Site icon Vistara News

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Kalaburagi News

Kalaburagi News: Car Collides With Truck, Two People Die On Spot

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್‌ ಬಳಿ ಭೀಕರ ಅಪಘಾತ (Kalaburagi News) ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಯ್ಯ ಸ್ವಾಮಿ (35) ಹಾಗೂ ಲೋಕೇಶ್‌ (36) ಮೃತರು. ವೇಗವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಗುದ್ದಿದ ಕಾರಣ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೆಲಗೋಗಿ ಕ್ರಾಸ್‌ ಬಳಿ ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದವು. ಇದೇ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಲಾರಿಗೆ ಕಾರು ಹಿಂಬದಿಯಿಂದ ಜೋರಾಗಿ ಡಿಕ್ಕಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Road Accident

ಶನಿವಾರ (ಜೂನ್‌ 15) ಬೆಳಗ್ಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿತ್ತು. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿದ್ದವು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Exit mobile version