ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಚಾಲ್ತಿಯಲ್ಲಿರುವಾಗಲೇ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ (Justice Shivaraj Patil) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು ನಿಧನರಾದ ಬಳಿಕ ಕಳೆದ ಹತ್ತು ತಿಂಗಳಿಂದ ಈ ಹುದ್ದೆ ಖಾಲಿ ಇತ್ತು. 2018ಕ್ಕೂ ಮುನ್ನ ಮಹಾರಾಷ್ಟ್ರ-ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚನೆ ಮಾಡಲಾಗಿತ್ತು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಮರು ರಚನೆ ಮಾಡಲಾಯಿತು.
ಇದನ್ನೂ ಓದಿ | BJP 140+ ಗೆದ್ದ ನಂತರ ಕಾಂಗ್ರೆಸ್ ಆಗಲಿದೆ ಧೂಳೀಪಟ: ಬಿಎಸ್‌ವೈ ಭವಿಷ್ಯ