Site icon Vistara News

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Exit mobile version