Site icon Vistara News

Devaraj Urs Award: ಡಿ. ದೇವರಾಜ ಅರಸು ಪ್ರಶಸ್ತಿಗೆ ಕಾಗೋಡು ತಿಮ್ಮಪ್ಪ ಆಯ್ಕೆ

D Kagodu Thimmappa

ಬೆಂಗಳೂರು: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ. ಆಗಸ್ಟ್‌ 20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಮಾಹಿತಿ ನೀಡಿದ್ದಾರೆ. ಸಾಹಿತಿ ಹಿ.ಶಿ. ರಾಮಚಂದ್ರೇಗೌಡ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಇದನ್ನೂ ಓದಿ | Lok Sabha Election 2024 : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ?

Exit mobile version