ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎನಿಸಿಕೊಂಡಿರುವ ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದ ಸರ್ಕಾರಿ ಶಾಲೆಯ (Government school) ಕೆಲ ಕೊಠಡಿಗಳು (Rooms) ದುಸ್ಥಿತಿಯಲ್ಲಿದ್ದು, ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೂರು ಕೊಠಡಿಗಳು ಕುಸಿದು ಬೀಳುವ ಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳು ಪ್ರತಿದಿನ ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: Rohit Sharma: ರೋಹಿತ್ ಶರ್ಮ ಕ್ರಿಕೆಟ್ ಕರಿಯರ್ಗೆ ತುಂಬಿತು 16 ವರ್ಷ
ಹೆಚ್ಚಿದ ಆತಂಕ
ಕಳೆದ 20 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿವರೆಗೆ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಶಾಲೆಯಲ್ಲಿ ಬರೊಬ್ಬರಿ 300 ವಿದ್ಯಾರ್ಥಿಗಳಿದ್ದು, ಆದರೆ ಕೊಠಡಿಗಳು ಯಾವಾಗ ಕುಸಿದು ಬೀಳುತ್ತವೆಯೋ ಎಂಬ ಆತಂಕ ಹೆಚ್ಚಾಗಿದೆ.
ಶಾಲೆಯ ಈ ಕೊಠಡಿಗಳ ಚಾವಣಿ ಬೀಳುವ ಸ್ಥಿತಿಯಲ್ಲಿದೆ. ಕೆಲವು ಬಾರಿ ವಿದ್ಯಾರ್ಥಿಗಳ ಮೇಲೆಯೂ ಮೇಲ್ಚಾಣಿಯ ಸಿಮೆಂಟ್ ಉದುರಿ ಬಿದ್ದಿದೆ. ಸದ್ಯ ಮಳೆಗಾಲವೂ ಆರಂಭವಾಗಿದ್ದು, ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಸುರಕ್ಷತೆ ಇಲ್ಲದಂತಾಗಿದೆ.
ಈ ಕುರಿತು ಗ್ರಾಮಸ್ಥರು ಸಾಕಷ್ಟು ಬಾರಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಮಾತ್ರ ಮೌನ ವಹಿಸಿದ್ದಾರೆ.
ಇದನ್ನೂ ಓದಿ: Viral Video: ಗುಜರಾತ್ ಮಳೆಯಲ್ಲಿ ಅಪಾಯಕ್ಕೆ ಸಿಲುಕಿದ್ದ ವಿದ್ಯಾರ್ಥಿನಿಯರ ರಕ್ಷಣೆ: ಹ್ಯಾಪಿ ವೀಕೆಂಡ್ ಎಂದ ಮುಂಬಯಿ ಮಂದಿ
ಶಾಲಾ ಕೊಠಡಿಗಳನ್ನು ನಿರ್ಮಿಸಲು ಗ್ರಾಮಸ್ಥರ ಆಗ್ರಹ
ಅಧಿಕಾರಿಗಳು ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಶಾಲೆಯ ಕೊಠಡಿಗಳನ್ನು ನಿರ್ಮಿಸಿ ಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.