ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ (JP Nadda) ಅವರು ಮಂಗಳವಾರ ಬೆಳಗ್ಗೆ ಶೃಂಗೇರಿಯಲ್ಲಿ ಶ್ರೀ ಶಾರದಾಂಬೆಯ ದರ್ಶನ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಸಾಥ್ ನೀಡಿದರು.
ಸೋಮವಾರ ಬೆಳಗ್ಗೆ ಉಡುಪಿಗೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ಧರ್ಮ ಸಭೆಯಲ್ಲಿ ಭಾಗವಹಿಸಿದ್ದ ನಡ್ಡಾ ಅವರು ಬಳಿಕ ಉಡುಪಿ ಮತ್ತು ಬೈಂದೂರಿನಲ್ಲಿ ನಡೆದ ಬಿಜೆಪಿ ಸಮಾವೇಶಗಳಲ್ಲಿ ಪಾಲ್ಗೊಂಡಿದ್ದರು. ರಾತ್ರಿ ತೀರ್ಥಹಳ್ಳಿಯಲ್ಲಿ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಂಡು ಬೆಳೆಗಾರರಿಗೆ ಅಭಯ ನೀಡಿದ್ದ ನಡ್ಡಾ ಬಳಿಕ ರಾತ್ರಿಯೇ ಶೃಂಗೇರಿಗೆ ಬಂದಿದ್ದರು. ರಾತ್ರಿಯೇ ಮಠಕ್ಕೆ ತೆರಳಿ ಸ್ವಾಮೀಜಿಗಳ ದರ್ಶನ ಪಡೆದು ಮಾತುಕತೆ ನಡೆಸಿದ್ದರು.
ಚಿಕ್ಕಮಗಳೂರಿಗೆ ಪಯಣ
ಮಠದಲ್ಲೇ ಉಳಿದಿದ್ದ ಅವರು ಬೆಳಗ್ಗೆ ದೇವರ ದರ್ಶನದ ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ತೆರಳಿ ಅಲ್ಲಿ ಶಾಸಕ ಸಿ.ಡಿ. ರವಿ ಮನೆಯಲ್ಲಿ ಉಪಾಹಾರ ಸೇವಿಸಲಿದ್ದಾರೆ. 10.30ಕ್ಕೆ ನಗರದ ಕುವೆಂಪು ಕಲಾಮಂದಿರದಲ್ಲಿ ಪ್ರಬುದ್ಧರ ಸಭೆ ನಡೆಸುವರು. ಇದರಲ್ಲಿ ಜಿಲ್ಲೆ ಶಾಸಕರು, ಪ್ರಮುಖ ಕಾರ್ಯಕರ್ತರು ಭಾಗಿಯಾಗುವರು.
ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೇಲೂರಿಗೆ ತೆರಳಿ ಅಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : Areca Growers Meeting: ಬಿಜೆಪಿ ಮಾತ್ರ ಅಡಿಕೆ ಬೆಳೆಗಾರರ ಬೆನ್ನಿಗೆ ನಿಂತಿದೆ: ಜೆ.ಪಿ.ನಡ್ಡಾ