Kalaburagi News Protest by school girls alleging that the warden is not serving meals properly Kalaburagi News: ವಾರ್ಡನ್ ಸರಿಯಾಗಿ ಊಟ ನೀಡುತ್ತಿಲ್ಲವೆಂದು ವಿದ್ಯಾರ್ಥಿನಿಯರ ಪ್ರತಿಭಟನೆ - Vistara News

ಕರ್ನಾಟಕ

Kalaburagi News: ವಾರ್ಡನ್ ಸರಿಯಾಗಿ ಊಟ ನೀಡುತ್ತಿಲ್ಲವೆಂದು ವಿದ್ಯಾರ್ಥಿನಿಯರ ಪ್ರತಿಭಟನೆ

Kalaburagi News: ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಾರ್ಡನ್ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಆರೋಪಿಸಿ ಶಾಲಾ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

VISTARANEWS.COM


on

Protest by school girls alleging that the warden
ವಸತಿ ‌ಶಾಲೆಯಲ್ಲಿ ವಾರ್ಡನ್ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಆರೋಪಿಸಿ, ಅಳಂದ ತಾಲೂಕಿನ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನೀಯರು ಪ್ರತಿಭಟನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ವಸತಿ ‌ಶಾಲೆಯಲ್ಲಿ (Residential school) ವಾರ್ಡನ್ (Warden) ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಆರೋಪಿಸಿ ಅಳಂದ ತಾಲೂಕಿನ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನೀಯರು ಶಾಲೆಯ ಮುಂಭಾಗ ಪ್ರತಿಭಟನೆ (Protest) ನಡೆಸಿದರು.

ಜಿಲ್ಲೆಯ ಅಳಂದ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಾರ್ಡನ್ ನಾಗಮ್ಮ ಅವಟೆ ಅವರು ಮೆನು ಚಾರ್ಟ್ ಪ್ರಕಾರ ಸರಿಯಾಗಿ ಯಾವುದೇ ಊಟ ನೀಡುತ್ತಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿನಿಯರು, ವಾರ್ಡನ್‌ರನ್ನು ಬದಲಾವಣೆ ಮಾಡುವಂತೆ ಪ್ರತಿಭಟನಾನಿರತ ವಿದ್ಯಾರ್ಥಿನಿಯರು ಆಗ್ರಹಿಸಿದರು.

ಇದನ್ನೂ ಓದಿ: KARBWWB Recruitment 2023 : ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಕಳೆದ ಕೆಲ ದಿನಗಳ ಹಿಂದೆ ಈ ಕುರಿತು ವಿಸ್ತಾರ ನ್ಯೂಸ್ ನಲ್ಲಿ ಸುದ್ದಿ ಸಹ ಪ್ರಸಾರವಾಗಿತ್ರು, ಇದರ ಬೆನ್ನಲ್ಲೆ ಅಳಂದ‌ ಶಾಸಕ ಬಿ.ಅರ್.ಪಾಟೀಲ್ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೂ ವಾರ್ಡನ್ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ಆರೋಪಿಸಿ ಶನಿವಾರ ವಿದ್ಯಾರ್ಥಿನಿಯರು ಶಾಲೆ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Nikhil Siddharth: ಇದೇ 29ಕ್ಕೆ ನಿಖಿಲ್ ಸಿದ್ದಾರ್ಥ್ ಸಿನಿಮಾ ರಿಲೀಸ್; ಸ್ಪೆಷಲ್‌ ರೋಲ್‌ನಲ್ಲಿ ರಾಣಾ ದಗ್ಗುಭಾಟಿ!

ಸ್ಥಳಕ್ಕೆ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಆಗಮಿಸುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

Hoax Bomb Threat: ಬೆಂಗಳೂರಿನ ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Hoax bomb threat
Koo

ಬೆಂಗಳೂರು: ದೆಹಲಿಯ ವಿಮಾನ ನಿಲ್ದಾಣ ಹಾಗೂ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ (Hoax Bomb Threat) ಬಂದ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌ ಸಂದೇಶ ಬಂದಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಭಾನುವಾರ ನಡೆದಿದೆ. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆ‌ಯಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಇಲಾಖೆಯ ಸಿಟಿ ಎಸ್.ಬಿ.ಗೆ ಇ-ಮೇಲ್ ಬಂದಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗೋವಿಂದ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಸಂಜೆ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಬಂದ ಕೂಡಲೇ ಅಲರ್ಟ್ ಆದ ಪೊಲೀಸರು, ಕೂಡಲೇ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಬಾಂಬ್‌ ಅಥವಾ ಸ್ಫೋಟಕಗಳು ಕಾಣದಿದ್ದರಿಂದ, ಹುಸಿ‌ ಬಾಂಬ್ ಬೆದರಿಕೆ ಬಂದಿರುವುದು ಖಚಿತವಾಗಿದೆ.

