ಕಲಬುರಗಿ: ನದಿಯಲ್ಲಿ ಸ್ನಾನ ಮಾಡುವಾಗ ಯುವತಿಯೊಬ್ಬಳು (Drowned in Water) ನೀರುಪಾಲಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಬಳಿಯ ಭೀಮಾ ನದಿಯಲ್ಲಿ ಘಟನೆ ನಡೆದಿದೆ. ಶೈಲಿ ಗೋಡೆ (23) ಮೃತ ದುರ್ದೈವಿ.
ಮಹಾರಾಷ್ಟ್ರದ ದೌಂಡ್ ತಾಲೂಕಿನ ವಂಡಅಡವಿ ಗ್ರಾಮದ ಶೈಲಿ, ಕುಟುಂಬ ಸಮೇತ ಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಆಗಮಿಸಿದ್ದರು. ದರ್ಶನಕ್ಕೂ ಮುನ್ನ ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ತೆರಳಿದ್ದರು. ಭೀಮಾ ನದಿಯ ಚಕ್ರೇಶ್ವರ ತೀರ್ಥದಲ್ಲಿ ಸ್ನಾನ ಮಾಡಲು ತೆರಳಿದ್ದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಮತ್ತು ಪೊಲೀಸರು ಭೇಟಿ ನೀಡಿ ನೀರಿನೊಳಗೆ ಇದ್ದ ಶವವನ್ನು ಹೊರಗೆ ತಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bellary News : ಪಾಲಿಕೆ ಮುಂಭಾಗದಲ್ಲೆ ಕಾರ್ಪೊರೇಟರ್‌ಗೆ ಪ್ರಜ್ಞೆ ತಪ್ಪುವಂತೆ ಥಳಿಸಿದ ಯುವಕರ ಗ್ಯಾಂಗ್!
ಕೆರೆಯಲ್ಲಿ ಕೊಳೆತ ಶವ ಪತ್ತೆ
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬಾಗಲಕೋಟೆಯ ಜಮಖಂಡಿಯ ಲಕ್ಕನ ಕೆರೆಯಲ್ಲಿ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಮಖಂಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಮೃತದೇಹ ಡಿ-ಕಂಪೂಸ್ ಆಗಿದ್ದು, ಗುರುತು ಸಿಗದಂತಾಗಿದೆ. ಹೀಗಾಗಿ ನಾಪತ್ತೆ ಪ್ರಕರಣಗಳು ದಾಖಲಾಗಿರುವ ಪೊಲೀಸ್ ಠಾಣೆಗಳಿಗೆ ಜಮಖಂಡಿ ಪೊಲೀಸರು ಮಾಹಿತಿ ರವಾನಿಸಿದ್ದಾರೆ.
ಗೂಡ್ಸ್ ವಾಹನಗಳ ಮುಖಾಮುಖಿ ಡಿಕ್ಕಿ
ಟಾಟಾ ಏಸ್ – ಮಹಿಂದ್ರಾ ಗೂಡ್ಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಾಗಲಕೋಟೆಯ ತೇರದಾಳ ಪಟ್ಟಣದ ಕಲೂತಿ ನಗರದ ಬಳಿ ಘಟನೆ ನಡೆದಿದೆ.
ಟಾಟಾ ಏಸ್ ವಾಹನವು ತೇರದಾಳದಿಂದ ರಬಕವಿ ಕಡೆ ಹೊರಟಿದ್ದರೆ, ಮಹಿಂದ್ರಾ ಗೂಡ್ಸ್ ವಾಹನ ಜಮಖಂಡಿಯಿಂದ ಹಾರೂಗೇರಿ ಕಡೆ ಹೊರಟಿತ್ತು. ಜಮಖಂಡಿ ಕಾಗವಾಡ ರಾಜ್ಯ ಹೆದ್ದಾರಿಯಲ್ಲಿ ಬರುವ ಕಲೂತಿ ನಗರದಲ್ಲಿ ಬರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕರಿಬ್ಬರಿಗೂ ಸಣ್ಣ ಪುಟ್ಟ ಗಾಯವಾಗಿದ್ದು, ತೇರದಾಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