Journalism Day : ಸತ್ಯಾನ್ವೇಷಣೆ, ಸಾಮಾಜಿಕ ಕಾಳಜಿಯೇ ಪತ್ರಕರ್ತರ ಮೂಲ ಗುಣವಾಗಲಿ ಎಂದ ಹರಿಪ್ರಕಾಶ್‌ ಕೋಣೆಮನೆ - Vistara News

ಉತ್ತರ ಕನ್ನಡ

Journalism Day : ಸತ್ಯಾನ್ವೇಷಣೆ, ಸಾಮಾಜಿಕ ಕಾಳಜಿಯೇ ಪತ್ರಕರ್ತರ ಮೂಲ ಗುಣವಾಗಲಿ ಎಂದ ಹರಿಪ್ರಕಾಶ್‌ ಕೋಣೆಮನೆ

Journalism Day : ಸಾಮಾಜಿಕ ಕಾಳಜಿ ಮತ್ತು ಒಳಿತಿನ ಆಶಯಗಳು ಪತ್ರಕರ್ತರ ಮೂಲಗುಣವಾಗಿರಬೇಕು. ಯಾವುದೇ ಸನ್ನಿವೇಶದಲ್ಲೂ ಕೆಲಸ ಮಾಡಬಲ್ಲ ಯೋಧನ ತಾಕತ್ತಿರಬೇಕು ಎಂದು ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಹೇಳಿದ್ದಾರೆ.

VISTARANEWS.COM


on

Journalism day Hariprakash Konemane
ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಪತ್ರಕರ್ತ ಎಂದರೆ ಸತ್ಯದ ಶೋಧಕ (Fact Finder). ಪ್ರತ್ಯಕ್ಷವಾಗಿ ಕಂಡ ಪರೋಕ್ಷವಾಗಿ ಕೇಳಿದ ವಿಷಯಗಳ ಸತ್ಯಾನ್ವೇಷಣೆ ಮಾಡುವುದು (education news) ಪತ್ರಕರ್ತನ ಮೂಲಗುಣವಾಗಬೇಕು. ಸಾಮಾಜಿಕ ಕಾಳಜಿ (Social concern) ಮತ್ತು ಒಳಿತಿನ ಆಶಯಗಳು ಇರುವ ಪತ್ರಕರ್ತರು ವೃತ್ತಿ ಬದುಕಿನಲ್ಲಿ ಗೆಲ್ಲುತ್ತಾರೆ ಮತ್ತು ಸಮಾಜಕ್ಕೂ ಕೊಡುಗೆ ನೀಡುತ್ತಾರೆ ಎಂದು ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕರು ಮತ್ತು ಸಿಇಒ ಆಗಿರುವ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ (Vishwadarshana Educational Institute) ಶ್ರೀ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಕರ್ನಾಟಕ ಜರ್ನಲಿಸ್ಟ್ಸ್‌ ಯೂನಿಯನ್ ಯಲ್ಲಾಪುರ ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ (Journalism Day) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Journalism day inauguration
ಪತ್ರಿಕಾ ದಿನಾಚರಣೆಯನ್ನು ಹರಿಪ್ರಕಾಶ್‌ ಕೋಣೆಮನೆ ಅವರು ಉದ್ಘಾಟಿಸಿಸಿದರು. ನಾಗರಾಜ ಇಳೆಗುಂಡಿ ಮತ್ತು ಶಂಕರ್‌ ಭಟ್‌ ತಾರಿಮಕ್ಕಿ ಉಪಸ್ಥಿತರಿದ್ದರು.

