Site icon Vistara News

Kalaburagi News: ಕಲಬುರಗಿಯ ಚಿಂಚೋಳಿಯಲ್ಲಿ ಜನತಾ ದರ್ಶನ; ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ

Minister Priyank Kharge drives for Janata Darshan programme in Chincholi

ಕಲಬುರಗಿ: ಜಿಲ್ಲೆಯ ಗಡಿ ತಾಲೂಕು ಚಿಂಚೋಳಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದುಕೊರತೆ ಆಲಿಸುವ ಚೊಚ್ಚಲ ಜನತಾ ದರ್ಶನ (Janata Darshan) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ವಿವಿಧ ಇಲಾಖೆಗಳಿಂದ ಸರ್ಕಾರಿ ಯೋಜನೆಗಳ ಕುರಿತು ಅರಿವು ಮೂಡಿಸಲು ತೆರೆಯಲಾದ ಮಳಿಗೆಗಳನ್ನು ಉದ್ಘಾಟಿಸಿದರು.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ಚಿಂಚೋಳಿ ಪುರಸಭೆ, ಕಾರ್ಮಿಕ, ಪೊಲೀಸ್, ಕಂದಾಯ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹೀಗೆ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., ವೋಟರ್ ಐ.ಡಿ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ‌ ಸಮಸ್ಯೆ ಬಗೆಹರಿಸಲು ಸಿಬ್ಬಂದಿ, ಸ್ಥಳದಲ್ಲಿಯೇ ಇದ್ದು ಸಾರ್ವಜನಿಕರ‌ ಸಮಸ್ಯೆಗೆ ಸ್ಪಂದಿಸಿದರು.

ಅರ್ಜಿ ಸ್ವೀಕಾರ ಕೌಂಟರ್‌ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ‌, ವೀಕ್ಷಿಸಿದರು. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು. ಇದಕ್ಕೂ ಮುನ್ನ ಕ್ರೀಡಾಂಗಣ ಅವರಣದಲ್ಲಿ ಸಚಿವರು ಸಸಿ‌ ನೆಟ್ಟು ನೀರುಣಿಸಿದರು.

ಇದನ್ನೂ ಓದಿ: Asian Games 2023: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್​ ತಂಡ; ಲಂಕಾ ವಿರುದ್ಧ ರೋಚಕ ಜಯ

ಈ ಸಂದರ್ಭದಲ್ಲಿ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ತಿಪ್ಪಣಪ್ಪ ಕಮಕನೂರ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿ.ಪಂ. ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಡ್ಡೂರು ಶ್ರೀನಿವಾಸಲು,‌ ಡಿ.ಎಫ್.ಓ. ಸುಮಿತ್ ಕುಮಾರ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತ‌ ಆಶಪ್ಪ ಪೂಜಾರಿ, ಚಿಂಚೋಳಿ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ, ತಾಲೂಕು ಪಂಚಾಯಿತಿ ಇ.ಓ. ಶಂಕರ ರಾಠೋಡ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Exit mobile version