ತುಮಕೂರು: ತುಮಕೂರಿನಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು ಮತ್ತು ಪದಾಧಿಕಾರಿಗಳ ಬೃಹತ್ ಸಭೆಗೆ ವೇದಿಕೆ ಸಿದ್ಧವಾಗಿದ್ದು, (Karnataka Elections) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಆಗಮಿಸಿದ್ದಾರೆ.
ತುಮಕೂರು ಮತ್ತು ಮಧುಗಿರಿ ಸಂಘಟನಾ ಜಿಲ್ಲೆಗಳ ಸಭೆ ಇದಾಗಿದ್ದು, ತುಮಕೂರು ನಗರದ ವಿನಾಯಕ ಕಲ್ಯಾಣ ಮಂಟಪದಲ್ಲಿ ಆಯೋಜನೆಯಾಗಿದೆ. ಬಿಜೆಪಿ ಇನ್ನೂ ಶಕ್ತಿ ಹೊಂದಿಲ್ಲದ ಈ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ನಡೆಸುತ್ತಿರುವ ಮಹತ್ವದ ಪ್ರಯತ್ನ ಇದಾಗಿದೆ.
ತುಮಕೂರು ವಿವಿ ಹೆಲಿಪ್ಯಾಡ್ ಗೆ ಬಂದಿಳಿದ ನಡ್ಡಾ ಅವರನ್ನು ಬಿಜೆಪಿ ಶಾಸಕರಾದ ಅರವಿಂದ ಲಿಂಬಾವಳಿ, ಬಿಜೆಪಿ ಮುಖಂಡರಾದ ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್, ಸಿ.ಟಿ. ರವಿ, ಮಾಧುಸ್ವಾಮಿ, ಮಾಜಿ ಶಾಸಕ ಕಿರಣ್ ಕುಮಾರ್, ಸೊಗಡು ಶಿವಣ್ಣ ಸೇರಿದಂತೆ ಹಲವರು ಸ್ವಾಗತಿಸಿದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರಾದ ಜೆ.ಸಿ. ಮಾಧುಸ್ವಾಮಿ, ಬಿ.ಸಿ. ನಾಗೇಶ್, ರಾಜ್ಯಸಭಾ ಸದಸ್ಯ ಜಿವಿಎಲ್ ನರಸಿಂಹ ರಾವ್, ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕರಾದ ಮಸಾಲೆ ಜಯರಾಂ, ರಾಜೇಶ್ ಗೌಡ, ಜ್ಯೋತಿ ಗಣೇಶ್, ಚಿದಾನಂದ ಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ, ರಾಜ್ಯ ಉಪಾಧ್ಯಕ್ಷ ಎಂ.ಬಿ. ನಂದೀಶ್, ಮಾಜಿ ಶಾಸಕರಾದ ಸುರೇಶ್ ಗೌಡ, ಎಂ.ಆರ್. ಹುಲಿನಾಯ್ಕರ್, ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಮತ್ತು ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್ ಉಪಸ್ಥಿತರಲಿದ್ದಾರೆ.
ತುಮಕೂರಿಗೆ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಪೊಲೀಸ್ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ತುಮಕೂರು ಎಸ್ ಪಿ ರಾಹುಲ್ ಕುಮಾರ್ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಡಿವೈಎಸ್ ಪಿ- 1, ಸಿಪಿಐ – 4, ಸಬ್ ಇನ್ ಸ್ಪೆಕ್ಟರ್ – 6, ಕೆಎಸ್ಆರ್ ಪಿ ತುಕಡಿ- 1, ಡಿಆರ್ ತುಕಡಿ – 1, ಹಾಗೂ 60 ಮಂದಿ ಪೊಲೀಸರ ನಿಯೋಜನೆ ಆಗಿದೆ.
ಇದನ್ನೂ ಓದಿ | Karnataka Elections | ನಾಯಿ ಮರಿ ಹೇಳಿಕೆಗೆ ಅರುಣ್ ಸಿಂಗ್ ಆಕ್ರೋಶ: ಇದು ಬೊಮ್ಮಾಯಿಗಲ್ಲ ರಾಜ್ಯದ ಜನರಿಗೆ ಅಪಮಾನ ಎಂದ ಬಿಜೆಪಿ