ಇದನ್ನೂ ಓದಿ | Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

Bomb Threat

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಮಾನ ನಿಲ್ದಾಣ (delhi airport) ಮತ್ತು ಹಲವಾರು ಆಸ್ಪತ್ರೆಗಳಿಗೆ (hospital) ಭಾನುವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬಂದವು. ಇದರಿಂದಾಗಿ ಸ್ಥಳೀಯರು ಆತಂಕಕ್ಕೆ ಒಳಗಾದರು. ಅಧಿಕಾರಿಗಳು ಬಹು ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ, ವಾಹನಗಳನ್ನು ನಿಯೋಜಿಸಿದರು. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಮೊದಲು ಬುರಾರಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಬಂದಿದ್ದು, ಅಪರಾಹ್ನ 3.15ರ ಸುಮಾರಿಗೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ.

ಹಲವು ಆಸ್ಪತೆಗಳಿಗೆ ಬೆದರಿಕೆ

ಬಾಂಬ್ ಬೆದರಿಕೆಯ ಬಗ್ಗೆ ಬುರಾರಿ ಆಸ್ಪತ್ರೆಗೆ ಇ-ಮೇಲ್ ಬಂದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿತ್ತು. ತಂಡಗಳು ಆಸ್ಪತ್ರೆಯನ್ನು ಪರಿಶೀಲಿಸುತ್ತಿವೆ. ಇನ್ನೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಎಂ.ಕೆ. ಮೀನಾ ತಿಳಿಸಿದ್ದಾರೆ.

ಸಂಜೆ 4.26ರ ಸುಮಾರಿಗೆ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಿಂದ ಎರಡನೇ ಕರೆ ಬಂದಿದ್ದು, ಬಳಿಕ ಹಿಂದೂ ರಾವ್ ಆಸ್ಪತ್ರೆ ಸೇರಿದಂತೆ ಎಂಟರಿಂದ 10 ಇತರ ಆಸ್ಪತ್ರೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬೆದರಿಕೆ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಐಜಿಐ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆಯ ಕುರಿತು ಸಂಜೆ 6.15 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅಗ್ನಿಶಾಮಕ ವಾಹನಗಳನ್ನು ಸಿಬ್ಬಂದಿ ಸಮೇತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಗಾರ್ಗ್ ಹೇಳಿದರು.
ಶಾಲೆಗಳಿಗೆ ಹಿಂದೆ ಬೆದರಿಕೆ ಹಾಕಲಾಗಿತ್ತು.

ಇತ್ತೀಚೆಗೆ ಬೆಂಗಳೂರು, ದೆಹಲಿ ಮತ್ತು ಅಹಮದಾಬಾದ್‌ನಲ್ಲಿ ಇದೇ ರೀತಿಯ ಬೆದರಿಕೆಗಳನ್ನು ಹಾಕಲಾಗಿತ್ತು. ಕೆಲವೇ ದಿನಗಳ ಹಿಂದೆ ದೆಹಲಿ-ಎನ್‌ಸಿಆರ್‌ನಾದ್ಯಂತ 130 ಕ್ಕೂ ಹೆಚ್ಚು ಶಾಲೆಗಳು ತಮ್ಮ ಆವರಣದಲ್ಲಿ ಸ್ಫೋಟಕಗಳಿರುವುದಾಗಿ ಇ-ಮೇಲ್‌ ಸಂದೇಶಗಳನ್ನು ಸ್ವೀಕರಿಸಿದವು. ಬೆದರಿಕೆಗಳು ವ್ಯಾಪಕವಾದ ಭೀತಿಗೆ ಕಾರಣವಾಗಿತ್ತು. ಇದರ ಪರಿಣಾಮವಾಗಿ ತಕ್ಷಣದ ಸ್ಥಳಾಂತರಿಸುವಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಹುಡುಕಾಟಗಳನ್ನು ನಡೆಸಲಾಯಿತು.

ದೂರು ದಾಖಲು

ಇ-ಮೇಲ್‌ಗಳ ನಿಖರವಾದ ಮೂಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಇಂಟರ್‌ಪೋಲ್ ಮೂಲಕ ರಷ್ಯಾದ ಮೇಲಿಂಗ್ ಸೇವಾ ಕಂಪೆನಿ Mail.ru ಅನ್ನು ಸಂಪರ್ಕಿಸಿದರು. ಬಾಂಬ್ ಹುಸಿ ಇ-ಮೇಲ್‌ಗಳ ಉದ್ದೇಶವು ಸಾಮೂಹಿಕ ಭೀತಿಯನ್ನು ಸೃಷ್ಟಿಸುವುದು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿದೆ ಎಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸುಳ್ಳು ಬಾಂಬ್ ಬೆದರಿಕೆಗಳ ಸಂದರ್ಭಗಳನ್ನು ಎದುರಿಸಲು ವಿವರವಾದ ಪ್ರೋಟೋಕಾಲ್ ಮತ್ತು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ಸ್ (SOP) ಗಾಗಿ ಕೇಂದ್ರ ಗೃಹ ಸಚಿವಾಲಯ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಾರದ ಆರಂಭದಲ್ಲಿ, ಗೃಹ ಕಾರ್ಯದರ್ಶಿ ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ತಪ್ಪು ಮಾಹಿತಿಯಿಂದಾಗಿ ಯಾವುದೇ ಅನಗತ್ಯ ಭಯವನ್ನುಉಂಟಾಗದಂತೆ ತಡೆಯಲು ವ್ಯವಸ್ಥೆಗೊಳಿಸುವಂತೆ ಕೇಳಿಕೊಂಡಿದ್ದರು.
ಭದ್ರತೆ ಹೆಚ್ಚಳಕ್ಕೆ ಸೂಚನೆ

ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಭದ್ರತೆ, ಸಿಸಿಟಿವಿ ಕೆಮರಾ ಮತ್ತು ಇಮೇಲ್‌ಗಳ ನಿಯಮಿತ ಮೇಲ್ವಿಚಾರಣೆಯನ್ನು ಹೆಚ್ಚಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ.

