Site icon Vistara News

Kalaburagi News: ಕರಕ್ಕಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ಮೇಲೆ ಗ್ರಾಮಸ್ಥರ ಕಿಡಿ

drinking water problem at yadrami taluk

ಕಲಬುರಗಿ: ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಯಡ್ರಾಮಿ ತಾಲೂಕಿನ ಕರಕ್ಕಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ (Drinking water) ಸಮಸ್ಯೆ (Problem) ತಾಂಡವವಾಡುತ್ತಿದ್ದು, ಈ ಬಗ್ಗೆ ಗಮನಹರಿಸಿ, ಪರಿಹಾರ ಒದಗಿಸಬೇಕಾದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ರಾಜ್ಯದ ಹಲವು ಭಾಗದಲ್ಲಿ ವರುಣನ‌ ಆರ್ಭಟ ಶುರುವಾಗಿದೆ. ಆದರೆ, ಸೂರ್ಯನಗರಿ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಪ್ರತಿದಿನ ಗ್ರಾಮಸ್ಥರು ನೀರಿಗಾಗಿ ಪರಿತಪಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ಕುಡಿಯುವ ನೀರಿಗಾಗಿ ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರು ಕೊಡಗಳನ್ನು ಹಿಡಿದು ಅಲೆದಾಡುತ್ತಾ ಕಾಯುವ ಸನ್ನಿವೇಶ ಸೃಷ್ಟಿಯಾಗಿದೆ.

ಇದನ್ನೂ ಓದಿ: Wrestlers Protest: ದೇಶಕ್ಕಾಗಿ ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲಿರುವ ಕುಸ್ತಿಪಟುಗಳು

ಕಲಬುರಗಿ ಜಿಲ್ಲೆಯಾದ್ಯಂತ ಸೂರ್ಯನ ಪ್ರಖರತೆ ಬರೋಬ್ಬರಿ 42 ರಿಂದ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚುತ್ತಲೇ ಇದೆ. ಆದರೆ, ಯಡ್ರಾಮಿ ತಾಲೂಕಿನಲ್ಲಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಮಾತ್ರ ಇಲ್ಲದಂತಾಗಿದೆ.

ಇನ್ನು ಗ್ರಾಮದಲ್ಲಿ ಉಂಟಾದ ನೀರಿನ‌ ಸಮಸ್ಯೆ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಮಾತ್ರ ಪ್ರತಿಕ್ರಿಯಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರು ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ ಅವರನ್ನು ದೂರವಾಣಿ‌ ಮೂಲಕ‌ ಸಂಪರ್ಕಿಸಲು ಹೋದರೆ ಯಾವಾಗಲೂ ಮೊಬೈಲ್‌ ಸ್ವಿಚ್ಡ್‌ ಆಫ್ ಆಗಿರುತ್ತದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಅನ್ನು ವಿಚಾರಿಸಿದರೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: Facebook: ಪ್ರಜಾಪ್ರಭುತ್ವಕ್ಕೆ ಫೇಸ್‌ಬುಕ್‌ನಿಂದ ಅಪಾಯ, ಜುಕರ್‌ಬರ್ಗ್ ಒಬ್ಬ ಸರ್ವಾಧಿಕಾರಿ!

ಇನ್ನು ಗ್ರಾಮದಲ್ಲಿನ ನೀರಿನ ಸಮಸ್ಯೆಯ ಕುರಿತು ಶಾಸಕ ಡಾ.ಅಜಯ್ ಸಿಂಗ್ ಅವರ ಗಮನಕ್ಕೂ ತರಲಾಗಿದೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಈ ಬಗ್ಗೆ ಅಧಿಕಾರಿಗಳು ಹಾಗೂ ಶಾಸಕರು ಗಮನ ಹರಿಸಿ ಗ್ರಾಮದಲ್ಲಿನ ನೀರಿನ‌ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Exit mobile version