ಪತ್ರಕರ್ತರು ಯೋಧರಿದ್ದಂತೆ

ʻʻಪತ್ರಕರ್ತ ಒಬ್ಬ ಯೋಧನಂತೆ. ಎಲ್ಲಿಯೇ, ಯಾವುದೇ ಸನ್ನಿವೇಶದಲ್ಲೂ ಕಾರ್ಯ ನಿರ್ವಹಿಸುವ ಧೋರಣೆ, ಮಾನಸಿಕ ಕ್ಷಮತೆ ಹೊಂದಿರಬೇಕು. ಪತ್ರಕರ್ತರಿಗೆ ಮಣ್ಣಿನ ಸೊಗಡಿರಬೇಕು. ಕಷ್ಟಗಳನ್ನು ಎದುರಿಸುವ ಶಕ್ತಿ ಇರಬೇಕು. ಅಂದಾಗ ಮಾತ್ರ ಆತ ಯಶಸ್ಸು ಕಾಣಲು ಸಾಧ್ಯʼʼ ಎಂದು ಹೇಳಿದ ಹರಿಪ್ರಕಾಶ್‌ ಕೋಣೆಮನೆ ಅವರು, ನಮ್ಮ ಉತ್ತರ ಕನ್ನಡದ ಮಣ್ಣಿಗೆ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ವಿಶೇಷವಾದ ಗುಣವಿದೆ. ಇಲ್ಲಿನ ಅನೇಕರು ರಾಜ್ಯದ ಅನೇಕ ಪತ್ರಿಕೆಗಳ ಪ್ರಮುಖ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿದರು.

ಪ್ರವೃತ್ತಿಯಾಗಿದ್ದಾಗ ಉತ್ತಮ ಕೊಡುಗೆ

ʻʻನಮ್ಮ ಜೀವನದಲ್ಲಿ ವೃತ್ತಿಗಿಂತಲೂ ಪ್ರವೃತ್ತಿಗೆ ವಿಶೇಷ ಸ್ಥಾನವಿದೆ. ಮಾಡುವ ವೃತ್ತಿಯನ್ನು ಪ್ರೀತಿಸದೇ ಇದ್ದರೂ, ಪ್ರವೃತ್ತಿಯನ್ನು ಎಂದಿಗೂ ದ್ವೇಷಿಸುವುದಿಲ್ಲ. ಪತ್ರಿಕೋದ್ಯಮವನ್ನು ಯಾರೆಲ್ಲ ಪ್ರವೃತ್ತಿಯಾಗಿ ಸ್ವೀಕರಿಸುತ್ತಾರೋ ಅವರಿಂದ ಪತ್ರಿಕೋದ್ಯಮಕ್ಕೆ ಅಪಾರ ಕೊಡುಗೆ ದೊರೆತಿದೆʼʼ ಎಂದು ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

ಪ್ರಚಲಿತ ವಿದ್ಯಮಾನಗಳ ಅರಿವು ಇರಲಿ

ʻʻಪತ್ರಕರ್ತನಿಗೆ ಪ್ರಚಲಿತ ಆಗುಹೋಗುಗಳು, ನ್ಯಾಯಾಂಗ ವ್ಯವಸ್ಥೆ ಹಾಗೂ ರಾಜಕೀಯದ ಕುರಿತು ಕನಿಷ್ಠ ಮಾಹಿತಿ ಇರಬೇಕು. ಘಟನೆಗಳ ಒಳ ವಿಶ್ಲೇಷಣೆ ನೀಡಿದಾಗ ಮಾತ್ರ ಮಾಧ್ಯಮ ಜನರಿಗೆ ನಿಖರವಾದ ವಿಚಾರ ತಲುಪಿಸಿದಂತಾಗುತ್ತದೆʼʼ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ವಿಜಯವಾಣಿ ಪತ್ರಿಕೆಯ ಸುದ್ದಿ ಸಂಪಾದಕರು ಹಾಗೂ ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ನ ನಿಯೋಜಿತ ಪ್ರಾಂಶುಪಾಲರಾದ ನಾಗರಾಜ ಇಳೆಗುಂಡಿ ಅವರು.

Journalism day at Yallapura
ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಗರಾಜ ಇಳೆಗುಂಡಿ ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಅವರು, ಸಕಾರಾತ್ಮಕ ಪತ್ರಿಕೋದ್ಯಮದ ಮೂಲಕ ಜನರನ್ನು ತಲುಪುವ ಆಯಾಮಗಳನ್ನು ಪತ್ರಕರ್ತರು ರೂಢಿಸಿಕೊಳ್ಳಬೇಕು. ಜನಪರವಾದ ನಿಲುವನ್ನು ಎತ್ತಿಹಿಡಿಯುವ ವರದಿಗಳು ಮಾಧ್ಯಮಗಳ ಏಳ್ಗೆಗೆ ಸಹಕಾರಿಯಾಗಲಿವೆʼʼ ಎಂದರು. ಸ್ವಾತಂತ್ರ್ಯ ಹೋರಾಟದಲ್ಲೂ ಪತ್ರಿಕೆಗೆ ಮಹತ್ವದ ಸ್ಥಾನವಿದ್ದುದನ್ನು ಅವರು ಸ್ಮರಿಸಿದರು.

