ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದ ಚಿನ್ನಮ್ಮ ಬಸಪ್ಪ ಪಾಟೀಲ್ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಸೋಮವಾರ ವಿಸ್ತಾರ ನ್ಯೂಸ್ ಚಾನೆಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ (World Environment Day) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಚಿಂಚೋಳಿ ವಲಯ ಅರಣ್ಯ ಅಧಿಕಾರಿ ಶ್ರೀಕಾಂತ್ ರಾಠೋಡ್ ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ಕಾಂಕ್ರಿಟೀಕರಣ ಹಾಗೂ ಡಾಂಬರೀಕರಣದಿಂದಾಗಿ ತಾಪಮಾನವು ವಿಪರೀತವಾಗಿ ಏರಿಕೆ ಆಗುತ್ತಿದೆ ಮುಂದಿನ ಪೀಳಿಗೆಗೆ ಒಳ್ಳೆಯ ವಾತಾವರಣವನ್ನು ನಾವು ಉಳಿಸಬೇಕಾದರೆ ಹೆಚ್ಚಿನ ಪ್ರಮಾಣದಲ್ಲಿ ಸಸಿ ನೆಡುವುದು ಅನಿವಾರ್ಯವಾಗಿದೆ. ಇಂತಹ ಮಹತ್ತರವಾದ ಕಾರ್ಯಕ್ರಮವನ್ನು ವಿಸ್ತಾರ ನ್ಯೂಸ್ ಚಾನೆಲ್ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದನ್ನೂ ಓದಿ: Kollam Sudhi: ಮಲಯಾಳಂ ಖ್ಯಾತ ಕಿರುತೆರೆ ನಟ ಕಾರು ಅಪಘಾತದಲ್ಲಿ ನಿಧನ; ಕಾರು ನಜ್ಜುಗುಜ್ಜು!
ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಶಾಂತರೆಡ್ಡಿ, ಕಾಲೇಜಿನ ಪ್ರಾಚಾರ್ಯೆ ಮಾಣಿಕಮ್ಮ ಸುಲ್ತಾನಪುರ, ಚಿಂಚೋಳಿಯ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಆನಂದ ಟೈಗರ್ ಸೇರಿದಂತೆ ಮುಖಂಡರು, ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.