತ್ಯಕ್ಕೆ ಪೇಜಾವರ ಶ್ರೀ ತೀವ್ರ ಸಂತಾಪ
ಜ್ಞಾನಯೋಗಿಗೆ ರಾಹುಲ್ ಗಾಂಧಿ ಸಂತಾಪ
ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿರ್ಗಮನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿದ್ದೇಶ್ವರ ಸ್ವಾಮೀಜಿ ದೇಹಾಂತ್ಯಕ್ಕೆ ಆರ್ಎಸ್ಎಸ್ ಪ್ರಮುಖರ ಶ್ರದ್ಧಾಂಜಲಿ
ಬೆಂಗಳೂರು: ಭಕ್ತರ ಪಾಲಿಗೆ ನಡೆದಾಡುವ ದೇವರಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ದೇಹಾಂತ್ಯವಾದ ಹಿನ್ನೆಲೆ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಕ್ಷೇತ್ರೀಯ ಸಂಘಚಾಲಕ್ ವಿ.ನಾಗರಾಜ್ ಅವರು ಸಂತಾಪ-ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.