ಕಲಬುರಗಿ
Death by electric shock : ವಿದ್ಯುತ್ ಶಾಕ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳ ಸಾವು
ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ (Death by electric shock) ಘಟನೆ ನಡೆದಿದೆ.
ಕಲಬುರಗಿ : ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ದುರ್ಘಟನೆ ಚಿಂಚೋಳಿ ಪಟ್ಟಣದ ಧನಗರಗಲ್ಲಿ ಬಡಾವಣೆಯಲ್ಲಿ (Death by electric shock) ಸಂಭವಿಸಿದೆ.
ಝರಣಮ್ಮ ಅಂಬಣ್ಣಾ (45), ಮಹೇಶ್ (22) ಮತ್ತು ಸುರೇಶ್ (20) ಮೃತಪಟ್ಟಿದ್ದಾರೆ. ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸರ್ವಿಸ್ ವಿದ್ಯುತ್ ವೈರ್ ಕಡಿದು ಬಿದ್ದಿತ್ತು. ನೆಲಕ್ಕೆ ಬಿದ್ದಿದ್ದ ಸರ್ವಿಸ್ ವೈರ್ ನಿಂದ ಕರೆಂಟ್ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟರು. ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ
Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು
Ram Navami 2023: ರಾಜ್ಯಾದ್ಯಂತ ಶ್ರೀರಾಮ ನವಮಿಯನ್ನು ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇತ್ತ ಕಲಬುರಗಿಯಲ್ಲಿ ಮುಸ್ಲಿಮರು ನವಮಿ ಪ್ರಯುಕ್ತ ಮಜ್ಜಿಗೆ, ಪಾನಕವನ್ನು ವಿತರಿಸಿದರು.
ಬೆಂಗಳೂರು: ನಾಡಿನೆಲ್ಲೆಡೆ ಗುರುವಾರ ಶ್ರೀರಾಮ ನವಮಿಯ (Ram Navami 2023) ಸಂಭ್ರಮ ಮನೆ ಮಾಡಿತ್ತು. ಬೆಂಗಳೂರಿನ ರಾಜಾಜಿನಗರದ ರಾಮಮಂದಿರ (Rama Mandir), ಕೋದಂಡ ರಾಮಸ್ವಾಮಿ ದೇವಾಲಯ (kodanda ramaswamy temple), ಗಾಳಿ ಆಂಜನೇಯ (Gaali Anjaneya Temple) ದೇವಾಲಯ ಸೇರಿದಂತೆ ವಿವಿಧ ದೇಗುಲದಲ್ಲಿ ವಿಶೇಷ ಪೂಜೆ ಕೈಂಕರ್ಯ ನೆರವೇರಿತು.
ರಾಜಾಜಿನಗರದ ರಾಮಮಂದಿರದಲ್ಲಿ ರಾಮನವಮಿ ಪ್ರಯುಕ್ತ ಅದ್ಧೂರಿ ರಥೋತ್ಸವದ ಮೂಲಕ ಭಕ್ತರು ರಾಮ ನಾಮಸ್ಮರಣೆ ಮಾಡಿದರು. ಶ್ರೀರಾಮ ಸೇವಾ ಮಂಡಳಿ ಆಯೋಜಿಸಿದ್ದ ರಾಮನವಮಿ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಶ್ರೀರಾಮನ ರಥ ಎಳೆದರು. ಶ್ರೀರಾಮನ ವಿಗ್ರಹಕ್ಕೆ ವಜ್ರಾಂಗಿ ತೊಡಿಸುವ ಮೂಲಕ ವಿಶೇಷ ಅಲಂಕಾರ ಮಾಡಲಾಗಿತ್ತು. ಮಂದಿರದ ಆವರಣದಲ್ಲಿ ಶ್ರೀರಾಮ, ಶ್ರೀಕೃಷ್ಣರನ್ನು ತಾಯಿಯರು ತೊಟ್ಟಿಲಲ್ಲಿ ಮಲಗಿಸಿ ತೂಗುವಂತೆ ನಿರ್ಮಿಸಿದ್ದ ವಿಗ್ರಹ ಭಕ್ತರ ಗಮನ ಸೆಳೆಯಿತು. ರಾಮನ ದರ್ಶನ ಪಡೆದ ಜನರು ರಾಮನ ಗುಣಗಾನ ಮಾಡಿದರು.