ಇದನ್ನೂ ಓದಿ | Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

ತಪ್ಪು ಮಾಹಿತಿಯು ಯಾವುದೇ ಅನಗತ್ಯ ಭೀತಿಯನ್ನು ಸೃಷ್ಟಿಸದಂತೆ ಪರಿಣಾಮಕಾರಿ ಪ್ರತಿಕ್ರಿಯೆ ಕಾರ್ಯವಿಧಾನಕ್ಕಾಗಿ ನಿಕಟ ಸಮನ್ವಯವನ್ನು ಹೊಂದಲು ದೆಹಲಿ ಪೊಲೀಸರು ಮತ್ತು ಶಾಲೆಗಳಿಗೆ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. ಈ ಕುರಿತು ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿ ಪೊಲೀಸ್ ಕಮಿಷನರ್ ಭಾಗವಹಿಸಿದ್ದರು.

Continue Reading

ಕರ್ನಾಟಕ

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Prajwal Revanna Case: ಎಸ್‌ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಬೇಕು. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್‌ ಸೇರಿದಂತೆ ಯಾರ‌ ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನು ಮಾಡಬೇಕು.

VISTARANEWS.COM


on

Prajwal Revanna Case Basavaraj Bommai says DK Shivakumar should be questioned
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಮಾಹಿತಿ ಕೊಟ್ಟವರನ್ನೇ ಬಂಧನ ಮಾಡುತ್ತಿದ್ದಾರೆ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಸರಿಯಾದ ತನಿಖೆಗೆ ಸಿಬಿಐಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಎಸ್‌ಐಟಿಯವರು ಅಪರಾಧಿಗಳನ್ನು ಬಂಧಿಸುತ್ತಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಚಾರಣೆಯನ್ನೂ ಮಾಡಬೇಕು ಎಂಬ ಕೆಲವರ ಆಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರ‌ ಯಾರ ಹೆಸರು ಕೇಳಿಬರುತ್ತಿದೆಯೋ ಅವರ ವಿಚಾರಣೆಯನ್ನು ಮಾಡಬೇಕು. ಆ ಕಾರಣಕ್ಕಾಗಿಯೇ ನಾವು ಪ್ರಕರಣ ಸಿಬಿಐಗೆ ಕೊಡಲಿ ಅಂತ ಕೇಳುತ್ತಿದ್ದೇವೆ ಎಂದು ಹೇಳಿದರು.

ಎಲ್ಲವೂ ಸರಿ ಹೋಗುತ್ತದೆ

ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಮೇಲೆ ಕೆಲವರಲ್ಲಿ ಅಸಮಧಾನವಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಚುನಾವಣೆಗೆ ಹಲವರು ಆಕಾಂಕ್ಷಿಗಳು ಇದ್ದರು. ಟಿಕೆಟ್ ಕೈತಪ್ಪಿದಾಗ ಸಹಜವಾಗಿ ಬೇಸರ ಆಗುತ್ತದೆ. ಎಲ್ಲವೂ ಸರಿ ಹೋಗುತ್ತದೆ. ಈಗಾಗಲೇ ಮೈತ್ರಿ ಬಗ್ಗೆ ವರಿಷ್ಠರು ಯಾವ ರೀತಿ ತೀರ್ಮಾನ ಮಾಡಿದ್ದಾರೋ ಅದರಂತೆ ನಡೆಯುತ್ತದೆ ಎಂದು ಹೇಳಿದರು.

ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಮತ್ತು ಜೆಡಿಎಸ್‌ ಆಗ್ರಹವನ್ನು ಸಿಎಂ ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ನಮ್ಮ ಪೊಲೀಸರ ಮೇಲೆ ಇವರಿಗೆ ನಂಬಿಕೆ ಇಲ್ಲವೇ? ಎಂದು ಇವರಿಗೆ? ಎಂದು ಹೇಳುವ ಮೂಲಕ ಈ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಸಿಬಿಐ ಬಗ್ಗೆ ಬಿಜೆಪಿಯವರು ಏನು ಹೇಳಿದ್ದಾರೆ ಗೊತ್ತಾ? ಸಿಬಿಐ ಅಂದರೆ ಕರಪ್ಶನ್ ಬ್ಯೂರೋ ಆಫ್ ಇನ್‌ವೆಸ್ಟಿಗೇಶನ್‌ ಅಂತ ಹೇಳಿದರು. ಈ ಹಿಂದೆ ಅವರ ಸರ್ಕಾರ ಇದ್ದಾಗ ನಾವು ಎಷ್ಟು ಸಾರಿ ಕೇಳಿದ್ದೇವೆ ಸಿಬಿಐಗೆ ಕೊಡಿ ಅಂತ. ಯಾವತ್ತಾದರೂ ಒಂದು ಪ್ರಕರಣವನ್ನು ಅವರು ಸಿಬಿಐಗೆ ಕೊಟ್ಟಿದ್ದಾರಾ? ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಈ ಪ್ರಕರಣವನ್ನು ಸಿಬಿಐಗೆ ಕೊಡುವುದಕ್ಕೆ ಆಗ್ರಹ ಮಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

