ವಿಜಯಪುರ: ಭಕ್ತರ ಪಾಲಿಗೆ ನಡೆದಾಡುವ ದೇವರು, ನಡೆದಾಡುವ ವಿಶ್ವಕೋಶ, ಜ್ಞಾನದ ನಿಧಿ, ಎರಡನೇ ವಿವೇಕಾನಂದ ಆಗಿದ್ದ ಪ್ರಖ್ಯಾತ ವಾಗ್ಮಿ, ಧಾರ್ಮಿಕ ಚಿಂತಕ, ಲೇಖಕ, ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರ ಅಂತಿಮ ವಿಧಿವಿಧಾನ ಪ್ರಕ್ರಿಯೆಗಳು ಆರಂಭವಾಗಿವೆ. ಇದಕ್ಕೂ ಮೊದಲು ವಿಜಯಪುರದ ಸೈನಿಕ ಶಾಲೆಯಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರಿ ಸಕಲ ಗೌರವಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ.
ಸೀದಾಸಾದಾ, ಸರಳ, ಸುಂದರ ಅಧ್ಯಾತ್ಮಿಕ ಜೀವನದ ಮೂಲಕ ಜನಮನದ ಮೇಲೆ ಗಾಢ ಪ್ರಭಾವ ಬೀರಿದ ಅವರು ಉಪನ್ಯಾಸ, ಅಂಕಣ ಮತ್ತು ಕೃತಿಗಳ ಮೂಲಕ ಅಸಂಖ್ಯಾತ ಜನರ ಮನಸ್ಸಿಗೆ ಸಾಂತ್ವನ ನೀಡಿದ ಮಹಾ ಗುರು. ಗದುಗಿನ ಶಿವಾನಂದ ಶ್ರೀಗಳ ಪರಂಪರೆಗೆ ಸೇರಿದ ವಿಜಯಪುರದ ಜ್ಞಾನಯೋಗಾಶ್ರಮ ಅಧ್ಯಕ್ಷರಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಾವಿರಾರು ಹಳ್ಳಿಗಳಲ್ಲಿ ಸಂಚರಿಸಿ ಜ್ಞಾನದಾಸೋಹ ನೀಡಿದವರು. ಶ್ರೀಗಳ ದೇಹಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸರ್ಕಾರ ನೀಡುವ ಪ್ರಶಸ್ತಿಗಳನ್ನು ನಯವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರಶ್ರೀಗಳು.
ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಣ್ಣೆದುರಿಲ್ಲ ಅಷ್ಟೇ,
— C T Ravi 🇮🇳 ಸಿ ಟಿ ರವಿ (@CTRavi_BJP) January 2, 2023
ಜಂಗಮರಿಗೆಂದೂ ಅಳಿವಿಲ್ಲ.
ಅಪಾರ ಜ್ನಾನಯೋಗಿ ಎದುರಿಗಿರಲ್ಲ ಅವರ ಜ್ಞಾನವನ್ನು ಹಂಚಿ ಹೊರಟ್ಟಿದ್ದಾರೆ.
ವೈಕುಂಠ ಏಕಾದಶಿಯಂದೇ ಶಿವನತ್ತ ಹೊರಟ್ಟಿದ್ದಾರೆ.
ಓಂ ಶಾಂತಿ pic.twitter.com/dyZpOvEZJS
ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ
— Basavaraj S Bommai (@BSBommai) January 2, 2023
2/2
ಶತಮಾನದ ಸಂತ, ನಾಡು ಕಂಡ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರವುದು ತುಂಬಾ ನೋವುಂಟು ಮಾಡಿದೆ…. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಜ್ಞಾನದ ಬೆಳಕು ನಮ್ಮನ್ನು ಸದಾ ಕಾಯುತ್ತಿರಲಿ🙏 pic.twitter.com/TDVmpChPbW
— Dhananjaya (@Dhananjayaka) January 2, 2023
ಆಶ್ರಮದ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ವೇದಿಕೆ ನಿರ್ಮಾಣ
ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ
ಒಂದು ಗೇಟ್‌ನಿಂದ ಆಗಮಿಸಿ, ಮತ್ತೊಂದು ಗೇಟ್‌ನಿಂದ ತೆರಳಲು ಭಕ್ತರಿಗೆ ವ್ಯವಸ್ಥೆ
ರಾಜ್ಯದ ಜನತೆಗೆ ಮಂಗಳವಾರ ಬೆಳಗ್ಗೆ ಸೈನಿಕ ಶಾಲೆ ಬಳಿ ಅಂತಿಮ ದರ್ಶನಕ್ಕೆ ಸಿದ್ಧತೆ