ಕಲಬುರಗಿ: ಪಿಎಸ್‌ಐ ಪರೀಕ್ಷಾ ಹಗರಣ ಮಾಸುವ ಮುನ್ನ ಕಲಬುರಗಿಯಲ್ಲಿ ಮತ್ತೊಂದು ಹಗರಣ (Exam Cheating) ಬಯಲಿಗೆ ಬಂದಿದೆ. ವಿವಿಧ ನಿಗಮ ಮಂಡಳಿಗಳ 720 ಖಾಲಿ ಹುದ್ದೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ನಡೆಯುತ್ತಿದ್ದ ಪರೀಕ್ಷೆಯಲ್ಲಿ ನಕಲು ಮಾಡಿ ಅಭ್ಯರ್ಥಿಯೊಬ್ಬ (Cheating In Exam) ಸಿಕ್ಕಿ ಬಿದ್ದಿದ್ದಾನೆ.
ಆಹಾರ ಮತ್ತು ಕಾರ್ಮಿಕ ಇಲಾಖೆಯ ಎಫ್‌ಡಿಎ ಪರೀಕ್ಷೆಯಲ್ಲಿ ಬ್ಯೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಪರೀಕ್ಷೆಯಲ್ಲೂ ಬ್ಲೂಟೂತ್ ಡಿವೈಸ್ ಸದ್ದು ಮಾಡಿದದೆ. ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ತ್ರಿಮೂರ್ತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈತನೊಂದಿಗೆ ಹೊರಗಡೆಯಿಂದ ಬ್ಲೂಟೂತ್ ಮೂಲಕ ಉತ್ತರ ರವಾನೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರು ಅರೆಸ್ಟ್!
ಯಾದಗಿರಿ: ಅ. 28 ಮತ್ತು 29ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ (Examination on October 28, 29) ಕೆಇಎ ಪರೀಕ್ಷೆಯನ್ನು ನಡೆಸುತ್ತಿದೆ. ರಾಜ್ಯಾದ್ಯಂತ ಮೊದಲ ದಿನ 350 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿಯ (Yadagiri News) ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಬಳಕೆ ಮಾಡಿ ನಕಲು ಮಾಡುತ್ತಿದ್ದ ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ನಗರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದವನು ನಕಲಿ ಅಭ್ಯರ್ಥಿ ಎಂದು ದೃಢವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ಸೇರಿದಂತೆ 17 ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 7,884 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಇದ್ದರೂ ಬ್ಲೂಟೂತ್ ಬಳಕೆಯಾಗಿದೆ.
ಇದನ್ನೂ ಓದಿ: Recruitment Exam : ಹಿಜಾಬ್ ಗದ್ದಲದ ನಡುವೆಯೇ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಶುರು
ಪುಟ್ಟಪ್ಪ ಎಂಬಾತನನ್ನು ಸೇರಿದಂತೆ ಮೂವರನ್ನ ವಶಕ್ಕೆ ಪಡೆಯಲಾಗಿದೆ. ಪುಟ್ಟಪ್ಪ ಮೂಲತಃ ಪಿಎಸ್ಐ ಹಗರಣ ಕಿಂಗ್ ಪಿನ್ ಆಗಿರುವ ಆರ್.ಡಿ ಪಾಟೀಲ್ ಗ್ರಾಮದವನು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗ್ರಾಮದ ಸೊನ್ನಾ ಗ್ರಾಮದವನು. ಸದ್ಯ ಪರೀಕ್ಷಾ ಕೇಂದ್ರದ ಹೊರಗಿದ್ದು ಮಾಹಿತಿ ನೀಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಜೊಂಡಿದ್ದಾರೆ. ಎಲ್ಲರೂ ಕಲಬುರಗಿ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಗೆ 6-8 ಮಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಪರೀಕ್ಷಾ ಅಕ್ರಮ ಸಂಬಂಧ ಡಿಸಿ ಡಾ.ಸುಶೀಲಾ ಬಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ಅವರು, ಖಾಲಿ ಹುದ್ದೆ ಭರ್ತಿಗಾಗಿ ಇಂದು ಮತ್ತು ನಾಳೆ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿರುವ ಬಗ್ಗೆ ಎಸ್‌ಪಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ಪ್ರಮುಖ ಆರೋಪಿ ಅಫಜಲಪುರ ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇವರೆಗೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಯನ್ನು ಮಾಡಲಾಗುತ್ತಿದೆ. ವಿಚಾರಣೆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