ಈ ಹಿಂದೆ ನಾನು ಸಿಎಂ ಆಗಿದ್ದಾಗ ಸಿಬಿಐಗೆ 7 ಕೇಸ್ ಕೊಟ್ಟಿದ್ದೆ. ಆ ಕೇಸ್‌ಗಳಲ್ಲಿ ಏನಾಯಿತು? ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ಯಾಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ ಇವರಿಗೆ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಸಿಬಿಐಗೆ ಕೊಟ್ಟ ಮೇಲೆ ಏನಾಯ್ತು ಆ ಕೇಸ್?

ಸಂತ್ತಸ್ತೆಯ ದೂರಿನ ಮೇಲೆ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಅರೆಸ್ಡ್ ಮಾಡಲಾಗಿದೆ. ನಾವು ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುತ್ತಿಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಪ್ರಲ್ಹಾದ್ ಜೋಶಿ ಜವಾಬ್ದಾರಿಯಿಂದ ಮಾತನಾಡಲಿ. ಉತ್ತರ ಕನ್ನಡ ಜಿಲ್ಲೆಯ ಪರೇಶ್‌ ಮೇಸ್ತಾ ಕೇಸಲ್ಲಿ ಏನ್ರೀ ಆಯ್ತು? ಸಿಬಿಐಗೆ ಕೊಟ್ಟ ಮೇಲೆ ಏನಾಯ್ತು ಆ ಕೇಸ್? ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಎಸ್ಐಟಿ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಪೆನ್‌ಡ್ರೈವ್‌ ಹಂಚಿಕೆಯ ಪ್ರಮುಖ ಆರೋಪ ಹೊತ್ತಿರುವ ನವೀನ್‌ ಗೌಡ ಈ ಸಂಬಂಧ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಅರಕಲಗೂಡು ಶಾಸಕ ಎ. ಮಂಜು ಮೇಲೆ ಬೊಟ್ಟು ಮಾಡಿದ್ದಾನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವ ಮಹಾ ನಾಯಕ ಇವರೇ ಎಂದು ಆರೋಪ ಮಾಡಿದ್ದಾನೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಫೇಸ್‌ಬುಕ್‌ನಲ್ಲಿ ನವೀನ್‌ ಗೌಡ ಹಾಕಿರುವ ಪೋಸ್ಟ್‌ನಲ್ಲಿ ಜೆಡಿಎಸ್‌ ಶಾಸಕ ಎ. ಮಂಜು ವಿರುದ್ಧ ನೇರವಾಗಿ ಆರೋಪ ಮಾಡಿದ್ದಾನೆ. ಆದರೆ, ನವೀನ್‌ ಗೌಡ ಈ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಎಸ್‌ಐಟಿಯವರು ಶೋಧ ಕಾರ್ಯ ನಡೆಸುತ್ತಿರುವುದಾಗಿ ಹೇಳಿಕೊಂಡಿದೆ. ಈ ಮಧ್ಯೆ ನವೀನ್‌ ಗೌಡ ಮಾತ್ರ ರಾಜಾರೋಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳತೊಡಗಿದ್ದಾನೆ.

ನವೀನ್‌ ಗೌಡನ ಪೋಸ್ಟ್‌ನಲ್ಲೇನಿದೆ?

ನನಗೆ ಏಪ್ರಿಲ್20 ರಂದು ಸಿಕ್ಕ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಮಂಜು ಅವರಿಗೆ ಕೊಟ್ಟಿದ್ದೇನೆ. ಏಪ್ರಿಲ್ 21 ರಂದು ಅರಕಲಗೂಡು ಮಾರುತಿ ಕಲ್ಯಾಣ ಮಂಟಪದಲ್ಲಿ ಅವರಿಗೆ ನೀಡಿದ್ದೇನೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಡಿಯೊವನ್ನು ವೈರಲ್ ಮಾಡಿದ್ದರ ಹಿಂದೆ ಮಹಾ ನಾಯಕನ ಕೈವಾಡ ಇದೆ ಎಂದು ಹೇಳಿದ್ದರು. ಆ ಮಹಾ ನಾಯಕ ಅರಕಲಗೂಡು ಶಾಸಕರೇ ಇರಬಹುದು ಎಂದು ಪೋಸ್ಟ್ ಮಾಡಿದ್ದಾನೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.

ಎ. ಮಂಜುಗೂ ಸಂಕಷ್ಟ?

