ಬೆಂಗಳೂರು: ಆರ್. ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ “ಕಬ್ಜ” ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು “ಕಬ್ಜ” ಚಿತ್ರದ (Kabzaa movie) ಸಲುವಾಗಿ ಆರ್. ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ.
ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ. ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ “ಕಬ್ಜ” ಚಿತ್ರ ಸೇರಿದೆ.
ಇದನ್ನೂ ಓದಿ: Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ
ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ ಸಮಾರಂಭದಲ್ಲಿ ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನಿಮೇಷನ್ ಚಿತ್ರ ಪ್ರಶಸ್ತಿಗೆ “ಕಬ್ಜ” ಚಿತ್ರ ಭಾಜನವಾಗಿದೆ.
ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ
ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್. ಚಂದ್ರು ಅವರ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ “ಫಾದರ್” ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಅದ್ಧೂರಿಯಾಗಿ ನಡೆಯುತ್ತಿದೆ.