ಪತ್ರಿಕೋದ್ಯಮಕ್ಕೆ ದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಲೂ ಹೊಸ ಉತ್ಸಾಹದ ಪೀಳಿಗೆಗಳು ಮುಂದುವರಿಯುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು ನಾಗರಾಜ ಇಳೆಗುಂಡಿ.

ಉತ್ತಮ ಸುದ್ದಿಯನ್ನು ಬಿತ್ತರಿಸೋಣ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಜೆಯು ತಾಲೂಕಾಧ್ಯಕ್ಷ ಶಂಕರ್ ಭಟ್ ತಾರಿಮಕ್ಕಿ ಅವರು ಜನರಿಗೆ ಉತ್ತಮ ಸುದ್ದಿ ಕೊಡುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ʻʻಪತ್ರಕರ್ತರಾದ ನಾವು ಈ ಹಿಂದೆ ಇದ್ದ ಉತ್ಸುಕತೆಯನ್ನು ಕಳೆದುಕೊಂಡಿದ್ದೇವೆ. ಸೋಶಿಯಲ್ ಮೀಡಿಯಾದಲ್ಲಿ ಬರುವ ಸುದ್ದಿಗಳನ್ನು ಹೆಚ್ಚಾಗಿ ಅವಲಂಬಿಸಿದ್ದೇವೆ. ಕಾರ್ಯಕ್ರಮಗಳ ಸಂದೇಶವನ್ನು ಸಮಾಜಕ್ಕೆ ಸಾರುವ ಕಾರ್ಯದಲ್ಲಿ ನಾವು ಹಿಂದೇಟು ಹಾಕುತ್ತಿದ್ದೇವೆ. ಉತ್ತಮ ಕಾರ್ಯಕ್ರಮಗಳ ಪೂರಕ ಸುದ್ದಿ ಬಿತ್ತರಿಸುವ ಕಾರ್ಯ ಮಾಡೋಣʼʼ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಜಯ ಭಾರತೀಯ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಮಾಜದ ಪ್ರಮುಖರು ಇದ್ದರು. ಕೆಜೆಯು ಉಪಾಧ್ಯಕ್ಷ ವಿಶ್ವೇಶ್ವರ ಗಾಂವ್ಕರ್ ಸ್ವಾಗತಿಸಿದರು. ಕಾರ್ಯದರ್ಶಿ ಕೇಬಲ್ ನಾಗೇಶ ನಿರ್ವಹಿಸಿದರು. ರಾಜ್ಯ ಸಮಿತಿ ಸದಸ್ಯ ನಾಗರಾಜ ಮದ್ಗುಣಿ ವಂದಿಸಿದರು.

ಇದನ್ನೂ ಓದಿ : ಪುಸ್ತಕಗಳನ್ನು ಪ್ರೀತಿಸಿ, ಅವು ನಿಮ್ಮ ಬದುಕನ್ನು ಬೆಳಗಿಸುತ್ತವೆ: ಹರಿಪ್ರಕಾಶ್‌ ಕೋಣೆಮನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು , ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದೆ (Karnataka Weather Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಲಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಕೆಲವೊಮ್ಮೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ , ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಜತೆಗೆ ಬಿರುಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಬಿರುಗಾಳಿ ಎಚ್ಚರಿಕೆಯನ್ನು (Rain News) ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಗುರುವಾರದಂದು ಹಗುರದಿಂದ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಲಘುವಾಗಿ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ವಿಜಯನಗರ, ಕೊಪ್ಪಳ, ವಿಜಯಪುರ ಮತ್ತು ಬಾಗಲಕೋಟೆಯಲ್ಲೂ ಭರ್ಜರಿ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾಗಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಭಾರಿ ಮಳೆ, ಬಿರುಗಾಳಿಗೆ ನೆಲಕ್ಕುರುಳಿದ ಭತ್ತ