ಈಗಾಗಲೇ ಎಸ್‌ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮಧ್ಯೆ ಪೆನ್‌ಡ್ರೈವ್‌ ಅನ್ನು ಹಾಸನ ಜಿಲ್ಲಾದ್ಯಂತ ಹಂಚಿಕೆ ಮಾಡಿರುವ ಆರೋಪವನ್ನು ಹೊತ್ತಿರುವ ನವೀನ್‌ ಗೌಡ ಮಾಡಿರುವ ಪೋಸ್ಟ್‌ ಈಗ ಚರ್ಚೆಗೆ ಎಡೆಮಾಡಿ ಕೊಟ್ಟಿದೆ. ಈತನ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಎಸ್‌ಐಟಿಯವರು ಮುಂದಿನ ಕ್ರಮವನ್ನು ಕೈಗೊಂಡು ಮಂಜು ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರಾ? ಇಲ್ಲವೇ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಿದ್ದಾರಾ? ಅಥವಾ ಈ ಪೋಸ್ಟ್‌ ಅನ್ನು ನವೀನ್‌ ಗೌಡ ಯಾವ ಐಪಿ ಅಡ್ರೆಸ್‌ನಿಂದ ಮಾಡಿದ್ದಾನೆ ಎಂಬುದನ್ನು ತಿಳಿದುಕೊಂಡು ಶೋಧ ಕಾರ್ಯ ನಡೆಸಲಿದ್ದಾರೋ? ಎಂಬುದನ್ನು ನೋಡಬೇಕಿದೆ.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

ಇದು ಸೂಕ್ಷ್ಮ ವಿಷಯವಾಗಿದೆ. ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಯಾರೋ, ಏನೇನನ್ನೋ ಹೇಳುತ್ತಾರೆ. ಪ್ರತಿಯೊಂದು ಸಾರ್ವಜನಿಕ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗಲ್ಲ. ಇದು ಗಂಭೀರವಾದ ಪ್ರಕರಣ ಆಗಿರುವುದರಿಂದ ಇದರ ಇನ್ವೆಸ್ಟಿಗೇಶನ್ ಆಗುವವರೆಗೂ ಕೂಡ ಯಾವುದೇ ಮಾಹಿತಿಯನ್ನು ಸಾರ್ವಜನಿಕ ವಲಯಕ್ಕೆ ತಿಳಿಸಲು ಆಗುವುದಿಲ್ಲ. ಈ ಕೇಸ್‌ ಬಗ್ಗೆ ಸಾರ್ವಜನಿಕರಾಗಲೀ ಅಥವಾ ರಾಜಕೀಯ ನಾಯಕರಗಾಲೀ, ಯಾವುದೇ ಹೇಳಿಕೆಗಳನ್ನು ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕು. ಈ ವಿಚಾರದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವವರ ಮೇಲೆಯೂ ಕ್ರಮ ಆಗುತ್ತದೆ. ಯಾವುದೇ ರೀತಿಯ ಹೇಳಿಕೆ ಕೊಟ್ಟರೆ 41A ಪ್ರಕಾರ ಅವರನ್ನು ಕೂಡ ವಿಚಾರಣೆಗೆ ಕರೆಯಬೇಕಾಗುತ್ತದೆ. ಎಚ್.ಡಿ. ಕುಮಾರಸ್ವಾಮಿ ಪದೇ ಪದೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಅವರು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಟೀಂ ವಿದೇಶಕ್ಕೆ ಹೋಗಲ್ಲ

ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗುವ ಅವಕಾಶವಿಲ್ಲ. ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್‌ನವರು ಅವರಿಗೆ ಇನ್ಫಾರ್ಮೇಷನ್ ಕೊಡುತ್ತಾರೆ. ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ಗುರುತಿಸಿ ಸಿಬಿಐಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಐನವರು ನಮಗೆ ಮಾಹಿತಿಯನ್ನು ನೀಡುತ್ತಾರೆ. ಆಮೇಲೆ ನಮ್ಮ ಏಜನ್ಸಿಗಳಿಗೂ ಈ ಬಗ್ಗೆ ಗೊತ್ತಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್‌ ವಿವರಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ನಡೆಸಲಾಗುತ್ತದೆ. ಯಾವುದೇ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಸದ್ಯ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಯುತ್ತಿರುವಾಗ ನಾನು ಹೇಳಿಕೆ ಕೊಡುವುದಿಲ್ಲ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

ಬಿಜೆಪಿಗೆ ಸೋಲಿನ ಭಯ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ. ಜಿ. ಪರಮೇಶ್ವರ್‌, ಬಿಜೆಪಿ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ಅದಕ್ಕೆ ಪದೇ ಪದೆ ಈ ರೀತಿ ಹೇಳುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ನೋಡೋಣ ಎಂದು ಡಾ. ಜಿ. ಪರಮೇಶ್ವರ್‌ ಹೇಳಿದರು.

