ವಿಜಯಪುರ: ಭಕ್ತರ ಪಾಲಿಗೆ ನಡೆದಾಡುವ ದೇವರು, ನಡೆದಾಡುವ ವಿಶ್ವಕೋಶ, ಜ್ಞಾನದ ನಿಧಿ, ಎರಡನೇ ವಿವೇಕಾನಂದ ಆಗಿದ್ದ ಪ್ರಖ್ಯಾತ ವಾಗ್ಮಿ, ಧಾರ್ಮಿಕ ಚಿಂತಕ, ಲೇಖಕ, ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರ ಅಂತಿಮ ವಿಧಿವಿಧಾನ ಪ್ರಕ್ರಿಯೆಗಳು ಆರಂಭವಾಗಿವೆ. ಇದಕ್ಕೂ ಮೊದಲು ವಿಜಯಪುರದ ಸೈನಿಕ ಶಾಲೆಯಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಸಕಲ ಗೌರವಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.
ಸೀದಾಸಾದಾ, ಸರಳ, ಸುಂದರ ಅಧ್ಯಾತ್ಮಿಕ ಜೀವನದ ಮೂಲಕ ಜನಮನದ ಮೇಲೆ ಗಾಢ ಪ್ರಭಾವ ಬೀರಿದ ಅವರು ಉಪನ್ಯಾಸ, ಅಂಕಣ ಮತ್ತು ಕೃತಿಗಳ ಮೂಲಕ ಅಸಂಖ್ಯಾತ ಜನರ ಮನಸ್ಸಿಗೆ ಸಾಂತ್ವನ ನೀಡಿದ ಮಹಾ ಗುರು. ಗದುಗಿನ ಶಿವಾನಂದ ಶ್ರೀಗಳ ಪರಂಪರೆಗೆ ಸೇರಿದ ವಿಜಯಪುರದ ಜ್ಞಾನಯೋಗಾಶ್ರಮ ಅಧ್ಯಕ್ಷರಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾವಿರಾರು ಹಳ್ಳಿಗಳಲ್ಲಿ ಸಂಚರಿಸಿ ಜ್ಞಾನದಾಸೋಹ ನೀಡಿದವರು. ಶ್ರೀಗಳ ದೇಹಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಿಜಯಪುರದ ಜ್ಞಾನಯೋಗಾಶ್ರಮದ ಮುಂದೆ ಕಣ್ಣೀರಾಗುತ್ತಿರುವ ಭಕ್ತ ಸಮೂಹ
ಕೆಲವೇ ಕ್ಷಣಗಳಲ್ಲಿ ಶೀಗಳ ಅಂತಿಮ ದರ್ಶನಕ್ಕೆ ಅವಕಾಶ ಸಿಗಲಿದೆ. ಮಠದಿಂದ ಶ್ರೀಗಳ ಪಾರ್ಥಿವ ಶರೀರವನ್ನು ಹೊರಕ್ಕೆ ತರಲಾಗುತ್ತಿದೆ.
ಮಠದ ವಿಶ್ರಾಂತಿ ಕೊಠಡಿಯಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಕೆ.
ಶೀಘ್ರವೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ
ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಅಂದಾಜು 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ- ಗೃಹ ಸಚಿವ ಜ್ಞಾನೇಂದ್ರ ಆರಗ.
ಶ್ರೀಗಳ ಇಚ್ಛೆಯಂತೆ ಸರಳವಾಗಿ ನಡೆಯಲಿದೆ ಅಂತಿಮ ಶವಸಂಸ್ಕಾರದ ಪ್ರಕ್ರಿಯೆಗಳು.