ಬೆಂಗಳೂರು: ಜಸ್ಟೀಸ್ ಕೆ.ಎಸ್. ಹೆಗ್ಡೆ (Justice KS Hegde) ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ಅವರ ಜೀವನ ಹಾಗೂ ಕೊಡುಗೆಗಳ ಕುರಿತು “ಪ್ರಾತಸ್ಮರಣೀಯ ಜಸ್ಟೀಸ್ ಕೆ.ಎಸ್. ಹೆಗ್ಡೆ” ಶೀರ್ಷಿಕೆಯಡಿಯಲ್ಲಿ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 28ರಿಂದ ಸೆಪ್ಟೆಂಬರ್ 29ರವರೆಗೆ ಪ್ರತಿ ಭಾನುವಾರ ಸಂಜೆ 5.30ರಿಂದ 6 ಗಂಟೆಯವರೆಗೆ ವಿಶೇಷ ಕಾರ್ಯಕ್ರಮ ಪ್ರಸಾರವಾಗುತ್ತಿದೆ.
ಇದನ್ನೂ ಓದಿ: PM Narendra Modi : ಆಗಸ್ಟ್ 23ರಂದು ಉಕ್ರೇನ್ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ತಂದೆಯವರಾದ ನ್ಯಾಯಮೂರ್ತಿ ಕೌಡೂರು ಸದಾನಂದ ಹೆಗ್ಡೆ ಅವರ ಜೀವನ ನಡೆದು ಬಂದ ದಾರಿ ಹಾಗೂ ರಾಷ್ಟ್ರಕ್ಕೆ ನೀಡಿದ ಅಪಾರ ಕೊಡುಗೆ, ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿದ ಕುರಿತು ಹಾಗೂ ನ್ಯಾಯಮೂರ್ತಿಯಾಗಿ, ಲೋಕಸಭಾ ಸ್ಪೀಕರ್ ಆಗಿ, ಶಿಕ್ಷಣ ಸಂಸ್ಥೆ ಆರಂಭಿಸಿ, ಗ್ರಾಮೀಣರಿಗೂ ಉನ್ನತ ಶಿಕ್ಷಣ ದೊರಕುವಂತೆ ತಮ್ಮ ಜೀವನವನ್ನು ರಾಷ್ಟ್ರಕ್ಕಾಗಿಯೇ ಮುಡುಪಾಗಿಟ್ಟು ಎಲೆಮರೆಯ ಕಾಯಿಯಂತೆ ಆದರ್ಶ ಜೀವನ ನಡೆಸಿದ ಜಸ್ಟೀಸ್ ಕೆ.ಎಸ್.ಹೆಗ್ಡೆ ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ಅವರ ಜೀವನ ಹಾಗೂ ಕೊಡುಗೆಗಳ ಕುರಿತು ಸರಣಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ.
ಇದನ್ನೂ ಓದಿ: Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ
ಕಾರ್ಯಕ್ರಮದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಚಾನ್ಸಲರ್ ಎನ್.ವಿನಯ್ ಹೆಗ್ಡೆ, ಕ್ಯಾಪ್ಟನ್ ಪ್ರಸನ್ನ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವಾ, ಮಾಜಿ ಸಚಿವ ರಾಮಚಂದ್ರೇಗೌಡ ಹಾಗೂ ಹಿರಿಯ ವಕೀಲರು, ಗಣ್ಯರು ಜಸ್ಟೀಸ್ ಕೆ.ಎಸ್.ಹೆಗ್ಡೆ ಅವರ ಕುರಿತು ಸಂದೇಶ, ಸದಭಿಪ್ರಾಯಗಳನ್ನು ವ್ಯಕ್ತಪಡಿಸಿರುತ್ತಾರೆ ಎಂದು ಕಾರ್ಯಕ್ರಮದ ನಿರ್ದೇಶಕ ಹಾಗೂ ನಿರ್ಮಾಪಕ ದೀಪಕ್ ಆರ್. ಸಾಗರ್, ಹುಲಿದೇವರಬನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.