3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ಮೈಸೂರಿನ ಕೆ.ಆರ್. ನಗರದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ (HD Revanna) ಅವರು ಕಳೆದ ಮೂರು ದಿನಗಳಿಂದಲೂ ಕುಟುಂಬಸ್ಥರನ್ನು ಭೇಟಿಯಾಗದೆ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾನುವಾರ (ಮೇ 12) ಬೆಳಗ್ಗೆ ವೆಜ್‌ ಪಲಾವ್‌ ಸೇವಿಸಿದ ರೇವಣ್ಣ, ಕಾಫಿ ಕುಡಿದು, ಪೇಪರ್‌ ಓದಿದ್ದಾರೆ. ಕುಟುಂಬಸ್ಥರು, ಆಪ್ತರನ್ನು ಭೇಟಿಯಾಗದ ಕಾರಣ ಪತ್ರಿಕೆಯೇ ಅವರಿಗೆ ಸಂಗಾತಿಯಾದಂತಾಗಿದೆ. ಇದರ ಮಧ್ಯೆಯೇ, ರೇವಣ್ಣ ಅವರಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ಎಚ್‌.ಡಿ.ರೇವಣ್ಣ ಅವರು ಯಾರನ್ನೂ ಭೇಟಿಯಾಗಲು ಸಾಧ್ಯವಾಗಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಜೈಲಿನ ಬ್ಯಾರಕ್‌ನಲ್ಲಿ ಕೆಲ ಹೊತ್ತು ವಾಕ್‌ ಮಾಡಿದ ರೇವಣ್ಣ, ಬಳಿಕ ದೀರ್ಘ ಅವಧಿಗೆ ಪೇಪರ್‌ ಓದುತ್ತಲೇ ಕುಳಿತಿದ್ದರು ಎಂದು ಜೈಲಿನ ಮೂಲಗಳು ಮಾಹಿತಿ ನೀಡಿವೆ. ರೇವಣ್ಣ ಅವರು ಸೋಮವಾರ (ಮೇ 13) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಅವರು ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಲೈಂಗಿಕ ದೌರ್ಜನಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಇದಾದ ಬಳಿಕ ಅವರು ಸಲ್ಲಿಸಿದ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ಜಾಮೀನು ನೀಡದೆ ಮೇ 13ಕ್ಕೆ ವಿಚಾರಣೆ ಮುಂದೂಡಿತ್ತು. ಹಾಗಾಗಿ, ಸೋಮವಾರ ಮತ್ತೆ ವಿಚಾರಣೆ ನಡೆಯಲಿದ್ದು, ರೇವಣ್ಣ ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ.

Continue Reading

ಕರ್ನಾಟಕ

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

BDA Complex: ಆರ್ಥಿಕವಾಗಿ ನಷ್ಟದಲ್ಲಿರುವ ಬಿಡಿಎ, 7 ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಖಾಸಗಿ ಕಂಪನಿ ತೆಕ್ಕೆಗೆ ನೀಡಲು ಮುಂದಾಗಿದೆ. ಗುತ್ತಿಗೆ ಒಪ್ಪಂದದಂತೆ ಖಾಸಗಿ ಕಂಪನಿ ಹಾಗೂ ಬಿಡಿಎ 70:30 ಅನುಪಾತದಲ್ಲಿ ಆದಾಯ ಹಂಚಿಕೆ ಮಾಡಿಕೊಳ್ಳಲಿವೆ.

VISTARANEWS.COM


on

BDA Complex
Koo

ಬೆಂಗಳೂರು: ಬಿಡಿಎ ಕಾಂಪ್ಲೆಕ್ಸ್​ಗಳನ್ನು ಮಾಲ್​ಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಮತ್ತೆ ಮುನ್ನೆಲೆಗೆ ಬಂದಿದೆ. ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಬಾಡಿಗೆದಾರರು ಹಾಗೂ ಸಾರ್ವಜನಿಕರ ವಿರೋಧದ ನಡುವೆ 7 ಬಿಡಿಎ ಕಾಂಪ್ಲೆಕ್ಸ್‌ಗಳನ್ನು 30 ವರ್ಷದ ಅವಧಿಗೆ ಖಾಸಗಿ ಕಂಪನಿಗೆ ಗುತ್ತಿಗೆಗೆ ನೀಡಲು ಬಿಡಿಎ ನಿರ್ಧರಿಸಿದೆ.

ಆರ್ಥಿಕವಾಗಿ ನಷ್ಟದಲ್ಲಿರುವ ಬಿಡಿಎ, 7 ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಖಾಸಗಿ ಕಂಪನಿ ತೆಕ್ಕೆಗೆ ನೀಡಲು ಮುಂದಾಗಿದೆ. ಎಂಬೆಸ್ಸಿ ಕಂಪನಿಯ ಅಂಗ ಸಂಸ್ಥೆಯಾದ ಎಂಎಫ್‌ಎಆರ್‌ ಕನ್‌ಸ್ಟ್ರಕ್ಷನ್ಸ್‌ ಪ್ರೈವೆಟ್‌ ಲಿಮಿಟೆಡ್‌ ಕಂಪನಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡುವ ಪ್ರಸ್ತಾವನೆ ಇದೆ.

ಬಿಜೆಪಿ ಸರ್ಕಾರದಲ್ಲಿ ಕಾಂಪ್ಲೆಕ್ಸ್‌ಗಳನ್ನು ಗುತ್ತಿಗೆ ನೀಡುವ ಪ್ರಸ್ತಾವನೆ ತಿರಸ್ಕಾರಗೊಂಡಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರದಲ್ಲಿ ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಗುತ್ತಿಗೆ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಖಾಸಗಿ ಕಂಪನಿಯು, ಬಿಡಿಎ ಅಧೀನದಲ್ಲಿರುವ 7 ವಾಣಿಜ್ಯ ಸಂಕೀರ್ಣಗಳಿಗೆ ಅತ್ಯಾಧುನಿಕ ಸ್ಪರ್ಶ ನೀಡಿ, ಬಾಡಿಗೆಗೆ ನೀಡಲಿದೆ. ಇದರಿಂದ ಬಂದ ಆದಾಯದಲ್ಲಿ ಶೇ.30 ರಷ್ಟು ಬಿಡಿಎಗೆ ಸಿಗಲಿದ್ದು, ಶೇ.70ರಷ್ಟು ಪಾಲು ಖಾಸಗಿ ಕಂಪನಿ ಪಾಲಾಗಲಿದೆ.

