Site icon Vistara News

Congress Protest: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ

Congress Protest

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅಭಿಮಾನಿಯೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ (Congress Protest) ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ವೇಳೆ ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಷಣ್ಮುಖ ಸಿರಸಗಿ ಎಂಬಾತ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ಅತನನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಇದನ್ನೂ ಓದಿ | Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

K M Shivalinge Gowda: ಭಾಷಣದ ಭರದಲ್ಲಿ ಕಾಂಗ್ರೆಸ್‌ಗೇ ಬೈದ ಶಾಸಕ ಶಿವಲಿಂಗೇಗೌಡ! ವಿಡಿಯೊ ಇದೆ

ರಾಮನಗರ: ಭಾಷಣದ ಭರದಲ್ಲಿ ಕಾಂಗ್ರೆಸ್ ವಿರುದ್ಧವೇ ಸ್ವಪಕ್ಷ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಿಡಿಕಾರಿರುವ ಪ್ರಸಂಗ ಕಾರ್ಯಕ್ರಮವೊಂದರಲ್ಲಿ ನಡೆದಿದೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ (K M Shivalinge Gowda) ಅವರು, ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಪಕ್ಷವನ್ನೇ ಬೈದ್ದಿದ್ದಾರೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಜೆಡಿಎಸ್- ಬಿಜೆಪಿ ಪಕ್ಷದವರಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಜನಾಂದೋಲನ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೋ ಪ್ರಶ್ನೆಗೆ ಉತ್ತರ ಕೊಡಿ ಎಂದರು. ಬಾಯ್ತಪ್ಪಿ ಕಾಂಗ್ರೆಸ್‌ಗೆ ಬೈದಿರುವುದು ಗೊತ್ತಾದ ಮೇಲೆ, ಕ್ಷಮಿಸಿ ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದಿದ್ದಾರೆ.

ಪಾದಯಾತ್ರೆ ಮೂಲಕ ರಾಜ್ಯದ ಜನರಿಗೆ ಸುಳ್ಳು ಹೇಳಲು ಬಿಜೆಪಿಯವರು ಹೊರಟಿದ್ದಾರೆ‌. ಜೆಡಿಎಸ್- ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡು ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದಾರೆ. ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಮರೆತು ಕೋಮುವಾದಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಬಿಜೆಪಿ ಅವರ ಪಾದದಡಿಯಲ್ಲಿ ಜೆಡಿಎಸ್‌ನವರು ಸೇರಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಬಿಜೆಪಿ ಕಾರ್ಯಕರ್ತೆ ಸಾವು

ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಕಳಂಕ ತರಬೇಕು ಅಂತ ಪಾದಯಾತ್ರೆ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವಚ್ಛತೆ, ಪ್ರಾಮಾಣಿಕತೆ ಇಟ್ಟುಕೊಂಡು ಇಷ್ಟು ವರ್ಷ ಸಿದ್ದರಾಮಯ್ಯ ರಾಜಕೀಯ ಮಾಡಿದ್ದಾರೆ. ಮೈಸೂರಿಗೆ ಹೋಗೊ ವರೆಗೂ ಇದೇ ರೀತಿ ಸಮಾವೇಶ ಮಾಡುತ್ತೇವೆ ಎಂದರು. ಈ ವೇಳೇ ಬಾಯ್ತಪ್ಪಿ ಬಿಜೆಪಿ ಹಾಗೂ ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ, ತಾಕತ್ತು ಇದ್ರೆ, ನಾವು ಕೇಳೊ ಪ್ರಶ್ನೆಗೆ ಉತ್ತರ ಕೊಡಿ ಎಂದು ಆಗ್ರಹಿಸಿದರು. ನಂತರ ಕ್ಷಮಿಸಿ, ಜೆಡಿಎಸ್ – ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ ಎಂದು ಆಕ್ರೋಶ ಹೊರಹಾಕಿದ್ದಾರೆ.

Exit mobile version