BJP Rathayatre: ಮಿಷನ್‌ 150 ಗುರಿಯ ವಿಜಯ ಸಂಕಲ್ಪ ರಥಯಾತ್ರೆಗೆ ಜೆ.ಪಿ. ನಡ್ಡಾ ಚಾಲನೆ; ವಿ. ಸೋಮಣ್ಣ ಗೈರು - Vistara News

ಕರ್ನಾಟಕ

BJP Rathayatre: ಮಿಷನ್‌ 150 ಗುರಿಯ ವಿಜಯ ಸಂಕಲ್ಪ ರಥಯಾತ್ರೆಗೆ ಜೆ.ಪಿ. ನಡ್ಡಾ ಚಾಲನೆ; ವಿ. ಸೋಮಣ್ಣ ಗೈರು

BJP Rathayatre: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಮಾವೇಶಗಳ ಹೊರತಾಗಿ ಬೇರೆ ಬೇರೆ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿ ಬುಧವಾರದಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥಯಾತ್ರೆಗೆ ಚಾಮರಾಜನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು.

VISTARANEWS.COM


on

JP Nadda launches Vijay Sankalpa RathYatre aimed at Mission 150 V Somanna absent BJP Rathayatre updated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಾಮರಾಜನಗರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಿಷನ್‌ 150 ಗುರಿ ಹೊತ್ತು ಸಾಗುತ್ತಿರುವ ರಾಜ್ಯ ಬಿಜೆಪಿ ಮಾರ್ಚ್‌ 1ರಿಂದ 20ರವರೆಗೆ ರಾಜ್ಯದ ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲೂ ಸಂಚರಿಸುವ ಬೃಹತ್‌ ರಥ ಯಾತ್ರೆಯ ಭಾಗವಾದ “ವಿಜಯ ಸಂಕಲ್ಪ ರಥಯಾತ್ರೆ”ಗೆ (BJP Rathayatre) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಮರಾಜನಗರದ ಮಲೈ ಮಹದೇಶ್ವರ ದೇವಸ್ಥಾನದಿಂದ ಬುಧವಾರ (ಮಾ.1) ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಸೇರಿದಂತೆ ಇತರ ಪ್ರಮುಖರು ಸಾಥ್‌ ನೀಡಿದರು.

ಒಟ್ಟು ನಾಲ್ಕು ತಂಡಗಳ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಈಗ ಚಾಮರಾಜನಗರದಲ್ಲಿ ಮೊದಲ ತಂಡಕ್ಕೆ ಚಾಲನೆಯನ್ನು ನೀಡಲಾಗಿದೆ. ಒಟ್ಟಾರೆಯಾಗಿ ಮಾರ್ಚ್‌ 25ರಂದು ದಾವಣಗೆರೆಯಲ್ಲಿ ನಡೆಯುವ ಬೃಹತ್‌ ಸಮಾವೇಶದೊಂದಿಗೆ ಈ ರಥಯಾತ್ರೆಗೆ ತೆರೆ ಬೀಳಲಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ನಿರೀಕ್ಷೆ ಇದೆ.

ಈ ರಥಯಾತ್ರೆಯು 10 ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಂಚಾರ ಮಾಡಲಿದೆ. ‌

ಇದನ್ನೂ ಓದಿ: Molasses Scam: ಕಾಕಂಬಿ ರಫ್ತು ಹಗರಣದಲ್ಲಿ ಸಿಎಂ, ಕೇಂದ್ರ ಸಚಿವರು ಭಾಗಿ: ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ಆರೋಪ

ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಚಿವರಾದ ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ವಿ. ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಆರಗ ಜ್ಞಾನೇಂದ್ರ, ಶಾಸಕ ಎನ್. ಮಹೇಶ್, ಸಂಸದ ಶ್ರೀನಿವಾಸ ಪ್ರಸಾದ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ಅವರು ಇದರ ಸಾರಥಿಗಳಾಗಿದ್ದಾರೆ. ಆದರೆ, ಸಚಿವ ವಿ.ಸೋಮಣ್ಣ ಗೈರು ಹಾಜರಾಗಿದ್ದರು. ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಂದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸೋಮಣ್ಣ ಆಗಮಿಸದೇ ಇರುವುದು ಗೊಂದಲಕ್ಕೆ ಕಾರಣವಾಗಿದೆ. ಸಚಿವ ಸೋಮಣ್ಣ ನಡೆ ನಿಗೂಢವಾಗಿದೆ.

20 ದಿನ, 224 ಕ್ಷೇತ್ರಗಳು, 150 ರೋಡ್‌ ಶೋ, 4 ಕೋಟಿ ಜನ ಸಂಪರ್ಕ

ಯಾತ್ರೆಗಳಲ್ಲಿ 50ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲ 31 ಜಿಲ್ಲೆಗಳು ಮತ್ತು 224 ವಿಧಾನಸಭಾ ಕ್ಷೇತ್ರಗಳ ಸಂಪರ್ಕ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8,000 ಕಿ.ಮೀ . ಯಾತ್ರೆ ಸಂಚರಿಸಲಿದೆ. ಯಾತ್ರೆಯ ಉದ್ದಕ್ಕೂ ಒಟ್ಟು 80ಕ್ಕೂ ಹೆಚ್ಚು ರ‍್ಯಾಲಿ ಮತ್ತು 75 ಸಾರ್ವಜನಿಕ ಸಭೆಗಳು ನಡೆಯಲಿವೆ. 150ಕ್ಕೂ ಹೆಚ್ಚು ರೋಡ್ ಶೋಗಳು ಸಹಾ ನಡೆಯಲಿವೆ. ಈ ಮೂಲಕ ನಾಡಿನ 4 ಕೋಟಿ ಜನರನ್ನು ಸಂಪರ್ಕಿಸುವ ಗುರಿಯನ್ನು ಹೊಂದಲಾಗಿದೆ. ಅಲ್ಲದೆ, ಯಾತ್ರೆಯ ಅವಧಿ 20 ದಿನಗಳಾಗಿದ್ದು, 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ.

ಇದನ್ನೂ ಓದಿ: Govt Employees Strike : ಎನ್‌ಪಿಎಸ್‌ ರದ್ದು ಪರಿಶೀಲನೆಗೆ ವಿಶೇಷ ಸಮಿತಿ ರಚನೆ; ಸರ್ಕಾರಿ ಆದೇಶದಲ್ಲಿ ಹೇಳಿರುವುದೇನು?

ಮಾರ್ಚ್ 25ರಂದು ದಾವಣಗೆರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಮೆಗಾ ರ‍್ಯಾಲಿ ನಡೆಯಲಿದೆ. ಬಿಜೆಪಿ ಸರ್ಕಾರಗಳ ಸಾಧನೆ, ಕಾಂಗ್ರೆಸ್‍ನ ಭರವಸೆಗಳು ಏನಾಗಿವೆ? ಎಂಬಿತ್ಯಾದಿ ವಿಷಯಗಳನ್ನು ತಿಳಿಸುವ ಉದ್ದೇಶವನ್ನು ಈ ರಥಯಾತ್ರೆ ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading
Advertisement
Latest46 minutes ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest24 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