ಕೋರಮಂಗಲ, ಇಂದಿರಾನಗರ, ಆಸ್ಟಿನ್‌ ಟೌನ್‌, ದೊಮ್ಮಲೂರು, ಎಚ್‌ಎಸ್‌ಆರ್‌ ಲೇಔಟ್‌, ನಾಗರಬಾವಿ, ಆರ್‌ಎಂವಿ ಮಿನಿ ಮಾರುಕಟ್ಟೆ, ಆರ್‌.ಟಿ.ನಗರ, ಎಚ್‌ಬಿಆರ್‌ ಲೇಔಟ್‌ನಲ್ಲಿರುವ ಕಾಂಪ್ಲೆಕ್ಸ್‌ಗಳನ್ನು ಗುತ್ತಿಗೆ ನೀಡಲು ಬಿಡಿಎ ನಿರ್ಧರಿಸಿದ್ದು, 16 ವರ್ಷಗಳಿಂದಲೂ ಪಾಲುದಾರಿಕೆಗಾಗಿ ಖಾಸಗಿ ಕಂಪನಿ ಪ್ರಯತ್ನ ನಡೆಸುತ್ತಿತ್ತು. 2008ರಿಂದ ಪಾಲುದಾರಿಕೆಗೆ ಪ್ಲ್ಯಾನ್ ನಡೆಯುತ್ತಿತ್ತು ಎನ್ನಲಾಗಿದೆ.

ಬಿಎಸ್‌ವೈ ಸರ್ಕಾರದ ಮುಂದೆ ಕಾಂಪ್ಲೆಕ್ಸ್‌ಗಳನ್ನು ಗುತ್ತಿಗೆ ನೀಡುವ ಪ್ರಸ್ತಾವನೆ ಬಂದಿತ್ತು. ಆದರೆ, ಆಗ ತಿರಸ್ಕೃತಗೊಂಡು ಈಗ ಕಾಂಗ್ರೆಸ್ ಸರ್ಕಾರದಲ್ಲಿ ಗುತ್ತಿಗೆ ಒಪ್ಪಂದ ಫೈನಲ್ ಆಗಿದೆ. ಪುನರ್ ನಿರ್ಮಾಣದ ಹೆಸರಲ್ಲಿ ಸಂಕೀರ್ಣಗಳು ಖಾಸಗಿ ಕಂಪನಿ ಪಾಲಾಗುತ್ತಿದ್ದು, 30 ವರ್ಷಗಳ ನಂತರವೂ ಮತ್ತೆ ಅವಧಿ ವಿಸ್ತರಣೆಗೆ ಅವಕಾಶ ನೀಡಲಾಗಿದೆ.

ಇನ್ನು ಸರ್ಕಾರದಿಂದ ಅಂತಿಮ ಆದೇಶ ಬರುವ ಮುನ್ನವೇ ಕಾಂಪ್ಲೆಕ್ಸ್‌ಗಳನ್ನು ಖಾಸಗಿ ಕಂಪನಿ ವಶಕ್ಕೆ ಪಡೆದಿದ್ದು, ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ಬಳಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ಇದಕ್ಕೆ ಬಾಡಿಗೆದಾರರು ಹಾಗೂ ಕೆಲ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ | Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಬಿಡಿಎ ವಿರುದ್ಧ ಎಎಪಿ ಪ್ರತಿಭಟನೆ

ಬಿಡಿಎ ಕಾಂಪ್ಲೆಕ್ಸ್​ಗಳನ್ನು ಖಾಸಗೀಯರಿಗೆ ನೀಡುವ ಬಿಡಿಎ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಸಾವಿರಾರು ಕೋಟಿ ರೂ. ಬೆಲೆಬಾಳುವ ವಾಣಿಜ್ಯ ಸಂಕೀರ್ಣಗಳನ್ನು ಭೂ ಮಾಫಿಯಾಗಳ ಕೈಗೆ ನೀಡಲಾಗುತ್ತಿದೆ ಎಂದು ಎಎಪಿ ಕಾರ್ಯಕರ್ತರು ಇಂದಿರಾನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದರು.

Continue Reading

ಕರ್ನಾಟಕ

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Vijayapura News: ವಿಜಯಪುರ ಜಿಲ್ಲೆಯ ಮದಬಾವಿ ತಾಂಡಾದ ಹೊರವಲಯದಲ್ಲಿ ಘಟನೆ ನಡೆದಿದೆ. ಇನ್ನೆರಡು ದಿನದಲ್ಲಿ ಮೀನು‌ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿ ಬಿಸಿಲಿನ‌ ತಾಪಕ್ಕೆ ಸಾವಿರಾರು ಮೀನುಗಳು ಮೃತಪಟ್ಟಿವೆ. ಇದರಿಂದ ಯುವ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