ಈ ಬಾರಿ ರಾಮನವಮಿ ಪ್ರಯುಕ್ತ ಶ್ರೀರಾಮಮಂದಿರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮ ಉತ್ಸವ ನಡೆಯಲಿದ್ದು, ಏಪ್ರಿಲ್ 9ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ದೇವಸ್ಥಾನದಲ್ಲಿ 63 ಅಡಿಯ ರಾಮ-ಲಕ್ಷ್ಮಣರ ಪ್ರತಿಮೆ ನಿರ್ಮಾಣ ಮಾಡುವುದಾಗಿ ಶ್ರೀರಾಮಮಂದಿರ ಟ್ರಸ್ಟ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.
ರಾಜಾಜಿನಗರದ ರಾಮಮಂದಿರ ಮಾತ್ರವಲ್ಲದೆ ಗಾಳಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆನಿಂದಲೇ ನೂರಾರು ಭಕ್ತರು ದೇವಸ್ಥಾನದ ಮುಂದೆ ಸಾಲುಗಟ್ಟಿ ನಿಂತಿದ್ದರು. ಚಿಕ್ಕಪೇಟೆಯ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಪಾನಕ-ಮಜ್ಜಿಗೆ ಹಾಗೂ ಅನ್ನಸಂತರ್ಪಣೆ ಮಾಡುವ ಮೂಲಕ ಶ್ರೀರಾಮನವಮಿಯನ್ನು ಆಚರಣೆ ಮಾಡಲಾಯಿತು.
ಮುಸ್ಲಿಮರಿಂದ ಮಜ್ಜಿಗೆ, ಪಾನಕ ಹಂಚಿಕೆ
ಕಲಬುರಗಿಯಲ್ಲಿ ಅದ್ಧೂರಿಯಾಗಿ ರಾಮ ನವಮಿಯನ್ನು ಆಚರಣೆ ಮಾಡಲಾಯಿತು. ರಾಮತೀರ್ಥ ದೇವಸ್ಥಾನದಿಂದ ಜಗತ್ ವೃತ್ತದವರೆಗೆ 15 ಅಡಿ ಎತ್ತರದ ರಾಮನ ಪ್ರತಿಮೆಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ವೇಳೆ ರಾಮನವಮಿ ಅಂಗವಾಗಿ ಖಾದ್ರಿ ಚೌಕ್ ಬಳಿ ಮುಸ್ಲಿಮರು ಮಜ್ಜಿಗೆ, ಪಾನಕವನ್ನು ವಿತರಣೆ ಮಾಡಿ ಭಾವೈಕ್ಯತೆ ಸಾರಿದರು.
ರಾಮಚಂದ್ರಾಪುರ ಮಠದಲ್ಲಿ ಸಂಭ್ರಮದ ರಾಮೋತ್ಸವ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ ನಡೆಸಲಾಯಿತು. ರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ರಾಘವೇಶ್ವರ ಶ್ರೀಗಳು, ರಾಮನ ಬದುಕು ನಮಗೆಲ್ಲ ಆದರ್ಶ ಹಾಗೂ ಶ್ರೀರಾಮನ ಹೆಸರೇ ನಮಗೆಲ್ಲರಿಗೂ ಸ್ಫೂರ್ತಿ ಎಂದು ಆಶೀರ್ವಚನ ನೀಡಿದರು.
ಇದನ್ನೂ ಓದಿ: Ram Navami 2023: ಹೊಸನಗರ, ಚೆನ್ನಗಿರಿ, ಹೊನ್ನಾಳಿಯಲ್ಲಿ ಸಂಭ್ರಮದ ರಾಮನವಮಿ; ರಾಮನ ಹೆಸರೇ ಸ್ಫೂರ್ತಿ ಎಂದರು ರಾಘವೇಶ್ವರ ಶ್ರೀ
ಇನ್ನು ರಾಮೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀರಾಮ ದೇವರ ಮೂರ್ತಿಯನ್ನು ತೊಟ್ಟಿಲಿನಲ್ಲಿಟ್ಟು ತೂಗಲಾಯಿತು. ಶಾಸಕ ಹರತಾಳು ಹಾಲಪ್ಪ ಸೇರಿದಂತೆ ನೂರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಕರ್ನಾಟಕ
Karnataka Election: ಕಲಬುರಗಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 35.5 ಲಕ್ಷ ರೂಪಾಯಿ ವಶಕ್ಕೆ
Karnataka Election: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೂವರನ್ನು ಪೊಲೀಸರು ವಶಕ್ಕೆ ಪಡೆದು, 35.5 ಲಕ್ಷ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ರಾಜ್ಯದ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಡಲಾಗಿತ್ತು. ವಾಹನಗಳ ತಪಾಸಣೆ ನಡೆಯುತ್ತಿದೆ.
ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ವಿವಿಧ ರೀತಿಯ ಆಮಿಷಗಳನ್ನು ರಾಜಕೀಯ ನಾಯಕರು ಒಡ್ಡುತ್ತಿದ್ದಾರೆ. ವಿವಿಧೆಡೆ ಅಕ್ರಮವಾಗಿ ಮದ್ಯ, ಹಣ ಹಾಗೂ ಇತರ ವಸ್ತುಗಳನ್ನು ಸಾಗಾಟ ಮಾಡಲಾಗುತ್ತಿದೆ. ಇಂಥವುಗಳಿಗೆ ಕಡಿವಾಣ ಹಾಕಲು ಚೆಕ್‌ಪೋಸ್ಟ್‌ಗಳಲ್ಲಿ ನಿಗಾ ಇಡಲಾಗಿದೆ. ಈ ನಡುವೆ ಗದಗ, ಕಲಬುರಗಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲಿ 35.50 ಲಕ್ಷ
ಕಲಬುರಗಿ: ಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ತೆಲಂಗಾಣದಿಂದ ಕಲಬುರಗಿಗೆ ಸಾಗಿಸುತ್ತಿದ್ದ 35,50,000 ಲಕ್ಷ ರೂ.ಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿ, ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೆಲಂಗಾಣದ ರಿಬ್ಬನಪಲ್ಲಿ ಇಂಟರ್ ಸ್ಟೇಟ್ ಚೆಕ್ ಪೊಸ್ಟ್‌ನಲ್ಲಿ ಹಣ ಸೀಜ್ ಮಾಡಲಾಗಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಪಂಚರಾಲಾ ಗ್ರಾಮದ ದೇವೇಂದ್ರ ರೆಡ್ಡಿ, ಮಲ್ಲೇಶ್ ಹಾಗೂ ದಯಾಕರ ರೆಡ್ಡಿ ಎಂಬುವವರನ್ನು ಬಂಧಿಸಲಾಗಿದೆ.
ಗದಗದಲ್ಲಿ 2.5 ಲಕ್ಷ ರೂಪಾಯಿ ಸೀಜ್
ಗದಗ: ನಗರದ ಜೆಟಿ ಕಾಲೇಜಿನ ಚೆಕ್‌ಪೋಸ್ಟ್ ಬಳಿ ಮಂಗಳವಾರ ತಡರಾತ್ರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ರೂ.ಗಳನ್ನು ಗದಗ ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಪ್ಪಳದಿಂದ ಗದಗ ಕಡೆಗೆ ಬರುತ್ತಿದ್ದ ವ್ಯಕ್ತಿಯ ಬಳಿಯಿದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದು, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಕ್ರಮ
ಕಾರವಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾದ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಜಿಲ್ಲೆಯ ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ 3 ಅಂತಾರಾಜ್ಯ, 14 ಅಂತರ ಜಿಲ್ಲಾ, 8 ಜಿಲ್ಲಾ ಚೆಕ್‌ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ಹದ್ದಿನ ಕಣ್ಣಿರಿಸಿರುವ ಪೊಲೀಸ್ ಇಲಾಖೆ, ಜಿಲ್ಲೆಯ ಒಳಪ್ರವೇಶಿಸುವ ಪ್ರತಿಯೊಂದು ವಾಹನ ತಪಾಸಣೆ ಮಾಡುತ್ತಿದೆ. ಮದ್ಯ, ಹಣ, ಚುನಾವಣಾ ಆಮಿಷಕ್ಕೆ ಒಡ್ಡುವ ವಸ್ತುಗಳ ಸಾಗಾಟ, ಅನುಮಾನಾಸ್ಪದ ವರ್ತನೆ ಕಂಡುಬಂದಲ್ಲಿ ಕೂಡಲೇ ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ | Karnataka Election: ನೀತಿ ಸಂಹಿತೆಗೆ ಮೊದಲೇ ತುಂಬಿತು ಅಕ್ರಮದ ಪಾತ್ರೆ: 2018ರ ಹಣದ ಹೊಳೆಯನ್ನು ಈಗಲೇ ಮೀರಿಸಿದ ಕರ್ನಾಟಕ !
