Site icon Vistara News

Madhugiri Election Results: ಮಧುಗಿರಿಯಲ್ಲಿ ಗೆಲುವಿನ ನಗೆ ಬೀರಿದ ಕೆ.ಎನ್. ರಾಜಣ್ಣ

Madhugiri Election Results winner K N Rajanna

Madhugiri Election Results K N Rajanna wins

ತುಮಕೂರು: ವಿಧಾನಸಭಾ ಚುನಾವಣೆಯ (Madhugiri Election Results) ಫಲಿತಾಂಶ ಹೊರಬಿದ್ದಿದ್ದು, ಮಧುಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎನ್. ರಾಜಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇವರು 35,523 ಮತಗಳ ಅಂತರದಿಂದ ಜೆಡಿಎಸ್‌ ಅಭ್ಯರ್ಥಿ ಎಂ.ವಿ.ವೀರಭದ್ರಯ್ಯ ವಿರುದ್ಧ ಜಯಭೇರಿ ಮೊಳಗಿಸಿದ್ದಾರೆ.

ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ 91,166 ಮತಗಳನ್ನು ಪಡೆದಿದ್ದು, ಜೆಡಿಎಸ್‌ ಅಭ್ಯರ್ಥಿ ಎಂ.ವಿ.ವೀರಭದ್ರಯ್ಯ 55,643 ಮತ ಹಾಗೂ ಬಿಜೆಪಿ ಅಭ್ಯರ್ಥಿ ಎಲ್‌.ಸಿ.ನಾಗರಾಜ 15,612 ಮತ ಪಡೆದಿದ್ದಾರೆ.

ಇದನ್ನೂ ಓದಿ | Pavagada Election Results: ಪಾವಗಡದಲ್ಲಿ ವಿಜಯ ಪತಾಕೆ ಹಾರಿಸಿದ ಕಾಂಗ್ರೆಸ್‌ನ ಎಚ್‌.ವಿ.ವೆಂಕಟೇಶ್

2018ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಂ.ವಿ.ವೀರಭದ್ರಯ್ಯ ಅವರು 88,521 ಮತಗಳನ್ನು ಗೆಲುವು ಪಡೆದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಕೆ.ಎನ್.ರಾಜಣ್ಣ 69,947 ಮತಗಳನ್ನು ಗಳಿಸಿದ್ದರು.

Exit mobile version