VISTARANEWS.COM


on

Koo

ವಿಜಯಪುರ: ಜಿಲ್ಲೆಯ ಮದಬಾವಿ ತಾಂಡಾದ ಹೊರವಲಯದ ತೋಟದಲ್ಲಿ (Vijayapura News) ಮೀನುಗಳ ಮಾರಣ ಹೋಮ ನಡೆದಿದೆ. ಬೇಸಿಗೆಯ ಬಿಸಿಲಿನ‌ (summer heat) ತಾಪಕ್ಕೆ 17 ಸಾವಿರ ಮತ್ಸ್ಯಗಳು ಮೃತಪಟ್ಟಿದ್ದು, ಇದರಿಂದ ಯುವ ರೈತನಿಗೆ ಲಕ್ಷಾಂತರ ರೂ. ನಷ್ಟವಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪ 46 ಡಿಗ್ರಿವರೆಗೆ ತಲುಪುತ್ತಿದೆ. ಇದರಿಂದ ವಿರೇಶ ಕವಟಗಿ ಎಂಬ ಯುವ ರೈತ ಸಾಕಿದ್ದ ಮೀನುಗಳು ಮೃತಪಟ್ಟಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದರಿಂದ ರೈತ ಕಂಗಾಲಾಗಿದ್ದಾನೆ.

ಬಯೋಪ್ಲಾಕ್ ಹೊಂಡದಲ್ಲಿ ಯುವ ರೈತ ಮೀನು ಸಾಕಾಣಿಕೆ ಮಾಡಿದ್ದ. 180 ಅಡಿ ಉದ್ದ, 70 ಅಡಿ ಅಗಲವಾದ ಹೊಂಡದಲ್ಲಿ ಮರ್ಲ್ ಜಾತಿ ಮೀನುಗಳನ್ನು ಸಾಕಾಣಿಕೆ ಮಾಡಿದ್ದ. ವೃತ್ತಿಯಲ್ಲಿ ಸಾಪ್ಟವೇರ್ ಎಂಜಿನಿಯರ್‌ ಆಗಿದ್ದರೂ ವಿರೇಶ ಕೃಷಿ ಮಾಡಿಕೊಂಡಿದ್ದ.

ಇದನ್ನೂ ಓದಿ | Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿರೇಶ, ಬೆಂಗಳೂರಿನಿಂದ ಬಂದು ಮೀನು ಮಾರಾಟ ಮಾಡಬೇಕು ಎಂದುಕೊಂಡಿದ್ದ. ಹೀಗಾಗಿ ಗ್ರಾಮಕ್ಕೆ ಬಂದು ನೋಡಿದಾಗ ರಾತ್ರೋ ರಾತ್ರಿ ಯುವ ರೈತನಿಗೆ ಆಘಾತ ಉಂಟಾಗಿದೆ. ಬಿಸಿಲಿನ ತಾಪದಿಂದ ಬೆಳಗ್ಗೆವರೆಗೆ 17 ಸಾವಿರ ಮೀನುಗಳ ಮೃತಪಟ್ಟಿದ್ದು, ಇದರಿಂದ ಸುಮಾರು 35 ಲಕ್ಷ ರೂ. ನಷ್ಟವಾಗಿದೆ. ಮೀನುಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಕೊಡಿ ಎಂದು ಅಧಿಕಾರಿಗಳಿಗೆ ಯುವ ರೈತ ಮನವಿ ಮಾಡಿದ್ದಾನೆ.

ಚಿಕ್ಕಮಗಳೂರಿನಲ್ಲಿ ಮತ್ತೊಂದು ಕಾಡಾನೆ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಸರಣಿ ಸಾವು ಮುಂದುವರಿದಿದ್ದು, ತಾಲೂಕಿನ ಆಲ್ದೂರು ಬಳಿಯ ಕೆರೆಹಕ್ಲು ಗ್ರಾಮದ ಸಮೀಪ ಮತ್ತೊಂದು ಕಾಡಾನೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ. 35 ವರ್ಷದ ಒಂಟಿ ಸಲಗ ಕೊನೆಯುಸಿರೆಳೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ವಾರದ ಹಿಂದೆ ಈ ಭಾಗದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದ.

ಇದನ್ನೂ ಓದಿ | Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ.

ಬಾಗಲಕೋಟೆ: ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಅಪರಿಚಿತ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಯರಗೊಪ್ಪ ಸಮೀಪ ನಡೆದಿದೆ. ಘಟನೆಯಲ್ಲಿ ಯುವಕ ರುಂಡ, ಮುಂಡ ಬೇರೆ ಬೇರೆಯಾಗಿ ಬಿದ್ದಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading
Advertisement
Viral Video
ದೇಶ15 mins ago

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

Sean Williams
ಪ್ರಮುಖ ಸುದ್ದಿ16 mins ago

Sean Williams : ಜಿಂಬಾಬ್ವೆ ತಂಡದ ಹಿರಿಯ ಆಲ್​ರೌಂಡರ್​ ಟಿ20 ಕ್ರಿಕೆಟ್​ನಿಂದ ನಿವೃತ್ತಿ

Hoax bomb threat
ಕರ್ನಾಟಕ29 mins ago

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

IPL 2024
ಕ್ರೀಡೆ38 mins ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ40 mins ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ57 mins ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

BDA Complex
ಕರ್ನಾಟಕ1 hour ago

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

IPL 2024
ಐಪಿಎಲ್ 20242 hours ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ2 hours ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ2 hours ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ3 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ16 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