ಭಾರಿ ಮಳೆ, ಬಿರುಗಾಳಿಗೆ ಭತ್ತ ನೆಲಕ್ಕುರುಳಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ಘಟನೆ ನಡೆದಿದೆ. ಮುಂಗಾರು ಮುಗಿಯುವ ವೇಳೆಗೆ ಸುರಿಯುತ್ತಿರುವ ಮಳೆಗೆ ನೂರಾರು ಎಕರೆ ಭತ್ತ ಬೆಳೆಗೆ ಹಾನಿಯಾಗಿದೆ. ರೈತರಿಗೆ ಸಂಕಷ್ಟ ಎದುರಾಗಿದ್ದು, ಸಮೀಕ್ಷೆ ಮಾಡಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲೂ ಹಲವೆಡೆ ಭಾರಿ ಮಳೆಯಾಗಿದೆ. ಮಳೆಗಾಗಿ ಕಾಯುತ್ತಿದ್ದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಶೇಂಗಾ, ಮೆಕ್ಕೆಜೋಳ ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು. ಮಳೆ ಇಲ್ಲದೆ ಬೆಂಕಿ ರೋಗಕ್ಕೆ ಶೇಂಗಾ ಬೆಳೆ ತುತ್ತಾಗಿದ್ದು, ಈಗ ವರುಣ ಆಗಮನದಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Car Fire : ಧಗಧಗನೆ ಹೊತ್ತಿ ಉರಿದ ಕಾರಿನೊಳಗೆ ವ್ಯಕ್ತಿ ಸಜೀವ ದಹನ; ಇದು ಅಪಘಾತವೋ, ಕೊಲೆಯೋ!

Car Fire : ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿಯ ಜೈನಾಪುರ ಗ್ರಾಮದಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದು, ಒಳಗೆ ಇದ್ದ ವ್ಯಕ್ತಿಯೊಬ್ಬ ಸಂಪೂರ್ಣ ಸುಟ್ಟು ಕರಕಲಾಗಿದ್ದಾನೆ.

VISTARANEWS.COM


on

By

Car Fire
Koo

ಚಿಕ್ಕೋಡಿ: ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿಯ ಜೈನಾಪುರ ಗ್ರಾಮದ ಬಳಿ ಕಳೆದ ರಾತ್ರಿ ಕಾರೊಂದು ಧಗಧಗನೇ ಹೊತ್ತಿ ಉರಿದು ಸಂಪೂರ್ಣ (Car Fire) ಸುಟ್ಟು ಕರಕಲಾಗಿತ್ತು. ಕಾರಿನೊಳಗೆ ವ್ಯಕ್ತಿಯೊಬ್ಬ ಸಜೀವ ದಹನವಾಗಿದ್ದ, ಹೀಗಾಗಿ ಗುರುತು ಪತ್ತೆಯಾಗಿರಲಿಲ್ಲ. ಹೀಗಾಗಿ ಪೊಲೀಸರು ಕಾರಿನ ಚಾರ್ಸಿ ನಂಬರ್‌ ಮೂಲಕ ಮಾಲೀಕನ ಪತ್ತೆಗೆ ಮುಂದಾಗಿದ್ದರು.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದರ ತೀವ್ರತೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪೈರೋಜ್ ಬಡಗಾಂವ (40) ಕಾರಿನಲ್ಲಿದ್ದ ವ್ಯಕ್ತಿ ಎನ್ನಲಾಗುತ್ತಿದೆ. ಪೈರೋಜ್ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟ ಕಾರು ಹಾಗೂ ಮೃತದೇಹವನ್ನು ಎಫ್‌ಎಸ್‌ಎಲ್‌ ತಂಡ ಪರಿಶೀಲಿಸುತ್ತಿದೆ. ಸ್ಥಳೀಯರು ಇದು ಅಪಘಾತವೋ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆಯಾಗಿದೆ. ಉತ್ತರಕನ್ನಡದ ಭಟ್ಕಳದ ಬಂದರು ರಸ್ತೆಯ ಮುಗ್ದುಂ ಕಾಲೋನಿಯ ಸಮೀಪ ಪತ್ತೆಯಾಗಿದೆ. ವ್ಯಕ್ತಿಯೊರ್ವ ಹಾರೆಯ ಹಿಡಿಗೋಲಿಗಾಗಿ ಕಟ್ಟಿಗೆ ಹುಡುಕುತ್ತಿದ್ದಾಗ ಅಸ್ತಿಪಂಜರ ಕಂಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಒಂದೆರಡು ತಿಂಗಳ ಹಿಂದೆ ಮೃತಪಟ್ಟಿರುವ ಶಂಕೆ ಇದೆ. ನೆಲದಿಂದ ಸುಮಾರು 10 ಅಡಿ ಎತ್ತರದಲ್ಲಿ ನೈಲಾನ ಹಗ್ಗದಿಂದ ಮರಕ್ಕೆ ಬಿಗಿದ ಸ್ಥಿತಿಯಲ್ಲಿರುವ ಶವ ಸಿಕ್ಕಿದೆ. ಶವ ಕೊಳೆತು ದೇಹದಿಂದ ಬೇರ್ಪಟ್ಟು ರುಂಡ ಕೆಳಗೆಬಿದ್ದಿದೆ. ಅಸ್ತಿಪಂಜರದ ಪಕ್ಕದಲ್ಲಿ ಪುರುಷನ ಪಾದರಕ್ಷೆ ಪತ್ತೆಯಾಗಿರುವುದರಿಂದ ಇದು ಪುರುಷನ ಶವ ಎಂದು ಗುರುತಿಸಿದ್ದಾರೆ. ಅಸ್ಥಿಪಂಜರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭಟ್ಕಳ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬರ್ತ್ ಡೇ ಸೆಲೆಬ್ರೇಷನ್‌ನಲ್ಲಿ ಪಿಸ್ತೂಲ್ ಸದ್ದು!