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈ ಅಲರ್ಟ್
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಹಣ ಸಾಗಾಟ ತಡೆಗೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಗಡಿ ಚೆಕ್ ಪೋಸ್ಟ್ ಸೇರಿ ವಿವಿಧೆಡೆ ಈಗಾಗಲೇ 61 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಈಗಾಗಲೇ ನಗದು, ಸೀರೆ, ಮದ್ಯ ಸೇರಿ 2 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಿಲ್ಲೆಯಲ್ಲಿ ಜಪ್ತಿ ಮಾಡಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲು 500ಕ್ಕೂ ಅಧಿಕ ಚುನಾವಣೆ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಕರ್ನಾಟಕ
CM Basavaraja Bommai : ಕಾಂಗ್ರೆಸ್ ಪ್ರಚೋದನೆಯಿಂದ ಬಿಎಸ್‌ವೈ ಮನೆಗೆ ಕಲ್ಲು ತೂರಾಟ; ಬೊಮ್ಮಾಯಿ ಆಪಾದನೆ
ಬಿಎಸ್‌ವೈ ಅವರ ಮನೆಗೆ ಕಲ್ಲು ತೂರಾಟ ಮಾಡಿ ಸಿಕ್ಕಿಬಿದ್ದವರು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ನಾಯಕರು ಪ್ರಚೋದನೆ ನೀಡಿ ಈ ರೀತಿ ಮಾಡಿಸಿದ್ದಾರೆ ಎಂದಿದ್ದಾರೆ ಸಿಎಂ ಬೊಮ್ಮಾಯಿ.
ಕಲಬುರಗಿ: ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಗಂಭೀರ ಆರೋಪ ಮಾಡಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ರಾತ್ರೋರಾತ್ರಿ ಸಭೆ ಕರೆದು ಪ್ರಚೋದನೆ ನೀಡಿದ್ದಾರೆ ಎಂದರು.
ಬಿಎಸ್‌ವೈ ಅವರ ಮನೆಗೆ ಕಲ್ಲು ತೂರಾಟ ನಡೆಸಿರುವುದು ಬಿಜೆಪಿ ಕುತಂತ್ರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರು, ʻʻಅಲ್ಲಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕವರು ಕಾಂಗ್ರೆಸ್ ನಾಯಕರು. ಅವರು ಹಿಂದಿನ ದಿನ ಜನಾಂಗದವರನ್ನು ತಪ್ಪು ದಾರಿಗೆ ಎಳೆದು, ಎಸ್.ಸಿ. ಪಟ್ಟಿಯಿಂದ ಜನಾಂಗವನ್ನು ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದಿಸಿ, ರಾತ್ರಿ ಸಭೆ ಕರೆದು ವ್ಯವಸ್ಥಿತವಾಗಿ ಗಲಾಟೆ ಸೃಷ್ಟಿಸಿದ್ದಾರೆ. ಇದನ್ನು ನಾನು ಸಾಕ್ಷಿ ಸಮೇತವಾಗಿ ಹೇಳುತ್ತಿದ್ದೇನೆ. ಸುಳ್ಳು ಹೇಳುವುದನ್ನು ಡಿ.ಕೆ.ಶಿವಕುಮಾರ್ ಬಿಡಬೇಕು ಎಂದರು.
ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು
ʻʻಜವಳಿ ಪಾರ್ಕ್ ಬಗ್ಗೆ ಒಂದೂವರೆ ವರ್ಷಗಳಿಂದ ಮಾತನಾಡುತ್ತಿದ್ದೇವೆ. ಜವಳಿ ಪಾರ್ಕ್ ನೂತನ ಜವಳಿ ನೀತಿಯಲ್ಲಿ ಬಂದಿದ್ದು, ಪ್ರಧಾನಿಗಳು ಜವಳಿ ಮೂಲಕ ಹೆಚ್ಚಿನ ಉದ್ಯೋಗ ಮತ್ತು ರಫ್ತು ಆಗಬೇಕೆಂಬ ಹಿನ್ನೆಲೆಯಲ್ಲಿ ಆಗಿದೆ. ಕಲಬುರಗಿಗೆ ಬಂದಿರುವುದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್ ನವರಿಗೆ ಹೊಟ್ಟೆಕಿಚ್ಚು. ಅವರು ಮಾಡಲು ಸಾಧ್ಯವಾಗದೆ ಇದ್ದುದನ್ನು ನಾವು ಮಾಡಿದ್ದೇವೆ ಎಂದು. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆʼʼ ಎಂದರು.
ಎಸ್.ಟಿ. ಸೋಮಶೇಖರ್ ಹಾಗೂ ಬಿ.ಎ. ಬಸವರಾಜ ಅವರು ಚುನಾವಣೆ ಘೋಷಣೆಯಾದ ನಂತರ ವಲಸೆ ಬರಲಿದ್ದಾರೆ ಎಂದು ಚೆಲುವ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರೇ ಒಬ್ಬ ವಲಸಿಗರು, ಅವರ ಮಾತು ನಂಬಲು ಆಗುತ್ತದೆಯೇ ಎಂದರು.
ಯಾರ ಜತೆಗೂ ಹೊಂದಾಣಿಕೆ ಇಲ್ಲ
ʻʻಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅವರು ಹೇಳಿರುವುದು ಸರಿಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಂದಾಣಿಕೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆʼʼ ಎಂದರು.
ಎಸ್‌ಡಿಪಿಐ ಹೇಳಿಕೆಗಳನ್ನು ಗಮನಿಸಿ ಕಾನೂನಿನ ಕ್ರಮ
ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ʻʻಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ . ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ. ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕೆ ನಾವು ಸೊಪ್ಪು ಹಾಕುವುದಿಲ್ಲʼʼ ಎಂದು ಹೇಳಿದರು.
ಕಾಂಗ್ರೆಸ್ ದಿವಾಳಿಯಾಗಿದೆ
ಕಳೆದ 2-3 ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂದು ಇದರಿಂದಾಗಿ ಸ್ಪಷ್ಟವಾಗುತ್ತದೆ ಎಂದು ಹೇಳಿದರು ಬೊಮ್ಮಾಯಿ.
ಇದನ್ನೂ ಓದಿ : PM MITRA Park: ಕಲ್ಯಾಣ ಕರ್ನಾಟಕಕ್ಕೆ ಶಕ್ತಿ ತುಂಬಲಿದೆ ಕಲಬುರಗಿ ಮೆಗಾ ಜವಳಿ ಪಾರ್ಕ್: ಸಿಎಂ ಬೊಮ್ಮಾಯಿ
ಕರ್ನಾಟಕ
PM MITRA Park: ಕಲ್ಯಾಣ ಕರ್ನಾಟಕಕ್ಕೆ ಶಕ್ತಿ ತುಂಬಲಿದೆ ಕಲಬುರಗಿ ಮೆಗಾ ಜವಳಿ ಪಾರ್ಕ್: ಸಿಎಂ ಬೊಮ್ಮಾಯಿ
PM MITRA Park: ಕಲಬುರಗಿಯಲ್ಲಿ ಪಿಎಂ ಮಿತ್ರ ಪಾರ್ಕ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಚಾಲನೆ ನೀಡಿದ್ದಾರೆ. ಜವಳಿ ಪಾರ್ಕ್‌ಗೆ ಚಾಲನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜವಳಿ ಸಚಿವ ಪಿಯೂಷ್ ಗೋಯಲ್ ಅವರು ಶುಭ ಕೋರಿದ್ದಾರೆ.
