Site icon Vistara News

Kalaburagi News: ನಗರಕ್ಕೆ ಬೆಣ್ಣೆತೊರಾದಿಂದ ಕುಡಿಯುವ ನೀರು ಒದಗಿಸಿ: ಸಚಿವ ಪ್ರಿಯಾಂಕ್ ಖರ್ಗೆ

meeting with officials led by Ministers Priyank Kharge Dr Sharan Prakash Patil

ಕಲಬುರಗಿ: ನಗರದ‌ ನಿವಾಸಿಗಳಿಗೆ ಬೆಣ್ಣೆತೊರಾಯಿಂದ (Benne Tora) ಕೂಡಲೇ ಕುಡಿಯುವ ನೀರು (Drinking water) ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಅವರೊಂದಿಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬೆಣ್ಣೆತೊರೆಯಿಂದ ಕುಡಿಯುವ ನೀರು ಒದಗಿಸುವಂತೆ ನಾನು ಈಗಾಗಲೇ ಮೂರು ಬಾರಿ ಮನವಿ ಮಾಡಿದ್ದೇನೆ. ಆದರೂ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಸಚಿವರು, ಕಳೆದ ನಾಲ್ಕು ವರ್ಷದಿಂದ ಅಧಿಕಾರಿಗಳು ಮಾಡಿದ್ದೇ ಕೆಲಸ ಆದಂತಿದೆ ಎಂದು ಹರಿಹಾಯ್ದರು. ನಾಳೆಯಿಂದಲೇ ಕುಡಿಯುವ ನೀರು‌ ಸರಬರಾಜು ಆಗಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು.

ಇದನ್ನೂ ಓದಿ: Congress Guarantee: ಮೋದಿ ಸರ್ಕಾರ ಕೊಟ್ಟರೆ ಕೊಡಲಿ ಬಿಟ್ಟರೆ ಬಿಡಲಿ 10 ಕೆ.ಜಿ. ಫ್ರೀ ಅಕ್ಕಿ ಗ್ಯಾರಂಟಿ ಎಂದ ಕೆ.ಎಚ್‌. ಮುನಿಯಪ್ಪ

ಸಭೆಯಲ್ಲಿ ಹಾಜರಿದ್ದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, 2023-24 ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಆಲಿಕಲ್ಲು/ ಸಿಡಿಲು ಬಡಿದು ಒಟ್ಟು 8 ಜನರು ಸಾವನ್ನಪ್ಪಿದ್ದು ತಲಾ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಈ ಬಾರಿಯ ಮುಂಗಾರು ಹಂಗಾಮಿಗೆ ಒಟ್ಟು 8.87 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆಯುವ ಗುರಿ ನಿಗದಿಪಡಿಸಲಾಗಿದ್ದು, ಇದರಲ್ಲಿ 5.93 ಲಕ್ಷ ಹೆಕ್ಟೇರ್ ತೊಗರಿ, 24,000 ಹೆಕ್ಟೇರ್ ಉದ್ದು, 51,000 ಹೆಕ್ಟೇರ್ ಹೆಸರು, 99,450 ಹೆಕ್ಟೇರ್ ಹತ್ತಿ, 45, 635 ಹೆಕ್ಟೇರ್ ಕಬ್ಬು, 48,200 ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬೆಳೆ ಬೆಳೆಯುವ ಗುರಿ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಪ್ರಸ್ತುತ ಹೆಸರು-1000 ಕ್ವಿಂಟಾಲ್, ಉದ್ದು-_500 ಕ್ವಿಂಟಾಲ್, ತೊಗರಿ-6334 ಕ್ವಿಂಟಾಲ್, ಸೋಯಾಬಿನ್- 18,516 ಕ್ವಿಂಟಾಲ್, ಸೂರ್ಯಕಾಂತಿ – 120 ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯವಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Samantha Ruth Prabhu; ಹೊಸ ಫೋಟೊಶೂಟ್‌ನಲ್ಲಿ ಹಾಟ್‌ ಆಗಿ ಕಂಡ ಸಮಂತಾ; ಅವರ ಕನಸು ಏನಂತೆ?

ಕಳೆದ ವರ್ಷ ಕಳಪೆ ತೊಗರಿ ಬೀಜ ಬಿತ್ತನೆ ಮಾಡಿದ್ದರಿಂದ ನೆಟೆ ರೋಗ ತಗುಲಿತ್ತು. ಹಾಗಾಗಿ ಅಂತಹ ಬೀಜಗಳ ಕ್ಷಮತೆ ಪರೀಕ್ಷಿಸಲು ನೀವು ಪ್ರಯೋಗಾಲಯಕ್ಕೆ ಕಳಿಸಿದ್ದೀರಾ? ಎಂದು ಕೃಷಿ ಅಧಿಕಾರಿಗಳಿಗೆ ಪ್ರಶ್ನಿಸಿದ ಸಚಿವ ಶರಣ ಪ್ರಕಾಶ ಪಾಟೀಲ್‌ ಅವರು, ಈ ಬಾರಿ ಮತ್ತೆ ರೈತರು ಅದೇ ತರ ಬೀಜ ಬಿತ್ತನೆ ಮಾಡುವ ಸಾಧ್ಯತೆಯೂ ಇರುವುದರಿಂದ ಸಾಧ್ಯವಾದಷ್ಟು ಹೆಸರು, ಉದ್ದು, ಸೋಯಾಬಿನ್ ಹಾಗೂ ಹತ್ತಿ ಬೆಳೆ ಬೆಳೆಯುವಂತೆ ರೈತರಿಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಕಳೆದ ವರ್ಷ ಮಳಖೇಡದಲ್ಲಿ ಕಳೆದ ಬೀಜ ಮಾರಾಟ ಮಾಡಿದ ವ್ಯಕ್ತಿಯ ವಿರುದ್ಧ ಮಳಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಚಾರ್ಜ್‌ಶೀಟ್ ಹಾಕಿಲ್ಲ, ಮೊದಲು ಚಾರ್ಜ್‌ಶೀಟ್‌ ಹಾಕಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ವರ್ಷ ಶೇ. 70ರಷ್ಟು ತೊಗರಿ ಬೆಳೆಗಳು ಹಾಳಾಗಿವೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಶೇ. 30 ಎಂದು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರ ಸಿಗದೆ ಅನ್ಯಾಯವಾಗಿದೆ. ಹಾಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಿ ಎಂದು‌ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Viral News: ಕುಟುಂಬದೊಂದಿಗೆ ಯುರೋಪ್‌ ಪ್ರವಾಸ ಮಾಡ್ತಿದ್ದೇನೆ; ನಾವೆಲ್ಲ ಸತ್ತರೆ ಆಸ್ತಿ ಸಮಾಜಕ್ಕೆಂದು ವಿಲ್‌!

ಸಭೆಯಲ್ಲಿ ಶಾಸಕರಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಡಾ ಅವಿನಾಶ ಜಾಧವ, ಬಸವರಾಜ ಮತ್ತಿಮಡು, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಸಿಇಓ ಡಾ ಗಿರೀಶ ಬದೋಲೆ, ಎಸ್‌ಪಿ ಇಶಾ ಪಂತ್, ಡಿಸಿಪಿ ಶ್ರೀನಿವಾಸಲು ಅಡ್ಡೂರು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Exit mobile version