Site icon Vistara News

Endowment Awards: ಕಸಾಪದ ʼಲಿಂಗಮ್ಮ-ಡಾ.ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿಗೆ ಕೆ.ಎಸ್‌. ಸೋಮಶೇಖರ ಆಯ್ಕೆ

KS Somashekar selected to endowment award

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ವಿಶೇಷವಾಗಿ ಪ್ರಗತಿಪರ ರೈತರಿಗೆ ನೀಡುವ ʻಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ (Endowment Awards) ಪ್ರಕಟಿಸಿದೆ. 2022ನೇ ಸಾಲಿನ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಕೆ.ಆರ್‌,ಪೇಟೆಯ ಪ್ರಗತಿಪರ ಕೃಷಿಕ ಕೆ. ಎಸ್‌ ಸೋಮಶೇಖರ ಆಯ್ಕೆಯಾಗಿದ್ದಾರೆ.

ಹಿರಿಯ ಸಮಾಜ ಸೇವಕರಾದ ಡಾ. ಚಿಕ್ಕಕೊಮಾರಿಗೌಡ ಅವರು ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ವಿಶೇಷ ದತ್ತಿನಿಧಿ ಸ್ಥಾಪಿಸಿದ್ದಾರೆ. ಉತ್ತಮ ಸಾಧನೆ ಮಾಡಿದ ಪ್ರಗತಿಪರ ರೈತರಿಗೆ, ಕರ್ನಾಟಕ ಪಂಚಾಯತ್‌ ರಾಜ್‌, ಪರಿಷತ್‌ನಲ್ಲಿ ಪಂಚಾಯತ್‌ ರಾಜ್ ವ್ಯವಸ್ಥೆ ಬಗ್ಗೆ ಉತ್ತಮ ಕೆಲಸ ಮಾಡಿರುವ ಸಂಸ್ಥೆಗಳಿಗೆ, ಉತ್ತಮ ಜನಪ್ರತಿನಿಧಿಗಳಿಗೆ ಮತ್ತು ತಜ್ಞರನ್ನು ಗುರುತಿಸಿ ವರ್ಷಕ್ಕೊಬ್ಬರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.‌ ಈ ಪ್ರಶಸ್ತಿಯು 10,000 ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ಒಳಗೊಂಡಿದೆ.

ʼಶ್ರೀಮತಿ ಲಿಂಗಮ್ಮ ಮತ್ತು ಡಾ. ಚಿಕ್ಕಕೊಮಾರಿಗೌಡ ಹಾರೋಕೊಪ್ಪʼ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ. ಪರಿಷತ್‌ ಸಾಧಕರಿಗೆ ಹುಡುಕಿಕೊಂಡು ಹೋಗಿ ಪ್ರಶಸ್ತಿ ನೀಡುತ್ತದೆ. ಪ್ರಗತಿಪರ ರೈತರಿಗೆ ಕೊಡುವ ಈ ಪ್ರಶಸ್ತಿಯು ಕನ್ನಡ ಸಾಹಿತ್ಯ ಪರಿಷತ್‌ನ ಹೆಮ್ಮೆಯ ಪ್ರಶಸ್ತಿಗಳ ಪೈಕಿ ಒಂದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಗೆ ಮೂವರು ರಂಗಕರ್ಮಿಗಳು ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ದತ್ತಿ ದಾನಿಗಳಾದ ಡಾ. ಚಿಕ್ಕಕೊಮಾರಿಗೌಡ, ಸಿ. ಕೆ. ರಾಮೇಗೌಡ, ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ.ಎಂ.ಪಟೇಲ್ ಪಾಂಡು ಉಪಸ್ಥಿತರಿದ್ದರು.

Exit mobile version