ಕಲಬುರಗಿ: 371 ಜೆ ವಿಧಿ ಆದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿರುವ ಬಹು ದೊಡ್ಡ ಯೋಜನೆ ಮೆಗಾ ಜವಳಿ ಪಾರ್ಕ್ (PM MITRA Park) ಆಗಿದೆ. ಕಲಬುರಗಿಯಲ್ಲಿ ಪಿಎಂ ಮಿತ್ರ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಅನುಮೋದನೆ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸುವೆ. ಮುಂದಿನ 10 ವರ್ಷದಲ್ಲಿ ಉದ್ಯಮಿಗಳು ಜಿಲ್ಲೆಗೆ ಬಂದು ಹೂಡಿಕೆ ಮಾಡುತ್ತಾರೆ. ಭವಿಷ್ಯದಲ್ಲಿ ಕಲಬುರಗಿ ಹೂಡಿಕೆದಾರರ ಕೇಂದ್ರ ಸ್ಥಾನವಾಗಲಿದೆ. ಈ ಭಾಗದ ಆರ್ಥಿಕ ಪ್ರಗತಿಗೆ ಮೆಗಾ ಜವಳಿ ಪಾರ್ಕ್ ದೊಡ್ಡ ಶಕ್ತಿ ತುಂಬುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಂಗಳವಾರ ಪಿಎಂ ಮಿತ್ರ ಪಾರ್ಕ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣನ ಈ ನಾಡಿನಲ್ಲಿ ಯಾವಾಗಲೂ ನೆನಪಾಗುವುದು ಕಾಯಕವೇ ಕೈಲಾಸ ಎಂಬ ತತ್ವ. ಕಾಯಕ ಮಾಡಿ ಜೀವನ ನಡೆಸಬೇಕು ಎಂದು ಬಸವೇಶ್ವರರು ಹೇಳಿದ್ದರು. ಇವತ್ತು ನಾವು ಕಾಯಕವನ್ನು ನೀಡುವ ಕೆಲಸ ಮಾಡುತ್ತಿದ್ದೇವೆ. ಕಲಬುರಗಿಯ ಆರ್ಥಿಕತೆಗೆ ವೇಗ ನೀಡುವ ಕೆಲಸವಾಗುತ್ತಿದೆ ಎಂದು ಹೇಳಿದರು.
ಕಲಬುರಗಿಯಲ್ಲಿ ಯಾವತ್ತೋ ಜವಳಿ ಪಾರ್ಕ್ ಆಗಬೇಕಿತ್ತು ಎಂದು ಪರೋಕ್ಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಪರೋಕ್ಷವಾಗಿ ಟೀಕಿಸಿದ ಅವರು, ಖರ್ಗೆ ಅವರು ಕೇಂದ್ರ ಕಾರ್ಮಿಕ ಸಚಿವರಾಗಿದ್ದಾಗಲೂ ಈ ಭಾಗಕ್ಕೆ ಏನೂ ಮಾಡಲಿಲ್ಲ. ಈ ಭಾಗದ ಜನ ವರ್ಷದಲ್ಲಿ ನಾಲ್ಕು ತಿಂಗಳು ಮುಂಬೈ, ಹೈದರಾಬಾದ್ ವಲಸೆ ಹೋಗುತ್ತಾರೆ. ಈ ವಲಸೆ ನಿಲ್ಲಿಸುವುದೇ ಬಲು ದೊಡ್ಡ ಸವಾಲಾಗಿದೆ. ಆರ್ಥಿಕತೆಯ ಬೆಳವಣಿಗೆ ಜತೆಗೆ ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಯಾಗುವುದರಿಂದ ಲಕ್ಷಾಂತರ ಜನರ ಬದುಕು ಬದಲಾವಣೆ ಆಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | SC ST Reservation: ಪರಿಶಿಷ್ಟ ಜಾತಿ ಎಂದರೆ ಏನೆಂದು ಮೊದಲು ತಿಳಿದುಕೊಳ್ಳಿ; ಸಂವಿಧಾನದ ಪಾಠ ಮಾಡಿದ ಪಿ. ರಾಜೀವ್
ಬಿ.ಎಸ್.ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಮಾಡಿರುವುದು ಬಿಜೆಪಿ ಕುತಂತ್ರ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅದು ಕಾಂಗ್ರೆಸ್ ಕುತಂತ್ರವಾಗಿದೆ. ಪ್ರತಿಭಟನೆಯಲ್ಲಿ ಸಿಕ್ಕಿರುವ ನಾಯಕರು ಕಾಂಗ್ರೆಸ್‌ನವರೇ ಹೊರತು ಬೇರೆಯವರಲ್ಲ. ಬಂಜಾರ ಸಮುದಾಯದ ಮುಖಂಡರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆದಿದೆ. ಮೀಟಿಂಗ್ ಮಾಡಿ, ಜನರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸುಳ್ಳು ಹೇಳುವುದನ್ನು ಬಿಡಬೇಕು ಎಂದು ಕಿಡಿಕಾರಿದರು.