ರಿಯಲ್ ಎಸ್ಟೇಟ್ ಉದ್ಯಮಿ ಬರ್ತ್‌ ಡೇ ಸಂಭ್ರಮದಲ್ಲಿ 6 ಸುತ್ತು ಏರ್ ಫೈರ್ ಮಾಡಿ ಪುಂಡಾಟ ಮೆರೆದಿದ್ದಾರೆ. ಸೆಪ್ಟೆಂಬರ್ 22 ರಂದು ಘಟನೆ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಸ್ಕ್ರಾಪ್ ಗೋಡೌನ್‌ನಲ್ಲಿ ಸೈಯದ್ ಅಲ್ತಫ್ ಅಹಮದ್ ಗುಂಡು ಹಾರಿಸಿದ್ದಾನೆ. ಸೆಪ್ಟೆಂಬರ್ 22 ರಂದು ಮೊಯಿನ್ ಖಾನ್ ಎಂಬಾತನ ಹುಟ್ಟು ಹಬ್ಬವಿತ್ತು. ಬರ್ತ್ ಡೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಅಲ್ತಫ್ ಈ ವೇಳೆ ಏರ್ ಫೈರ್ ಮಾಡಿ ಪುಂಡಾಟ ಮೆರೆದಿದ್ದಾನೆ.

ಮಾತ್ರವಲ್ಲ ಅದನ್ನು ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿ ಬಿಲ್ಡಪ್ ತೆಗೆದುಕೊಂಡಿದ್ದಾರೆ. ಘಟನೆ ವಿಡಿಯೊ ಜುಬೇರ್ ಖಾನ್ ಲಿಮ್ರಾ ಎಂಬ ಇನ್ಸ್ಟಾ ಅಕೌಂಟ್‌ನಲ್ಲಿ ಪೋಸ್ಟ್ ಆಗಿತ್ತು. ಇದನ್ನು ಗಮನಿಸಿದ್ದ ಬೆಂಗಳೂರು ಪೊಲೀಸ್ ಸೋಷಿಯಲ್ ಮೀಡಿಯಾ ವಿಂಗ್ ತಕ್ಷಣ ಅಪರಾಧ ವಿಭಾಗ-2 ಡಿಸಿಪಿ ಶ್ರೀನಿವಾಸ್ ಗೌಡಗೆ ಮಾಹಿತಿ ನೀಡಿದೆ. ಮಾಹಿತಿ ಆಧರಿಸಿ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿ ಅಲ್ತಾಫ್‌ನ ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಹಾಗೂ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
navaratri
ಬೆಂಗಳೂರು4 ಗಂಟೆಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು4 ಗಂಟೆಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು4 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು5 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು5 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು7 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ7 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು8 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು9 ಗಂಟೆಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು9 ಗಂಟೆಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ದಿನ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