Site icon Vistara News

Accident between lorries : ಎರಡು ಲಾರಿಗಳ ಮುಖಾಮುಖಿ ಡಿಕ್ಕಿ, 1 ಸಾವು, ಮೂವರಿಗೆ ಗಾಯ

Truck

#image_title

ಕಲಬುರಗಿ: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಒಬ್ಬ ಚಾಲಕ ಸಾವಿಗೀಡಾಗಿರುವ ಘಟನೆ ಕಲಬುರಗಿಯಲ್ಲಿ ಸಂಭವಿಸಿದೆ. ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಭಾನುವಾರ ಘಟನೆ ನಡೆದಿದೆ.

ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಮೃತ ದುದೈವಿಯಾಗಿದ್ದಾರೆ. ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.

ಮುಖಾಮುಖಿ ಡಿಕ್ಕಿಯಿಂದ ಲಾರಿಗಳ ಮುಂಭಾಗ ಛಿದ್ರವಾಗಿದೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version