ಟ್ವೀಟ್ ಮಾಡಿ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ಕಳೆದ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಕುರಿತ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ನಾವು ಈ ಸಲ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ಯಾವುದೇ ಪಕ್ಷದ ಜತೆ ಹೊಂದಾಣಿಕೆ ಇಲ್ಲ ಎಂದು ಅಮಿತ್ ಶಾ ಅವರು ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದರು.
ಚುನಾವಣೆಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ಗೆ ಹೊಟ್ಟೆಕಿಚ್ಚು, ಅವರು ಮಾಡದೇ ಇರುವುದನ್ನು ನಾವು ಮಾಡಿದ್ದೇವೆ. ಇದೇ ವೇಳೆ ಕಾಂಗ್ರೆಸ್‌ನಿಂದ ವಲಸೆ ಹೋದವರು ಮತ್ತೆ ಕಾಂಗ್ರೆಸ್‌ಗೆ ಬರುತ್ತಾರೆ ಎಂಬ ಚೆಲುವ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಚೆಲುವ ನಾರಾಯಣ ಸ್ವಾಮಿಯೇ ವಲಸೆ ವ್ಯಕ್ತಿ, ಆತನ ಮಾತು ನಂಬುವುದಕ್ಕೆ ಆಗುತ್ತಾ? ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ | SC ST Reservation: ಮುಸ್ಲಿಮರು ಬೀದಿಗೆ ಇಳಿದಿದ್ದರೆ ಅಮಾಯಕರ ಬಲಿಯಾಗುತ್ತಿತ್ತು: ಬಿಜೆಪಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಇಡೀ ದೇಶದಲ್ಲಿ ಪಿಎಂ ಮೋದಿ ಏಳು ಟೆಕ್ಸ್‌ಟೈಲ್ ಪಾರ್ಕ್ ಮಂಜೂರು ಮಾಡಿದ್ದಾರೆ. ಕರ್ನಾಟಕದ ಕಲಬುರಗಿಗೆ ಸಿಎಂ ಬೊಮ್ಮಾಯಿ ಅವರು ಟೆಕ್ಸ್‌ಟೈಲ್ ಪಾರ್ಕ್ ಕೊಡುಗೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಎಂಜಿನಿಯರ್ ಉದ್ಯಮಿಯಾಗಿದ್ದರು. ಹಾಗಾಗಿ ಅವರು ಈ ಭಾಗದಲ್ಲಿ ಉದ್ಯೋಗ ಕ್ರಾಂತಿ ಮಾಡಲಿದ್ದಾರೆ. ಈ ಭಾಗದಲ್ಲಿ 31 ಲಕ್ಷ ಟನ್ ಹತ್ತಿ ಬೆಳೆಯಲಾಗುತ್ತದೆ. ಜವಳಿ ಪಾರ್ಕ್‌ನಿಂದ ಹತ್ತಿ ಬೆಳೆಗಾರರಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಇದರಿಂದ ಹೊರರಾಜ್ಯ, ವಿದೇಶಗಳಿಗೆ ಹತ್ತಿ ರಫ್ತು ಮಾಡುವುದು ತಪ್ಪಲಿದ್ದು, ಸ್ಥಳೀಯವಾಗಿ ಲಕ್ಷಕ್ಕೂ ಅಧಿಕ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.
-
ಕರ್ನಾಟಕ16 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್17 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ14 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್14 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ15 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕ್ರಿಕೆಟ್12 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ15 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ15 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!