ಕೋಲಾರ: ವಿಧಾನಸಭಾ ಚುನಾವಣೆ ಫಲಿತಾಂಶ (Malur Election Results) ಹೊರಬಿದ್ದಿದ್ದು, ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇವರು ಕೇವಲ 248 ಮತಗಳ ಅಂತರದಿಂದ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ವಿರುದ್ಧ ಗೆದ್ದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ 50,955 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ 50,707 ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಇ. ರಾಮೇಗೌಡ 17,627 ಮತಗಳನ್ನು ಪಡೆದಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ 49,362 ಮತಗಳನ್ನು ಗಳಿಸಿದ್ದಾರೆ.
ಮಾಲೂರು ಕ್ಷೇತ್ರದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು 1,60,666 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ವಿರುದ್ಧ 17,915 ಮತಗಳ ಅಂತರದಲ್ಲಿ ಜಯಶೀಲರಾಗಿದ್ದರು. ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಮಂಜುನಾಥ ಗೌಡ 57,762 ಮತ, ಬಿಜೆಪಿ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ 23,889 ಮತಗಳನ್ನು ಪಡೆದಿದ್ದರು.
ಇದನ್ನೂ ಓದಿ | Kolar Election Results: ಕೋಲಾರದಲ್ಲಿ ಗೆಲುವಿನ ನಗಾರಿ ಬಾರಿಸಿದ ಕಾಂಗ್ರೆಸ್‌ನ ಕೊತ್ತೂರು ಮಂಜುನಾಥ್
2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದ ಮಾಜಿ ಶಾಸಕ ಕೆ.ಎಸ್ ಮಂಜುನಾಥ್ ಗೌಡ, ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಜೆಡಿಎಸ್ ಜಿ.ಇ ರಾಮೇಗೌಡರನ್ನು ಕಣಕ್ಕಿಳಿಸಿತ್ತು. ಬಿಜೆಪಿ ಟಿಕೆಟ್ ವಂಚಿತರಾಗಿರುವ ಯುವ ಮುಖಂಡ, ಮಾಜಿ ಬಿಬಿಎಂಪಿ ಸದಸ್ಯ ಹೂಡಿ ವಿಜಯಕುಮಾರ್ ಬಿಜೆಪಿ ವಿರುದ್ಧ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಒಂದು ವೇಳೆ ಇವರು ಬಿಜೆಪಿಯಲ್ಲೇ ಇದ್ದಿದ್ದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಜಯ ಗಳಿಸಬಹುದಿತ್ತು.