ಬೆಂಗಳೂರು: ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್. ಭುವನೇಶ್ವರಿ (S Bhuvaneshwarii) (47) ಅವರು ಬುಧವಾರ ಬೆಳಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹಾಸನದವರಾದ ಭುವನೇಶ್ವರಿ ಅವರು ದಿ ಹಿಂದು ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಸೇವೆ ಸಲ್ಲಿಸಿದ್ದರು. ಕ್ರಿಯಾಶೀಲರಾಗಿದ್ದ ಅವರು ಸಾಕಷ್ಟು ಉತ್ತಮ ವರದಿಗಳನ್ನು ಮಾಡಿದ್ದಾರೆ. ಪತಿ, ಪುತ್ರ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಇವರು ಥೈರಾಯ್ಡ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕೆಯುಡಬ್ಲ್ಯುಜೆ ಸಂತಾಪ: ಹಿರಿಯ ಪತ್ರಕರ್ತೆ ಭುವನೇಶ್ವರಿ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಇದನ್ನೂ ಓದಿ: Ram Mandir : ಅಯೋಧ್ಯೆಯಿಂದ 8 ನಗರಗಳಿಗೆ ನೇರ ವಿಮಾನ; ಇಲ್ಲಿದೆ ಪೂರ್ಣ ವೇಳಾಪಟ್ಟಿ
ಕೆಯುಡಬ್ಲ್ಯುಜೆ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳುತ್ತಿದ್ದ ಅವರು, ಕ್ರಿಯಾಶೀಲ ವರದಿಗಾರರಾಗಿದ್ದರು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.