Site icon Vistara News

Kalaburagi News: ಅಫಜಲಪುರದ ಗೌರ್‌(ಬಿ) ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ; ಕಡಿವಾಣಕ್ಕೆ ಒತ್ತಾಯ

Forced to stop sale of illegal liquor at gour b village

ಅಫಜಲಪುರ: ತಾಲೂಕಿನ ಗೌರ್ (ಬಿ) ಗ್ರಾಮದಲ್ಲಿ ಅಕ್ರಮವಾಗಿ ಮದ್ಯ (Illegal Liquor) ಮಾರಾಟವನ್ನು ಮಾಡಲಾಗುತ್ತಿದ್ದು, ಇದರಿಂದ ಮಕ್ಕಳು ಮದ್ಯ ವ್ಯಸನಕ್ಕೆ ಈಡಾಗುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ಕೂಡಲೇ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮಹಿಳೆಯರು ಸ್ಥಳೀಯ ಶಾಸಕ ಎಂ.ವೈ. ಪಾಟೀಲ್ ಅವರಿಗೆ ಮನವಿ ಮಾಡಿದರು.

ಪಾನ್‌ಶಾಪ್‌, ಕಿರಾಣಿ ಅಂಗಡಿಗಳಲ್ಲಿ ಮದ್ಯ

ತಾಲೂಕಿನ ಗೌರ್(ಬಿ) ಗ್ರಾಮದಲ್ಲಿ ಅಕ್ರಮವಾಗಿ ಪಾನ್‌ಶಾಪ್‌ಗಳಲ್ಲಿ, ಕಿರಾಣಿ ಅಂಗಡಿಗಳು ಸೇರಿದಂತೆ ಹಲವು ಕಡೆಗಳಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮದ ಮಹಿಳೆಯರು ಆರೋಪಿಸಿದರು.

ಇದನ್ನೂ ಓದಿ: Amit Shah: ಜನನ- ಮರಣ ನೋಂದಣಿ ಜತೆಗೆ ಮತದಾರರ ಪಟ್ಟಿ ಜೋಡಣೆ: ಅಮಿತ್ ಶಾ

ಕೂಡಲೇ ಕಡಿವಾಣ ಹಾಕಿ

ಗ್ರಾಮದ ಎಲ್ಲೆಂದರಲ್ಲಿ ಮದ್ಯ ಮಾರಾಟ ಮಾಡುತ್ತಿರುವುದರಿಂದಾಗಿ ಮಕ್ಕಳು ಮದ್ಯ ವ್ಯಸನಕ್ಕೆ ದಾಸರಾಗುತ್ತಿದ್ದಾರೆ, ಇದರಿಂದಾಗಿ ಸಂಸಾರಗಳು ಬೀದಿ ಪಾಲಾಗುತ್ತಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಕೂಡಲೇ ಇದಕ್ಕೆ ಕಡಿವಾಣ ಹಾಕಲೇಬೇಕು ಎಂದು ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಅವರಿಗೆ ಗ್ರಾಮಸ್ಥರು ಪಟ್ಟುಹಿಡಿದರು.

ಇದನ್ನೂ ಓದಿ: Fact Check: ಕಾಂಗ್ರೆಸ್​ ಗೆದ್ದಿದ್ದಕ್ಕೆ ಬೆಂಗಳೂರಿನ ಈ ಐಟಿ ಕಂಪನಿ ಇಷ್ಟೆಲ್ಲ ಸಂಭ್ರಮಿಸಿತಾ?-ತಮಟೆ ಬಾರಿಸುವಷ್ಟು!

ಆಗ ಶಾಸಕರು, ತಕ್ಷಣವೇ ಅಬಕಾರಿ ಇಲಾಖೆಯ ಅಧಿಕಾರಿಗೆ ಕರೆ ಮಾಡಿ, ತಾಲೂಕಿನಲ್ಲಿ ಬರುವ ಅನೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಕ್ರಮವಾಗಿ ಮದ್ಯ ಮಾರಾಟವಾಗಬಾರದು. ಇದಕ್ಕೆ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ನೀವು ಕಾರ್ಯಪ್ರವೃತ್ತರಾಗಿ. ಅದಕ್ಕೆ ಕಡಿವಾಣ ಹಾಕಲೇಬೇಕು. ಇಲ್ಲವಾದರೆ ನಾನು ಅಧಿವೇಶನದಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version